Murugha Seer: ಅತ್ಯಾಚಾರ ನಡೆದಿಲ್ಲ, ಲೈಂಗಿಕ ದೌರ್ಜನ್ಯ ಅಲ್ಲಗಳೆಯುವಂತಿಲ್ಲ; ಮುರುಘಾ ಶ್ರೀ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ ಮತ್ತೇನಿದೆ? - Vistara News

ಕರ್ನಾಟಕ

Murugha Seer: ಅತ್ಯಾಚಾರ ನಡೆದಿಲ್ಲ, ಲೈಂಗಿಕ ದೌರ್ಜನ್ಯ ಅಲ್ಲಗಳೆಯುವಂತಿಲ್ಲ; ಮುರುಘಾ ಶ್ರೀ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ ಮತ್ತೇನಿದೆ?

Murugha Seer: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೊ ಕಾಯ್ದೆಯ ಚಾರ್ಜ್‌ಶೀಟ್‌ ಪ್ರತಿ ಲಭ್ಯವಾಗಿದ್ದು, ಎಲ್ಲರ ಹೇಳಿಕೆಯನ್ನೂ ಉಲ್ಲೇಖಿಸಲಾಗಿದೆ. ಈ ವೇಳೆ ಪ್ರಕರಣದ ಪ್ರಮುಖ ಆರೋಪಿಗಳಾದ ಮುರುಘಾ ಶರಣರು ತಮಗೆ ಸಂತ್ರಸ್ತೆಯರು ಗೊತ್ತೇ ಇಲ್ಲ ಎಂದರೆ, ವಾರ್ಡನ್‌ ರಶ್ಮಿ ತಾವು ಶ್ರೀಗಳ ಕೊಠಡಿಯನ್ನೇ ನೋಡಿಲ್ಲ ಎಂದಿದ್ದಾರೆ. ಇನ್ನು ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ನಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ.

VISTARANEWS.COM


on

murugha sharanaru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಮುರುಘಾ ಶರಣರ (Murugha Seer) ಮೇಲಿನ ಎರಡನೇ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಜನವರಿ ೧೦ರಂದು ಸಲ್ಲಿಸಿರುವ ಚಾರ್ಜ್‌ಶೀಟ್ ಪ್ರತಿ ಲಭ್ಯವಾಗಿದ್ದು, ಆರೋಪಿ, ಸಂತ್ರಸ್ತೆಯರ ಹೇಳಿಕೆಯ ಜತೆಗೆ ವೈದ್ಯಕೀಯ ವರದಿಯನ್ನೂ ಉಲ್ಲೇಖಿಸಲಾಗಿದೆ. ಇದರಲ್ಲಿ ತಾವು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂದು ಪ್ರಕರಣದ ಎ೧ ಆರೋಪಿ ಮುರುಘಾ ಶ್ರೀಗಳು ಹೇಳಿಕೆ ನೀಡಿದ್ದರೆ, ಸಂತ್ರಸ್ತೆಯರು ಸುಳ್ಳು ಆರೋಪ ಮಾಡಿದ್ದು, ನಾನು ಶ್ರೀಗಳ ಕೊಠಡಿಯನ್ನೇ ನೋಡಿಲ್ಲ ಎಂದು ೨ನೇ ಆರೋಪಿ ವಾರ್ಡನ್‌ ರಶ್ಮಿ ಹೇಳಿಕೆ ನೀಡಿದ್ದಾರೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಎರಡನೇ ಪ್ರಕರಣದ ಮೊದಲ ಸಂತ್ರಸ್ತೆಯು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾಗಿ ಹೇಳಿಕೆ ನೀಡಿದ್ದಾಳೆ. ಇನ್ನು ವೈದ್ಯಕೀಯ ವರದಿಯಲ್ಲಿ ಬಾಲಕಿಯರಿಬ್ಬರ ಮೇಲೆ ಲೈಂಗಿಕ ಕ್ರಿಯೆ ನಡೆದಿಲ್ಲವಾದರೂ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ.

