Janardhan Reddy | ಜನಾರ್ದನ ರೆಡ್ಡಿ ಎಂಟ್ರಿಗೆ ಗಂಗಾವತಿಯಲ್ಲಿ ಗಡಗಡ: ಹೊಸ ಪಕ್ಷಕ್ಕೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆಗಳು ಇಲ್ಲಿವೆ - Vistara News

ಕರ್ನಾಟಕ

Janardhan Reddy | ಜನಾರ್ದನ ರೆಡ್ಡಿ ಎಂಟ್ರಿಗೆ ಗಂಗಾವತಿಯಲ್ಲಿ ಗಡಗಡ: ಹೊಸ ಪಕ್ಷಕ್ಕೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆಗಳು ಇಲ್ಲಿವೆ

ಗಂಗಾವತಿಯಿಂದಲೇ ರಾಜಕೀಯ ತಂತ್ರಗಾರಿಕೆ ಆರಂಭಿಸುವುದಾಗಿ ಜನಾರ್ದನ ರೆಡ್ಡಿ ಹೇಳಿರುವುದು ಕ್ಷೇತ್ರದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ರಾಜ್ಯದ ವಿವಿಧೆಡೆ ಬಿಜೆಪಿ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

varous leaders reactions regarding janardhan-reddy-new party
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ತಮ್ಮ ರಾಜಕೀಯ ಎರಡನೇ ಇನಿಂಗ್ಸ್ ಗಂಗಾವತಿಯಿಂದಲೇ ಆರಂಭಿಸಲು ಸಜ್ಜಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾನುವಾರ ತಮ್ಮ ಹೊಸ ಪಕ್ಷ ʼಕಲ್ಯಾಣ ರಾಜ್ಯ ಪ್ರಗತಿ ಪಕ್ಷʼ ಘೋಷಣೆ ಮಾಡಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೂಲಕ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ರೆಡ್ಡಿ ಘೋಷಣೆ ಮಾಡಿರುವುದು ಗಂಗಾವತಿ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದೆ. ರೆಡ್ಡಿ ರಾಜಕೀಯ ಎಂಟ್ರಿಯಿಂದ ಗಂಗಾವತಿ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾದಂತಾಗಿದೆ.

ಸಕ್ರಿಯ ರಾಜಕಾರಣಕ್ಕೆ ಮರಳುವ ಉದ್ದೇಶದೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯನ್ನು ಆಯ್ಕೆ ಮಾಡಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಗಂಗಾವತಿಯಲ್ಲಿಯೇ ಮನೆ ಮಾಡುವ ಮೂಲಕ ಸ್ಥಳೀಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.

ತಮ್ಮ ರಾಜಕೀಯ ನಿಲುವಿನ ಬಗ್ಗೆ ಕುತೂಹಲ ಹುಟ್ಟು ಹಾಕಿ ಇಂದು ತಮ್ಮ ಮನದ ಇಂಗಿತವನ್ನು ಬೆಂಗಳೂರಿನಲ್ಲಿ ಸುದೀರ್ಘ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಹೊಸ ಪಕ್ಷದ ಘೋಷಣೆಯ ಜೊತೆಗೆ ಗಂಗಾವತಿಯಿಂದಲೇ ಸ್ಪರ್ಧೆ ಮಾಡುವುದಾಗಿ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ತಮ್ಮ ಪತ್ನಿಯೂ ಸಾರ್ವಜನಿಕ ಬದುಕಿಗೆ ಬರುವ ಸುಳಿವನ್ನೂ ಸಹ ರೆಡ್ಡಿ ನೀಡಿದ್ದಾರೆ.

