Site icon Vistara News

Mullalli Suri: ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ಇನ್ನಿಲ್ಲ

journalist Mullalli Suri

#image_title

ಬೆಂಗಳೂರು: ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಗುರುವಾರ ನಿಧನರಾದರು. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ಆಪರೇಶನ್‌ಗೆ ಒಳಗಾಗಿದ್ದ ಅವರು (Mullalli Suri), ಬಳಿಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚೇತರಿಸಿಕೊಳ್ಳುವ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿ ಇವರು ಸೇವೆ ಸಲ್ಲಿಸಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಪತ್ರಕರ್ತರ ಸಹಕಾರ ಸಂಘ ಮತ್ತು ಪ್ರೆಸ್ ಕ್ಲಬ್‌ನಲ್ಲಿ ಸಕ್ರಿಯರಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಪತ್ರಕರ್ತರ ಆಪತ್ಬಾಂಧವ ನಿಧಿಯಿಂದ ಆರ್ಥಿಕ ನೆರವು ನೀಡುವ ಮೂಲಕ ಮುಳ್ಳಳ್ಳಿ ಸೂರಿ ಅವರು ಗುಣಮುಖರಾಗಲೆಂದು ಪತ್ರಕರ್ತರು ಹಾರೈಸಿದ್ದರು.

ಕೆಯುಡಬ್ಲ್ಯೂಜೆ ಸಂತಾಪ

ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ. ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ಸದಾ ಕ್ರಿಯಾಶೀಲವಾಗಿ ಇರುತ್ತಿದ್ದ ಮುಳ್ಳಳ್ಳಿ ಸೂರಿ ಅವರ ನಿಧನದಿಂದ ಸುದ್ದಿ ಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ.

ಇದನ್ನೂ ಓದಿ | Death News: ಸಾವಿತ್ರಮ್ಮ ಪಟೇಲ್ ಪುಟ್ಟಪ್ಪ ನಿಧನ

Exit mobile version