ಬೆಂಗಳೂರು: ಆಜಾನ್ ವಿವಾದ ಸದ್ಯಕ್ಕೆ ತಣ್ಣಗಾಗುವ ಯಾವುದೇ ಸಾಧ್ಯತೆ ಗೋಚರಿಸುತ್ತಿಲ್ಲ. ಸುಪ್ರೀಂಕೋರ್ಟ್ ತೀರ್ಪಿಗೆ ವಿರೋಧವಾಗಿ ಬಳಕೆ ಆಗುತ್ತಿರುವ ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸದಿದ್ದರೆ ರಾಜ್ಯಾದ್ಯಂತ ಧ್ವನಿವರ್ಧಕಗಳ ಮೂಲಕ ಹನುಮಾನ್ ಚಾಲೀಸಾ ಪಠಣ ಮಾಡಲಾಗುತ್ತದೆ ಎಂದು ವಿಶ್ವ ಹಿಂದು ಪರಿಷತ್ ಎಚ್ಚರಿಕೆ ನೀಡಿದೆ.
ಈ ಕುರಿತು ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಮಸೀದಿಗಳಲ್ಲಿ ಅನಧಿಕೃತ ಆಜಾನ್ ಧ್ವನಿ ವರ್ಧಕಗಳಿಂದ ಶಬ್ದ ಮಾಲಿನ್ಯ ಆಗುತ್ತಿದೆ. ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶದನ್ವಯ ಅನಧಿಕೃತ ಧ್ವನಿವರ್ಧಕ ಬಳಸುತ್ತಿರುವವರ ವಿರುದ್ದದ ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ಬಳಸಲಾಗುತ್ತಿರುವ ಧ್ವನಿ ವರ್ಧಕಗಳನ್ನು ಪೊಲೀಸ್ ಇಲಾಖೆ ತೆರವು ಮಾಡಬೇಕು. ಇಲ್ಲವಾದಲ್ಲಿ ಧ್ವನಿವರ್ಧಕಗಳ ಮೂಲಕ ಹನುಮಾನ್ ಚಾಲೀಸಾ ಪಠಣೆ ಮಾಡುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದಿದ್ದಾರೆ.
ಹೆಚ್ಚಿನ ಓದು: ಮುಸ್ಲಿಮರು ಕತ್ತರಿಸಿದ ಮಾಂಸವನ್ನೇ ನಾವು ಸೇವಿಸೋದು: ಸಿದ್ದರಾಮಯ್ಯ
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಹಿಂಪ ಪರೋಕ್ಷವಾಗಿ ವಾಗ್ದಾಳಿ ಮಾಡಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರು ವಿಶ್ವದ ಅತ್ಯಂತ ದೊಡ್ಡ ಸಂಘಟನೆ ವಿಶ್ವ ಹಿಂದೂ ಪರಿಷದ್ ಬಗ್ಗೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಹತಾಶೆಯಿಂದ ಈ ರೀತಿ ವಿವೇಚನೆ ಇಲ್ಲದೆ ಮಾತನಾಡಿ ಅವರ ಗೌರವಕ್ಕೇ ಧಕ್ಕೆ ತಂದುಕೊಳ್ಳುತ್ತಿದ್ದಾರೆ. ಕಾನೂನು ಉಲ್ಲಂಘನೆ ಮಾಡುವವರ ಪರ ಒಬ್ಬ ಮಾಜಿ ಮುಖ್ಯಮಂತ್ರಿ ನಿಂತಿರುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.
ಹೆಚ್ಚಿನ ಓದು: ಕಾಂಗ್ರೆಸ್‍ನವರು ನ್ಯಾಯಾಲಯದ ಪರ ಇದ್ದಾರೆಯೇ, ವಿರುದ್ಧ ಇದ್ದಾರೆಯೇ ಎಂಬುದನ್ನು ತಿಳಿಸಬೇಕು: ಸಿ.ಟಿ.ರವಿ