ಇನ್ನು ಜನಾರ್ದನ ರೆಡ್ಡಿ ಗಂಗಾವತಿಯಲ್ಲಿ ಮನೆ ಮಾಡಿದಾಗಲೇ ಗಂಗಾವತಿ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿತ್ತು. ಅದರಲ್ಲೂ ಸ್ಥಳೀಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ತಳಮಳ‌ ಶುರುವಾಗಿತ್ತು. ಈಗ ರೆಡ್ಡಿ ಹೊಸ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ್ದರಿಂದ, ತಮಗೆ ಟಿಕೆಟ್‌ ಕೈತಪ್ಪುವುದಿಲ್ಲ ಎಂದು ಪರಣ್ಣ ಮುನವಳ್ಳಿ ಕೊಂಚ ನಿರಾಳರಾದಂತಾಗಿದೆ. ಆದರೆ ಮತ್ತೊಬ್ಬ ಪ್ರಬಲ ಅಭ್ಯರ್ಥಿ ಕಣಕ್ಕಿಳಿಯುವದರಿಂದ ಗಂಗಾವತಿ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಡಲಿದೆ. ಜನಾರ್ದನರೆಡ್ಡಿ ಗಂಗಾವತಿಯಿಂದ ಸ್ಪರ್ಧೆ ಮಾಡುವ ಕುರಿತು ಘೋಷಣೆ ಹಿನ್ನೆಲೆಯಲ್ಲಿ ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಅವರು ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ನಾನಂತೂ ಬಿಜೆಪಿಯ ಅಭ್ಯರ್ಥಿ ಎಂದಷ್ಟೆ ಹೇಳಿದ್ದಾರೆ.

ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿತ್ತು. ಈಗ ಜನಾರ್ದನರೆಡ್ಡಿ ತಮ್ಮ ಹೊಸ ಪಕ್ಷದೊಂದಿಗೆ ಎಂಟ್ರಿ ಕೊಡುತ್ತಿರುವುದರಿಂದ ಹೈವೋಲ್ಟೇಜ್ ಜೊತೆಗೆ ತ್ರಿಕೋನ ಸ್ಪರ್ಧೆಗೆ ಅಖಾಡ ರೆಡಿಯಾದಂತಾಗಿದೆ.

ಈ ಕುರಿತು ಶಾಸಕ ಪರಣ್ಣ ಮುನವಳ್ಳಿ ಪ್ರತಿಕ್ರಿಯಿಸಿ, ಪಕ್ಷ‌ ಕಟ್ಟುವುದು ಅವರ ವೈಯಕ್ತಿಕ ವಿಷಯ, ಅದು ನಮಗೆ ಸಂಬಂಧವಿಲ್ಲದ ವಿಷಯ. ನಾನಂತೂ ಎರಡು ಬಾರಿ ಶಾಸಕನಾಗಿದ್ದೇನೆ. ಈ ಬಾರಿಯೂ ಬಿಜೆಪಿ ಟಿಕೇಟ್‌ನ ಪ್ರಬಲ ಆಕಾಂಕ್ಷಿ. ಈ ಕುರಿತು ಹೈಕಮಾಂಡ್ ಡಿಸೈಡ್ ಮಾಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕುರಿತು ನಾನು ಏನೂ ಮಾತನಾಡೋದಿಲ್ಲ. ನಮ್ಮ ಪಕ್ಷದ ಅನೇಕ ಹಿರಿಯರಿದ್ದಾರೆ. ಈ ಬಗ್ಗೆ ಏನು ಹೇಳಬೇಕೋ ಅವರು ಹೇಳುತ್ತಾರೆ. ಗಂಗಾವತಿಯಲ್ಲಿ ಅವರು ಚುನಾವಣೆಗೆ ಸ್ಪರ್ಧಿಸುವುದು ಅವರ ಸ್ವಾತಂತ್ರ್ಯ. ಬೇಡ ಎನ್ನುವುದಕ್ಕೆ ನಾವು ಯಾರು ಎಂದಿದ್ದಾರೆ.

ವಿವಿಧ ನಾಯಕರ ಪ್ರತಿಕ್ರಿಯೆ

ಬಳ್ಳಾರಿಯಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಶ್ರೀರಾಮುಲು, ನಾನು ಅವರ ಜತೆಗೆ ಒಂದು ದೊಡ್ಡ ಶಕ್ತಿಯಾಗಿ ಬಂಡೆ ರೀತಿ ನಿಂತಿದ್ದೇನೆ. ಸ್ನೇಹವೇ ಬೇರೆ, ರಾಜಕಾರಣವೇ ಬೇರೆ. ಅವರು ಶಕ್ತಿವಂತರಲ್ಲ ಎಂದು ನಾನು ಎಂದಿಗೂ ಹೇಳಿಲ್ಲ. ಅವರು ಈ ಭಾಗದ ನೆಚ್ಚಿನ ನಾಯಕರು. ಅವರು ಬಿಜೆಪಿಗೂ ಒಂದು ಶಕ್ತಿಯಾಗಿದ್ದರು. ಇಂದು ಅವರದ್ದೇ ಬೇರೆ ಪಕ್ಷವಾಗಿರುವ ಸಂದರ್ಭದಲ್ಲಿ ನಮ್ಮ ಸಿದ್ಧಾಂತದಲ್ಲಿ ಮುಂದುವರಿಯುತ್ತೇವೆ ಎಂದಿದ್ದಾರೆ.

ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಪ್ರತ್ಯೇಕವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಯಾವುದೇ ಪ್ರಾದೇಶಿಕ ಪಕ್ಷ ರಾಜ್ಯದಲ್ಲಿ ಯಶಸ್ಸು ಕಂಡಿಲ್ಲ. ಜನಾರ್ದನ ರೆಡ್ಡಿ ಪಕ್ಷ ಕಟ್ಟಿರುವ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಇದರ ಬಗ್ಗೆ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ ಎಂದರು. ಜನಾರ್ದನ ರೆಡ್ಡಿ ಅವರ ಮನವೊಲಿಕೆಯಲ್ಲಿ ಬಿಜೆಪಿ ವಿಫಲವಾಯಿತೇ ಎಂಬ ವಿಚಾರದ ಕುರಿತು ಪ್ರತಿಕ್ರಿಯೆಗೆ ನಿರಾಕರಣೆ ಮಾಡಿದರು. ನಾನು ಎಲ್ಲವನ್ನೂ ತಿಳಿದುಕೊಂಡೇ ಮಾತನಾಡುತ್ತೇನೆ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಯಶಸ್ಸು ಕಂಡಿಲ್ಲ ಅಂತಷ್ಟೆ ಎಂದು ಪುನರುಚ್ಚರಿಸಿದರು.

ಯಾರು ಯಾರ ಬಿ ಟೀಮ್‌, ಎ ಟೀಮ್‌ ಎನ್ನುವುದನ್ನು ಮುಂದೆ ಜನ ತಿರ್ಮಾನ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪಾರ್ಟಿ ಕಟ್ಟಲು ‌ಚುನಾವಣೆ‌ ಮಾಡಲು ಎಲ್ಲರಿಗೂ ಅಧಿಕಾರ ಇದೆ. ನಮ್ಮ‌ ಚುನಾವಣೆ ಕಾನೂನಿನಲ್ಲಿ 25 ವರ್ಷ ಆಗಿರಬೇಕು, ಭಾರತೀಯ ಆಗಿರಬೇಕು ಹಾಗೂ ಆತ ಹುಚ್ಚ‌ ಇರಬಾರದು ಎಂದು ಇದೆ. ಯಾರು ಬೇಕಾದರೂ ಚುನಾವಣೆಗೆ‌ ನಿಲ್ಲಬಹುದು. ಬಿಜೆಪಿ ಸೈದ್ಧಾಂತಿಕ ಆಧಾರದ ಪಕ್ಷ. ಈ ವಿಷಯವಾಗಿ ಸಿಎಂ ಆಗಲಿ ರಾಜ್ಯಾಧ್ಯಕ್ಷರಾಗಲಿ ಚರ್ಚೆ ಮಾಡಲು ಸಿಕ್ಕಿಲ್ಲ. ನಾನು ನಂತರ ಅವರ ಜತೆ ಮಾತನಾಡುತ್ತೇನೆ. ಸಿಎಂ ನಾಳೆ ದೆಹಲಿಗೆ ಬರಲಿದ್ದಾರೆ, ದೆಹಲಿಯಲ್ಲಿ ನಾನು ಸಿಗುತ್ತೇನೆ ಎಂದರು.

ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಮುನಿರತ್ನ, ಯಾವ ಪಕ್ಷ ಕಟ್ಟಿದ್ದಾರೋ ಗೊತ್ತಿಲ್ಲ.…ಹೊಸ ಪಕ್ಷದಿಂದ ಬಿಜೆಪಿಗೆ ಯಾವುದೇ ದಕ್ಕೆ ಆಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಹೊಸ ಪಕ್ಷದಿಂದ ನಮಗೇನೂ ತೊಂದರೆ ಇಲ್ಲ ಎಂದು ಹೇಳಿದರು.

ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ

ದಾವಣಗೆರೆಯಲ್ಲಿ ಮಾತನಾಡಿದ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆಯ ಬಗ್ಗೆ ಅವರೇ ಆತ್ಮವಲೋಕನ ಮಾಡಿಕೊಳ್ಳಬೇಕು. ಇದರಿಂದ ಅವರ ವರ್ಚಸಿಗೇ ದಕ್ಕೆ ಬರುತ್ತದೆ. ಬಿಜೆಪಿ ಜನಾರ್ಧನ ರೆಡ್ಡಿಗೆ ಎಲ್ಲವನ್ನೂ ನೀಡಿದೆ. ರೆಡ್ಡಿ ಅವರನ್ನು ಉಳಿಸಿಕೊಳ್ಳುತ್ತೇವೆ ಎಂದು ಶ್ರೀರಾಮುಲು ಹೇಳಿದ್ದರು. ಯಡಿಯೂರಪ್ಪ ಕೂಡ ರೆಡ್ಡಿ ಜತೆ ಮಾತನಾಡಿದ್ದಾರೆ. ಆದರೆ, ಜನಾರ್ದನ ರೆಡ್ಡಿ ಯಾವುದೋ ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದರಿಂದ ಬಿಜೆಪಿಗೆ ಯಾವುದೇ ನಷ್ಟ ಇಲ್ಲ. ಬಿಜೆಪಿ ರಾಜ್ಯದಲ್ಲಿ ಸದೃಢವಾಗಿದೆ ಎಂದರು.

ಕೊಪ್ಪಳದಲ್ಲಿ ಮಾತನಾಡಿದ ಸಂಸದ ಸಂಗಣ್ಣ ಕರಡಿ, ಈ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಅವರು ಹೊಸ ಪಕ್ಷ ರಚನೆ ಮಾಡಿದ್ದಾರೆ ಎಂದರೆ ಅವರ ಉದ್ದೇಶ ಏನಿದೆ? ಗುರಿ ಏನಿದೆಯೋ ಅದಕ್ಕೆ ತಕ್ಕಂತೆ ಮಾಡಿರಬಹುದು. ಹೊಸ ಪಕ್ಷದ ಬಗ್ಗೆ ಈಗಲೇ ಏನೂ ಪರಿಣಾಮವಾಗುತ್ತದೆ ಎಂದು ಹೇಳಲಿಕ್ಕೆ ಆಗುವುದಿಲ್ಲ. ಹೊಸ ಪಕ್ಷಗಳು ಉದಯವಾಗುವುದು ಸಹಜ. ಪಕ್ಷ ಸ್ಥಾಪನೆಗೆ ಅವರಿಗೆ ಸ್ವಾತಂತ್ರ್ಯವಿದೆ. ಹೊಸ ಪಕ್ಷದಿಂದ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲವಾಗುತ್ತದೆ ಎಂದು ಹೇಳಲಿಕ್ಕೆ ಆಗುವುದಿಲ್ಲ. ಮುಂದೆ ನೇರ ಹಣಾಹಣಿಯೋ, ತ್ರಿಕೋನ ಸ್ಪರ್ಧೆ ಏರ್ಪಡುತ್ತದೆಯೋ ಎಂದು ಈಗಲೇ ಹೇಳಲು ಆಗುವುದಿಲ್ಲ. ಅವರು ನನ್ನನ್ನು ಸಂಪರ್ಕಿಸಿಲ್ಲ. ನಾನು ಬಿಜೆಪಿಯಲ್ಲಿ ಹ್ಯಾಪಿಯಾಗಿರುವೆ. ಹೊಸ ಪಕ್ಷದ ಬಗ್ಗೆ ನಾವು ಏನಾದರೂ ಈಗ ರಿಯಾಕ್ಟ್ ಮಾಡಿದರೆ ಹೊಸ ಪಕ್ಷ ಕಟ್ಟಿದವರಿಗೆ ಹರ್ಟ್ ಆಗಬಹುದು. ಹೀಗಾಗಿ ಆ ಬಗ್ಗೆ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಕಾಲವೇ ನಿರ್ಣಯಿಸುತ್ತದೆ

ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಪ್ರಜಾಪ್ರಭುತ್ವದಲ್ಲಿ ಪಕ್ಷ ಕಟ್ಟಲು ಹಾಗೂ ಚುನಾವಣೆ ಸ್ಪರ್ಧಿಸಲು ಅವಕಾಶ ಇದೆ. ಇದರಲ್ಲಿ ಮತದಾರರೇ ಪ್ರಭುಗಳು. ಅವರು ಯಾರಿಗೆ ಆಶೀರ್ವಾದ ಮಾಡುತ್ತಾರೆಯೋ ನೋಡೋಣ. ಕೆಲವನ್ನು ಇವತ್ತೇ ಜಡ್ಜ್‌ಮೆಂಟ್ ಕೊಡಲು ಬರುವುದಿಲ್ಲ. ಕಾಲ ಕೆಲವನ್ನು ನಿರ್ಣಯ ಮಾಡುತ್ತದೆ. ಕಾಲವನ್ನು ನಾವೆಲ್ಲ ಕಾದು ನೋಡಬೇಕಾಗುತ್ತದೆ. ನಾನು ಅವರನ್ನು ವೈಯಕ್ತಿಕ ವಿಷಯದಲ್ಲಿ ಭೇಟಿಯಾಗಿಲ್ಲ. ಯಾರು ಬೇಕಾದರೂ ಸ್ಪರ್ದೆ ಮಾಡಲು ಅವಕಾಶ ಇದೆ ಎಂದರು.

ಮಂಡ್ಯ ಜಿಲ್ಲೆ ಕೆ. ಆರ್. ಪೇಟೆ ತಾಲೂಕಿನ ನಾಟನಹಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಹೊಸ ಪಕ್ಷ ಘೋಷಣೆ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಬೇರೆ ಪಕ್ಷ ಮಾಡಬಹುದು ಎಂದು ಎಲ್ಲರೂ ನಿರೀಕ್ಷೆ ಇಟ್ಟಿದ್ದರು. ಅವರು ಬೇರೆ ಪಕ್ಷ ಮಾಡುವ ಬೆಳವಣಿಗೆ ಏನ್ ಆಗುತ್ತದೆ ಎನ್ನುವುದನ್ನು ನೋಡೋಣ ಎಂದರು.

ವಿಜಯನಗರದಲ್ಲಿ ಮಾತನಾಡಿದ ವಿಜಯನಗರ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸನೌಡ, ಜನಾರ್ದನ ರೆಡ್ಡಿ ಪಕ್ಷ ಘೋಷಣೆಯಿಂದ ಬಿಜೆಪಿ ಲಾಸ್ ಆಗುವುದಿಲ್ಲ. ನಮ್ಮ ಕಾರ್ಯಕರ್ತರು ಬಿಜೆಪಿ ಬಿಟ್ಟು ಹೋಗುವುದಿಲ್ಲ. ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳೂ ಇವೆ, ಅದರಂತೆ ಇದೂ ಒಂದು. ಬಿಜೆಪಿಗೆ ಕಾರ್ಯಕರ್ತರು ಇದ್ದಾರೆ. ಕೇಂದ್ರದಲ್ಲಿ, ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಉತ್ತಮ ಆಡಳಿತ ಕೊಟ್ಟಿರುವುದು ರಾಜ್ಯದ ಜನಕ್ಕೆ ಗೊತ್ತಿದೆ. ಹೊಸ ರಾಜಕೀಯ ಪಕ್ಷದಿಂದ ರಾಜ್ಯ ಅಭಿವೃದ್ಧಿ ಆಗಲು ಸಾಧ್ಯ ಇಲ್ಲ. ಬಿಜೆಪಿ ಉತ್ತಮ ನಾಯಕರನ್ನು ಹೊಂದಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಬಿಜೆಪಿ ಹೊಂದಿದೆ ಎಂದರು.

ಇದನ್ನೂ ಓದಿ | Janardhan Reddy | ಬಿಜೆಪಿಗೆ ನಷ್ಟ, ಕಾಂಗ್ರೆಸ್ ಲಾಭದ ಲೆಕ್ಕ; ಟಿಕೆಟ್ ವಂಚಿತರಿಗೆ ವೇದಿಕೆಯಾಗಲಿದೆಯೇ ಹೊಸ ಪಕ್ಷ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest6 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest6 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest6 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest8 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest9 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest11 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest11 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest12 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest1 day ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