ಬೆಂಗಳೂರು: ಒಬ್ಬ ರಾಷ್ಟ್ರಭಕ್ತನನ್ನು ಅಪಮಾನಿಸಲು ಮತ್ತೊಬ್ಬ ರಾಷ್ಟ್ರಭಕ್ತನ ಭಾವಚಿತ್ರವನ್ನು ಗುರಾಣಿಯಂತೆ ಬಳಸಿಕೊಂಡು ಯಲಹಂಕದ ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ (Veer Savarkar flyover) ಎನ್.ಎಸ್.ಯು.ಐ ಕಿಡಿಗೇಡಿಗಳು ಮಸಿಬಳಿದು ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಅತ್ಯಂತ ಖಂಡನೀಯ. ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್ ಸರ್ಕಾರದ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದುರ್ದೈವವಾಗಿದೆ. ಸಾರ್ವಕರ್ ಅವರನ್ನು ಅಪಮಾನಿಸುವ ಸಂದರ್ಭದಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರದರ್ಶಿಸಿರುವ ಕಿಡಿಗೇಡಿಗಳು ಇಬ್ಬರೂ ರಾಷ್ಟ್ರಭಕ್ತರನ್ನು ಏಕಕಾಲದಲ್ಲಿ ಅಪಮಾನಿಸಿದ್ದಾರೆ. ಈ ಕೂಡಲೇ ವೀರ ಸಾವರ್ಕರ್ ಅವರನ್ನು ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಒಬ್ಬ ರಾಷ್ಟ್ರಭಕ್ತನನ್ನು ಅಪಮಾನಿಸಲು ಮತ್ತೊಬ್ಬ ರಾಷ್ಟ್ರಭಕ್ತನ ಭಾವಚಿತ್ರವನ್ನು ಗುರಾಣಿಯಂತೆ ಬಳಸಿಕೊಂಡು ಯಲಹಂಕದ ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಎನ್.ಎಸ್.ಯು.ಐ ಕಿಡಿಗೇಡಿಗಳು ಮಸಿಬಳಿದು ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಅತ್ಯಂತ ಖಂಡನೀಯ. ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ @INCKarnataka… pic.twitter.com/MycTMw2EvE
— Vijayendra Yediyurappa (Modi Ka Parivar) (@BYVijayendra) May 28, 2024
ಏನಿದು ಪ್ರಕರಣ?
ಬೆಂಗಳೂರಿನ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಂಗಳವಾರ ಮಧ್ಯಾಹ್ನ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿದ್ದರು. ಸಂಚಾರ ತಡೆ ನಡೆಸಿ ನಾಮಫಲಕಕ್ಕೆ ಮಸಿ ಬಳಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ | Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!
ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದಿದ್ದ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದರು. ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ನಡುವೆ ಕಿತ್ತಾಟ ನಡೆದಿತ್ತು. ನಂತರ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಯಲಹಂಕದಲ್ಲಿ ಪ್ರತಿಭಟನೆ ನಡೆಸಿದ್ದರು.