Site icon Vistara News

CM Siddaramaiah: ವೀಣಾ ಕಾಶಪ್ಪನವರ್‌ಗೆ ರಾಜಕೀಯದಲ್ಲಿ ಒಳ್ಳೆ ಭವಿಷ್ಯವಿದೆ: ಸಿದ್ದರಾಮಯ್ಯ

Siddaramaiah

ಬಾಗಲಕೋಟೆ: ಗ್ರಾಮೀಣ ಮಕ್ಕಳೂ ಕೆಎಎಸ್- ಪಿಎಸ್‌ಐ ಪರೀಕ್ಷೆಯಲ್ಲಿ ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗುತ್ತಿದ್ದು, ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆ ತರಬೇತಿ ಕೇಂದ್ರ ಮತ್ತು ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉನ್ನತ ಹುದ್ದೆ ಪಡೆಯಲು ಪಾಸಾಗಲು ವೀಣಾ ಕಾಶಪ್ಪನವರ್ ಫೌಂಡೇಶನ್ ನೆರವಾಗಲಿದೆ. ಈಗ 200 ಅಭ್ಯರ್ಥಿಗಳಿಂದ ಆರಂಭವಾಗಿ 1500 ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಫೌಂಡೇಶನ್ ನೆರವಾಗಲಿದೆ ಎಂದು ತಿಳಿಸಿದರು.

ಸಾವಿರಾರು ವಿದ್ಯಾರ್ಥಿಗಳ ಕೆಎಎಸ್- ಪಿಎಸ್‌ಐ ಆಗುವ ಕನಸನ್ನು ನನಸು ಮಾಡುವ ಮೂಲಕ ಸಮಾಜದ ಋಣ ತೀರಿಸುವ ಕೆಲಸದಲ್ಲಿ ಕಾಶಪ್ಪನವರ್ ದಂಪತಿ ತೊಡಗಿದ್ದಾರೆ. ಇವರಿಗೆ ನಿಮ್ಮ ಆಶೀರ್ವಾದ ಇರಲಿ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿ ಜಿಲ್ಲೆ ನೆನಪಿಡುವ ಕೆಲಸಗಳನ್ನು ವೀಣಾ ಅವರು ಮಾಡಿದ್ದಾರೆ. ಇವರ ಸಮಾಜಮುಖಿ ಕೆಲಸಗಳು ಈ KAS ಅಕಾಡೆಮಿ ಮೂಲಕ ಇನ್ನಷ್ಟು ವಿಸ್ತಾರವಾಗುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ | Caste Census : ಜಾತಿ ಗಣತಿ ವರದಿ ಅವೈಜ್ಞಾನಿಕ ಅನ್ನೋದು ತಪ್ಪೆಂದ ಕಾಂತರಾಜು! ಬಿಜೆಪಿ ಮೇಲೆ ಕೆಂಡ

ವೀಣಾ ಎದುರೇ ಪತಿ ವಿಜಯಾನಂದ ಕಾಲೆಳೆದ ಸಿದ್ದು | CM Siddaramaiah Talk About Vijayananda kashappanavar

ಪ್ರತಿಭೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಈ ಪ್ರತಿಭೆಗೆ ಅವಕಾಶಗಳು ಬೇಕು. ಆ ಅವಕಾಶವನ್ನು ಸೃಷ್ಟಿಸುವ ಕೆಲಸವನ್ನು ವೀಣಾ ಕಾಶಪ್ಪ ದಂಪತಿ ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದರು.

ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ‌ ಶ್ರೀಗಳು, ಯಲ್ಲಾಲಿಂಗ ಶ್ರೀಮಠದ ಡಾ.ಮುರುಘರಾಜೇಂದ್ರ ಶ್ರೀಗಳು, ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕೂಡಲಸಂಗಮ‌ ಪಂಚಮಸಾಲಿ ಜಗದ್ಗುರು ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು, ವಿಜಯಪುರ ಗಾಣಿಗರ ಗುರುಪೀಠದ ಡಾ.ಜಯಬಸವ ಶ್ರೀಗಳು, ಇಳಕಲ್ಲ ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಶ್ರೀಗಳು, ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಚಿತ್ತಾಪುರ ಉಪ್ಪಾರ ಮಠದ ಭಗೀರಥಾನಂದಪುರಿ ಮಹಾಸ್ವಾಮಿಗಳು, ಸಜ್ಜಾದೇ ನಶೀನ ಇಳಕಲ್‌ನ ಹಜರತ್ ಸೈಯದ್ ಫೈಸಲ್ ಪಾಶಾ ಸಾಹೇಬರು, ಬಿಲ್ವಾಶ್ರಮ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ನಿರಂತರ ದಾಸೋಹ ಮಠ ಸಿದ್ದನಕೊಳ್ಳದ ಶಿವಕುಮಾರ ಶ್ರೀಗಳು, ಬಂಜಾರ ಶಕ್ತಿಪೀಠದ ಕುಮಾರ ಮಹಾರಾಜರು ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಚ್.ವಾಯ್.ಮೇಟಿ ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಹುನಗುಂದ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ್ ಸೇರಿ ಹಲವಾರು ಸಚಿವರು ಮತ್ತು ಶಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ | Caste Census : ಜಾತಿ ಗಣತಿ ವರದಿ ಬಗ್ಗೆ ಊಹೆ ಮಾಡ್ಬೇಡಿ, ನಾವೇಕೆ ಸಮಾಜ ಒಡೆಯುತ್ತೇವೆ? ಸಿಎಂ ಖಡಕ್‌ ಪ್ರಶ್ನೆ

ಮುಂದಿನ ವರ್ಷ 58 ಸಾವಿರ ಕೋಟಿ ರೂ.ಗಳನ್ನು ಜನರ ಜೇಬಿಗೆ ಹಾಕುತ್ತೇವೆ

ಬಡವರಿಗೆ ಜಾತಿ-ಧರ್ಮ ಎನ್ನುವುದು ಇಲ್ಲ. ಎಲ್ಲಾ ಜಾತಿ ಧರ್ಮದ ಬಡವರ, ಮಧ್ಯಮವರ್ಗದವರ ಸಂಕಟಗಳೂ ಒಂದೇ ಆಗಿವೆ. ಹೀಗಾಗಿ ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮವರ್ಗದವರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಗ್ಯಾರಂಟಿ ಯೋಜನೆಗಳ ಮೂಲಕ ಈ ವರ್ಷ 38 ಸಾವಿರ ಕೋಟಿ ರೂ.ಗಳನ್ನ ಕನ್ನಡ ಜನತೆಯ ಜೇಬಿಗೆ ಹಾಕುವ ಕೆಲಸ ಮಾಡಿದ್ದೇವೆ. ಮುಂದಿನ ವರ್ಷ ಕನ್ನಡ ನಾಡಿನ ಜನತೆಯ ಜೇಬಿಗೆ 58 ಸಾವಿರ ಕೋಟಿ ರೂ.ಗಳನ್ನು ಹಾಕುತ್ತೇವೆ. ವಿರೋಧಿಗಳ ಟೀಕೆಗೆ ಡೋಂಟ್ ಕೇರ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version