ಮುರುಘಾ ಮಠದ ಮುರುಘಾ ಶರಣರು ಮೊದಲ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದರು. ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಸಹ ವಜಾಗೊಂಡಿದೆ. ಈಗ ಮತ್ತೊಂದು ಕೇಸ್‌ನಲ್ಲಿ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಚಾರ್ಜ್‌ಶೀಟ್‌ ಒಟ್ಟು 761 ಪುಟಗಳನ್ನು ಹೊಂದಿದ್ದು, ಎರಡು ಭಾಗವಾಗಿ (ಎ ಮತ್ತು ಬಿ) ಸಲ್ಲಿಕೆ ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ ಅಲ್ಲಗಳೆಯುವಂತಿಲ್ಲ

ಸಂತ್ರಸ್ತ ಬಾಲಕಿಯರಿಬ್ಬರ ವೈದ್ಯಕೀಯ ಪರೀಕ್ಷೆ ವರದಿಯನ್ನು ಸಹ ಉಲ್ಲೇಖಿಸಲಾಗಿದೆ. ಸಂತ್ರಸ್ತ ಬಾಲಕಿಯರ ಜತೆ ಲೈಂಗಿಕ ಕ್ರಿಯೆ ನಡೆದಿಲ್ಲ. ಆದರೆ, ಲೈಂಗಿಕ ದೌರ್ಜನ್ಯವನ್ನು ಅಲ್ಲಗಳೆಯುವಂತಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರಿಂದ ಸಲ್ಲಿಕೆಯಾಗಿರುವ ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಡಾ.ಉಮಾ ಹಾಗೂ ಡಾ. ರೂಪಾ ಅವರಿಂದ ವೈದ್ಯಕೀಯ ವರದಿ ಸಲ್ಲಿಕೆಯಾಗಿತ್ತು.

ಇದನ್ನೂ ಓದಿ: Karnataka Election: ಕೋಲಾರದಲ್ಲಿ ರಮೇಶ್‌ ಕುಮಾರ್‌, ಕೆ.ಎಚ್.ಮುನಿಯಪ್ಪ ನಡುವೆ ಮುಂದುವರಿದ ಮುನಿಸು

ಮಕ್ಕಳನ್ನು ಕಳಿಸಲು ಟೈಂಟೇಬಲ್‌ ಮಾಡಿಲ್ಲ- ವಾರ್ಡನ್‌ ರಶ್ಮಿ

6 ವರ್ಷಗಳಿಂದ ಮಠದ ಹಾಸ್ಟೆಲ್‌ ವಾರ್ಡನ್ ಆಗಿದ್ದೇನೆ. ಮುರುಘಾಶ್ರೀ ಕೊಠಡಿಗೆ ಮಕ್ಕಳನ್ನು ಕಳಿಸಲು ಟೈಂ ಟೇಬಲ್ ಮಾಡಿಲ್ಲ. ಮುರುಘಾಶ್ರೀ ಖಾಸಗಿ ಕೊಠಡಿಗೆ ಮಕ್ಕಳನ್ನು ಕಳಿಸಿಲ್ಲ. ಮಕ್ಕಳನ್ನು ನಾನು ಹೊಡೆದಿಲ್ಲ, ತಪ್ಪು ಮಾಡಿದಾಗ ಬುದ್ಧಿವಾದ ಹೇಳಿದ್ದೇನೆ, ಎರಡೇಟು ಹೊಡೆದಿದ್ದೇನೆ. ದೂರುದಾರ ಅಡುಗೆ ಸಹಾಯಕಿ ಹಾಗೂ ಅವರ ಇಬ್ಬರು ಮಕ್ಕಳು ನನಗೆ ಗೊತ್ತು. ಆದರೆ, ಸಂತ್ರಸ್ತ ಮಕ್ಕಳು ಸುಳ್ಳು ಆರೋಪ ಮಾಡಿದ್ದಾರೆ ಎಂದು ಪ್ರಕರಣದ ಎ2 ಆರೋಪಿ ವಾರ್ಡನ್ ರಶ್ಮಿ ‌ನೀಡಿರುವ ಹೇಳಿಕೆಯನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಠದ ಹಾಲ್‌ನಲ್ಲಿ ಭಕ್ತಾದಿಗಳು ಮತ್ತು ಮಕ್ಕಳಿಗೆ ಹಣ್ಣು, ಡ್ರೈಫ್ರೂಟ್ಸ್ ಅನ್ನು ಶ್ರೀಗಳು ನೀಡುತ್ತಿದ್ದರು. ಸ್ವಾಮೀಜಿ ನೀಡುವ ಹಣ್ಣಿನಲ್ಲಿ ಮತ್ತು ಬರುವ ಔಷಧಿ ಇರುತ್ತಿತ್ತು ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ಸ್ವಾಮೀಜಿ ಖಾಸಗಿ ಕೊಠಡಿಯನ್ನೇ ನೋಡಿಲ್ಲ. ಮಕ್ಕಳಿಗೆ ಹೊಡೆಯುವ ಸ್ಕೇಲ್ ನನ್ನ ರೂಮಿನಲ್ಲಿದೆ ಎಂದು ರಶ್ಮಿ ನೀಡಿರುವ ಹೇಳಿಕೆ ದಾಖಲಾಗಿದೆ.

