ಕಾರವಾರ: ಮೀನಿನ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ (Road accident) ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಟ್ಕಳ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮುಟ್ಟಳ್ಳಿ ಬೈಪಾಸ್ ಬಳಿ ನಡೆದಿದೆ.
ಮೃತ ಬೈಕ್ ಸವಾರರನ್ನು ಲೋಕೇಶ ನಾಯ್ಕ ಮತ್ತು ಶೇಖರ ನಾಯ್ಕ ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಭಟ್ಕಳದತ್ತ ಆಗಮಿಸುತ್ತಿದ್ದು ಈ ವೇಳೆ ಅತೀ ವೇಗವಾಗಿ ನಿರ್ಲಕ್ಷ್ಯತನದಿಂದ ಮೀನು ಲಾರಿ ಚಲಾಯಿಸಿಕೊಂಡು ಬಂದ ಚಾಲಕ ರವಿ ಭೋವಿ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೇ ಲಾರಿ ನಿಯಂತ್ರಿಸಲಾಗದೇ ಮುಂದೆ ತೆರಳಿ ಪಲ್ಟಿಯಾಗಿದ್ದು ಲಾರಿ ಜಖಂಗೊಂಡಿದೆ.
ಅಪಘಾತದ ರಭಸಕ್ಕೆ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಆಸ್ಪತ್ರೆಗೆ ದಾಖಲಿಸಲು ಉಡುಪಿಯತ್ತ ತೆರಳುತ್ತಿರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರು ಫೈನಾನ್ಸ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದವರು ಎನ್ನಲಾಗಿದ್ದು ಲಾರಿ ಚಾಲಕನ ನಿರ್ಲಕ್ಷ್ಯತನದಿಂದಾಗಿ ಸಾವನ್ನಪ್ಪುವಂತಾಗಿದೆ. ರಾಷ್ಟ್ರೀಯ ಹೆದ್ದಾರಿಯ ಮುಟ್ಟಳ್ಳಿ ಬೈಪಾಸ್ ಬಳಿ ಪದೇಪದೆ ಈ ರೀತಿ ಅಪಘಾತಗಳು ಸಂಭವಿಸುತ್ತಿದ್ದು ಐಆರ್ಬಿ ಕಂಪೆನಿಯ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯೇ ಇದಕ್ಕೆ ಕಾರಣ ಅಂತಾ ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೀನು ಲಾರಿ ಚಾಲಕ ರವಿ ಭೋವಿ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Road accident | ತುಮಕೂರಿನಲ್ಲಿ ಅಪಘಾತಗಳ ಸರಮಾಲೆ: 24 ಗಂಟೆ ಅವಧಿಯಲ್ಲಿ ಒಂಬತ್ತು ಮಂದಿ ಬಲಿ