Site icon Vistara News

Verdict | 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನಿಗೆ 7 ವರ್ಷ ಜೈಲು; ಸಂತ್ರಸ್ತೆಗೆ 1.15 ಲಕ್ಷ ಪರಿಹಾರ

court judgement

ತುಮಕೂರು: ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ವ್ಯಕ್ತಿಗೆ ೭ ವರ್ಷ ಜೈಲು ಶಿಕ್ಷೆ ಹಾಗೂ ೧ ಲಕ್ಷ ರೂಪಾಯಿ ದಂಡವಿಧಿಸಿ ಜಿಲ್ಲಾ ಸತ್ರ ನ್ಯಾಯಾಲಯವು ತೀರ್ಪು (Verdict) ವಿಧಿಸಿದೆ.

2019ರಲ್ಲಿ ತುಮಕೂರಿನ ಈದ್ಗ ಮೊಹಲ್ಲಾ ನಿವಾಸಿ ೫೨ ವರ್ಷದ ನಸರುಲ್ಲಾ ಖಾನ್ ಎಂಬಾತ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗಿದ್ದ. ಈ ಸಂಬಂಧ ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಕೈಗೊಂಡು ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಲಯವು, ನಸರುಲ್ಲಾ ಖಾನ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ೭ ವರ್ಷ ಜೈಲು ಶಿಕ್ಷೆ ವಿಧಿಸಿ, ೧ ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಸಂತ್ರಸ್ತ ಬಾಲಕಿಗೆ 1,15,000 ರೂಪಾಯಿ ಪರಿಹಾರ ನೀಡಿಯೂ ಆದೇಶವನ್ನು ಹೊರಡಿಸಿದೆ.

ಜಿಲ್ಲಾ ಸತ್ರ ನ್ಯಾಯಾಲಯದ ಎಫ್.ಟಿ.ಎಸ್.ಸಿ ಪೋಕ್ಸೊ ವಿಭಾಗದಲ್ಲಿ ವಿಚಾರಣೆ ನಡೆದಿತ್ತು. ನೊಂದ ಬಾಲಕಿ ಪರ ವಿಶೇಷ ಸರ್ಕಾರಿ ಅಭಿಯೋಜಕಿ ಆಶಾ.ಕೆ.ಎಸ್. ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಂಧ್ಯಾ ರಾವ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Verdict | ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

Exit mobile version