ನಾನು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿಲ್ಲ- ಮುರುಘಾಶ್ರೀ

ದೂರುದಾರ ಅಡುಗೆ ಸಹಾಯಕಿ‌ ಮತ್ತು ಮಕ್ಕಳ ಬಗ್ಗೆ ನನಗೆ ಮಾಹಿತಿ ಇಲ್ಲ. ಖಾಸಗಿ ಕೊಠಡಿಗೆ ಮಕ್ಕಳು ಹೆಚ್ಚಾಗಿ ಬರುತ್ತಿರಲಿಲ್ಲ. ದರ್ಬಾರ್ ಹಾಲ್, ಶಿರಸಂಗಿ ಸಭಾಂಗಣಕ್ಕೆ ಬರುತ್ತಿದ್ದರು. ನಾನಿಲ್ಲದ ವೇಳೆ ನನ್ನ ಕೋಣೆಗೆ ಹೋಗಿದ್ದರೆ ಆ ಬಗ್ಗೆ ನನಗೆ ತಿಳಿದಿಲ್ಲ. ನಾನು ಮಠದಲ್ಲಿದ್ದಾಗ ಖಾಸಗಿ‌ ಕೊಠಡಿಗೆ ಬೀಗ ಹಾಕುತ್ತಿರಲಿಲ್ಲ. ನನ್ನ ಕೊಠಡಿಗೆ ಹೆಣ್ಣು ಮಕ್ಕಳು ಬರಲು ಟೈಂ ಟೇಬಲ್ ಹಾಕಿರಲಿಲ್ಲ. ಸಂತ್ರಸ್ತ ಬಾಲಕಿಯರು ಯಾವತ್ತೂ ನನ್ನ ಕೊಠಡಿಗೆ ಬಂದಿಲ್ಲ ಎಂದು ಪ್ರಕರಣದ ಮೊದಲನೇ ಆರೋಪಿ ಶಿವಮೂರ್ತಿ ಮುರುಘಾ ಶರಣರು ನೀಡಿರುವ ಹೇಳಿಕೆಯನ್ನು ಚಾರ್ಜ್‌ಶೀಟ್‌ನಲ್ಲಿ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Retail Inflation : ಜನವರಿಯಲ್ಲಿ ಚಿಲ್ಲರೆ ಹಣದುಬ್ಬರ 6.52%ಕ್ಕೆ ಜಿಗಿತ, ಆರ್‌ಬಿಐ ಸುರಕ್ಷತಾ ಮಟ್ಟ ಮೀರಿದ ಬೆಲೆ ಏರಿಕೆ

ದರ್ಬಾರ್ ಹಾಲ್‌ನಲ್ಲಿ ಟ್ಯೂಷನ್ ನಡೆಸುತ್ತಿದ್ದೆ. ಮಕ್ಕಳಿಗೆ ಪ್ರಸಾದದ ರೂಪದಲ್ಲಿ ಹಣ್ಣು, ಡ್ರೈಫ್ರೂಟ್ಸ್ ನೀಡುತ್ತಿದ್ದೆ. ವಿದೇಶಕ್ಕೆ ಹೋದಾಗ ನಾನು ಚಾಕೋಲೇಟ್ ತರುತ್ತಿದ್ದೆ. ಮಕ್ಕಳಿಗೆ ಮಾತ್ರ ಅಲ್ಲ,‌ ಮಠದಲ್ಲಿದ್ದ ಎಲ್ಲರಿಗೂ ಕೊಡುತ್ತಿದ್ದೆ. ಚಾಕೊಲೇಟ್‌ಗಳಲ್ಲಿ ಮತ್ತು ಬರಿಸುವ ಅಂಶ ಇರುವುದಿಲ್ಲ. ನಾನು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಮತ್ತೇನಿದೆ?

