Site icon Vistara News

Verdict | ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

court judgement

ಗದಗ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ೨೦ ವರ್ಷ ಕಠಿಣ ಶಿಕ್ಷೆ ಹಾಗೂ ೧೦ ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು (Verdict) ನೀಡಿದೆ.

ಗದಗ ಜಿಲ್ಲೆ ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಮೇ 19ರಂದು ೪೦ ವರ್ಷದ ವ್ಯಕ್ತಿಯಿಂದ ೧೧ ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯ ಜಾಡುಹಿಡಿದು ಬಂಧಿಸಿದ್ದರು. ಬಳಿಕ ವಿಚಾರಣೆ ನಡೆಸಿ ಆರೋಪಿ ತಪ್ಪೊಪ್ಪಿಕೊಂಡಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿತ್ತು.

ಏನಿದು ಪ್ರಕರಣ?

ಮನೆ ಮುಂದೆ ಆಟ ಆಡುತ್ತಿದ್ದ ೧೧ ವರ್ಷದ ಬಾಲಕಿಯನ್ನು ಪಾಪಿ ವ್ಯಕ್ತಿಯು ಧಾರಾವಾಹಿ ನೋಡಲು ಬಾ ಎಂದು ಮನೆಯೊಳಗೆ ಕರೆದಿದ್ದಾನೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದ್ದು, ಇದೇ ಸಮಯವನ್ನು ಉಪಯೋಗಿಸಿಕೊಂಡು ಅತ್ಯಾಚಾರ ಎಸಗಿದ್ದ. ಈ ವಿಷಯ ತಿಳಿದ ಮನೆಯವರು ಶಿರಹಟ್ಟಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ, ಈಗ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ೨೦ ವರ್ಷ ಕಠಿಣ ಶಿಕ್ಷೆಯನ್ನು ವಿಧಿಸಿದ್ದಾರೆ. ಜತೆಗೆ ೧೦ ಸಾವಿರ ರೂಪಾಯಿ ದಂಡವನ್ನೂ ವಿಧಿಸಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ | ಬೆಳಗಾವಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 24 ಗಂಟೆಯಲ್ಲಿ ಆರೋಪಿಗಳ ಬಂಧನ

Exit mobile version