Site icon Vistara News

Vice Chancellor: ರಾಜ್ಯದ 7 ನೂತನ ವಿವಿಗಳಿಗೆ ಕುಲಪತಿಗಳ ನೇಮಕ: ಸಚಿವ ಅಶ್ವತ್ಥನಾರಾಯಣ ಮಾಹಿತಿ

Ashwathanarayana

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ 7 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಹಾಗೂ ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು (Vice Chancellor) ಸೋಮವಾರ ನೇಮಿಸಲಾಗಿದೆ.

ಡಾ.ಬಿ.ಕೆ. ರವಿ

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಬಿ.ಕೆ. ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿವಿಯ ಡಾ. ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ. ಎಂ.ಆರ್‌. ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ. ಎಸ್‌. ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್‌ ಶರದ್‌ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿವಿಯ ಡಾ. ಬಿ.ಎಸ್‌. ಬಿರಾದಾರ್‌ ಅವರನ್ನು ಬೀದರ್‌ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ್‌ ಎಚ್‌. ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿವಿ ನಿವೃತ್ತ ಪ್ರೊಫೆಸರ್‌ ಆಗಿರುವ ಡಾ. ಟಿ.ಸಿ. ತಾರಾನಾಥ್‌ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಇದನ್ನೂ ಓದಿ | CBSE Warning: ಏಪ್ರಿಲ್‌ 1ಕ್ಕೂ ಮೊದಲು ಶಾಲೆಗಳ ಆರಂಭ ಬೇಡ, ಸಿಬಿಎಸ್‌ಇ ಖಡಕ್‌ ಎಚ್ಚರಿಕೆ

ಸರ್ಕಾರವು ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ನೂತನ 7 ವಿಶ್ವವಿದ್ಯಾಲಯಗಳ ಕುಲಪತಿಗಳು

Exit mobile version