ಒಟ್ಟು 761 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಮಕ್ಕಳು‌ ಮತ್ತು ಕುಟುಂಬಸ್ಥರ ಅನುಕಂಪ, ಗೌರವ ಗಳಿಸಿ ದೌರ್ಜನ್ಯ ಎಸೆಗಲಾಗಿದೆ. ಹಾಸ್ಟೆಲ್ ವಾರ್ಡನ್ ರಶ್ಮಿ ಮೂಲಕ ಮಕ್ಕಳನ್ನು ಕೊಠಡಿಗೆ ಕರೆಸಿಕೊಂಡಿದ್ದರು. ಮತ್ತು ಭರಿಸುವ ಚಾಕೋಲೆಟ್ ನೀಡಿ ಲೈಂಗಿಕ ದೌರ್ಜನ್ಯ ಎಸೆಗಲಾಗಿದೆ. ಕಲಂ 376(C), 376(2)(n), 376(AB), 376(3), r/w 34, ಐಪಿಸಿ & u/s 5(L), 6,7 POCSO Act -2012 & sec: 3(f), 7 ಧಾರ್ಮಿಕ‌ ಕೇಂದ್ರ ದುರ್ಬಳಕೆ 1988
& sec 77 Juvenile Justice Act 2015 ಅಡಿ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಸಂತ್ರಸ್ತರು ನೀಡಿರುವ ಸಿಆರ್‌ಪಿಸಿ 161, 164 ಹೇಳಿಕೆ ಆಧಾರದ ಮೇಲೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಎ1 ಆರೋಪಿ ಮುರುಘಾಶ್ರೀ, ಎ2 ಆರೋಪಿ ವಾರ್ಡನ್ ರಶ್ಮಿ ವಿರುದ್ಧ ಸಲ್ಲಿಕೆಯಾಗಿರುವ ಚಾರ್ಜ್‌ಶೀಟ್‌ನಲ್ಲಿ ಕಲಂ 173 (8) ಸಿಆರ್‌ಪಿಸಿ ಅಡಿಯಲ್ಲಿ ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಲಾಗಿದೆ. ದೂರಿನಲ್ಲಿ ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ದೃಢಪಟ್ಟಿಲ್ಲ. ಮುರುಘಾಶ್ರೀ ವಿರುದ್ಧ ಪಿತೂರಿ ಕೇಸ್, ಕೌಂಟರ್ ಬ್ಲಾಸ್ಟ್ ಕೇಸ್ ಎಂದು ಕಂಡು ಬರುತ್ತದೆ. ಬಾಕಿ ತನಿಖೆ ಪೂರ್ಣಗೊಳಿಸಿ ಅಂತಿಮ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Murder Case: ಪತ್ನಿಯ ಕತ್ತು ಸೀಳಿದ ಪತಿ ಪರಾರಿ, ಸಣ್ಣದಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

14 ವರ್ಷದ ಸಂತ್ರಸ್ತ ಬಾಲಕಿಯು ಸಿಆರ್‌ಪಿಸಿ 161 ರ ಅಡಿ ಹೇಳಿಕೆ ನೀಡಿದ್ದು, ವಾರ್ಡನ್ ರಶ್ಮಿ ಮುರುಘಾಶ್ರೀ ಬಳಿ ಹೋಗಲು ಟೈಂ ಟೇಬಲ್ ಹಾಕಿದ್ದರು. ಪ್ರತಿ ದಿನ ಹಾಸ್ಟೆಲ್‌ನ ಇಬ್ಬರು ಮಕ್ಕಳು ಮುರುಘಾಶ್ರೀ ಬಳಿ ಹೋಗಬೇಕಿತ್ತು. ದತ್ತು ಕೇಂದ್ರದ ಮಕ್ಕಳನ್ನೂ ಕರೆದುಕೊಂಡು ಹೋಗಬೇಕಿತ್ತು ಎಂದು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಲಾಕ್‌ಡೌನ್ ವೇಳೆ ಮಕ್ಕಳೊಂದಿಗೆ ಕಾಲ ಕಳೆಯುವುದು ಮುರುಘಾಶ್ರೀಗೆ ರೂಢಿ ಆಗಿತ್ತು. ಮೊದಲ ಭಾನುವಾರ ಮುರುಘಾಶ್ರೀ ಬಳಿಗೆ ಹೋದಾಗ ಚಾಕೋಲೆಟ್ ನೀಡಿದ್ದರು. ಮಧ್ಯಾಹ್ನದವರೆಗೆ ಮುರುಘಾಶ್ರೀ ರೂಮ್‌ನಲ್ಲಿದ್ದು ಬಂದಿದ್ದೆ. ಪ್ರತಿ ಭಾನುವಾರ‌ ನಾನು ಮುರುಘಾಶ್ರೀ ರೂಮ್‌ಗೆ ಹೋಗಬೇಕಿತ್ತು. ಸ್ವಾಮೀಜಿ ನೀಡಿದ ಚಾಕೋಲೆಟ್‌ ತಿಂದ ಬಳಿಕ ನಿದ್ದೆ ಬಂದು ಮಲಗಿದ್ದೆ. ಎಚ್ಚರವಾದಾಗ ಸುಸ್ತು ಹಾಗೂ ಕಾಲು, ತೊಡೆ ಭಾಗದಲ್ಲಿ ನೋವಿತ್ತು. ಮತ್ತೊಂದು ಭಾನುವಾರ ಹೋದಾಗ ಮತ್ತೆ ಚಾಕೋಲೆಟ್ ನೀಡಿದರು. ಎಚ್ಚರವಾದಾಗ ಮುರುಘಾಶ್ರೀ ಏನೋ ಮಾಡಿದ್ದಾರೆ ಎಂದು ತಿಳಿಯಿತು. ಟೈಂ ಟೇಬಲ್ ಬದಲಾದ ಕಾರಣ ಸೋಮವಾರ ಹೋಗಬೇಕಾಯಿತು. ಕುರ್ಚಿ ಮೇಲೆ ಕುಳಿತಿದ್ದ ಮುರುಘಾಶ್ರೀ ತೊಡೆ ಮೇಲೆ ಕೂರಿಸಿಕೊಂಡರು. ಖಾಸಗಿ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಮಾಡಿದರು. ಮುರುಘಾಶ್ರೀ ರೂಮಿನಲ್ಲಿ 2ಸಲ ಮಲಗಿದ್ದಾಗ ಬಳಸಿಕೊಂಡಿದ್ದಾರೆ ಅನ್ನಿಸುತ್ತಿದೆ. ಮುರುಘಾಶ್ರೀ ರೂಮ್‌ಗೆ ಹೋಗಿ ಬಂದಾಗಿಂದ ಸರಿಯಾಗಿ ಪೀರಿಯಡ್ಸ್ ಆಗುತ್ತಿರಲಿಲ್ಲ. ವಾರ್ಡನ್ ರಶ್ಮಿ ಟೈಂ ಟೇಬಲ್‌ನಂತೆ ಹೋಗದಿದ್ದರೆ ಹೊಡೆಯುತ್ತಿದ್ದರು ಎಂದು ಬಾಲಕಿ ನೀಡಿರುವ ಹೇಳಿಕೆಯನ್ನು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಜಾರ್ಜ್‌ಶೀಟ್‌ ಪ್ರತಿ ಕೇಳಿದ್ದ ವಕೀಲರು

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2ನೇ ಫೋಕ್ಸೋ ಪ್ರಕರಣದಲ್ಲಿ ಗ್ರಾಮಾಂತರ ಪೊಲೀಸರಿಂದ ಜನವರಿ ೧೦ರಂದು ಸಲ್ಲಿಕೆಯಾಗಿದ್ದ ಚಾರ್ಜ್‌ಶೀಟ್‌ ಪ್ರತಿಯನ್ನು ನೀಡುವಂತೆ ಮುರುಘಾ ಶ್ರೀ ಪರ ವಕೀಲರು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕೋರಿದ್ದರು. ಈ ಸಂಬಂಧ ಸೋಮವಾರ (ಫೆ. ೧೩) ಚಾರ್ಜ್‌ಶೀಟ್‌ಗೆ ನಂಬರ್ ನೀಡಿ ಪ್ರತಿಯನ್ನು ಕೋರ್ಟ್ ನೀಡಿದೆ.

2022ರ ಅ.13ರಂದು 2ನೇ ಪೋಕ್ಸೊ ಪ್ರಕರಣ ದಾಖಲು

ಮುರುಘಾ ಶರಣರ ವಿರುದ್ಧ ಅಕ್ಟೋಬರ್ 13ರಂದು ಫೋಕ್ಸೊ ಪ್ರಕರಣ ದಾಖಲಾಗಿತ್ತು. ಮುರುಘಾಶ್ರೀ ಸೇರಿ 7 ಜನರ ವಿರುದ್ಧ ಕೇಸ್ ದಾಖಲಾಗಿತ್ತು. ಎ1 ಆರೋಪಿ ಮುರುಘಾಮಠದ ಮುರುಘಾಶ್ರೀ, ಎ2 ಆರೋಪಿ ವಾರ್ಡನ್ ರಶ್ಮಿ, ಎ3 ಆರೋಪಿಯಾಗಿ ಮಠದ ಉತ್ತರಾಧಿಕಾರಿ (ಬಸವಾದಿತ್ಯ 17), ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ‌ ಗಂಗಾಧರ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಠದ ಅಡುಗೆ ಸಹಾಯಕಿ ನೀಡಿದ ದೂರಿನನ್ವಯ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿತ್ತು. ಬಳಿಕ ಅಲ್ಲಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ದೂರು ವರ್ಗಾವಣೆ ಆಗಿತ್ತು.

ಇದನ್ನೂ ಓದಿ: Cryptocurrency : ಬಿಟ್​ ಕಾಯಿನ್​, ಬೆಟ್ಟಿಂಗ್​, ತಂಬಾಕಿನ ಜಾಹೀರಾತು ಬೇಡ; ಫ್ರಾಂಚೈಸಿಗಳಿಗೆ ಬಿಸಿಸಿಐ ಸೂಚನೆ

ಮಠದ ಹಾಸ್ಟೆಲ್‌ನಲ್ಲಿದ್ದ ತನ್ನ ಇಬ್ಬರು ಮಕ್ಕಳು, ಮತ್ತಿಬ್ಬರು ಮಕ್ಕಳು ಸೇರಿ ನಾಲ್ವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಅಡುಗೆ ಸಹಾಯಕಿ ದೂರಿನಲ್ಲಿ ಉಲ್ಲೇಖಿಸಿದ್ದರು. ಬಳಿಕ ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿ, ವೈದ್ಯಕೀಯ ಪ್ರಕ್ರಿಯೆಗಳನ್ನು ಪೂರೈಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಅನ್ನು ಸಲ್ಲಿಕೆ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Swiggy fined: ಸೇವೆಯಲ್ಲಿ ನ್ಯೂನ್ಯತೆ ಮತ್ತು ಮೋಸದ ವ್ಯಾಪಾರ ಮಾಡಿದ ಕಾರಣ ಗ್ರಾಹಕನಿಗೆ 5000 ರೂ ಪರಿಹಾರ ನೀಡಲು ಸ್ವಿಗ್ಗಿ ಸಂಸ್ಥೆಗೆ ಗ್ರಾಹಕ ನ್ಯಾಯಾಲಯ ಸೂಚಿಸಿದೆ.

VISTARANEWS.COM


on

Swiggy fined
Koo

ಬೆಂಗಳೂರು: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲವಾದ ಸ್ವಿಗ್ಗಿ ಸಂಸ್ಥೆಗೆ (Swiggy fined), ಗ್ರಾಹಕ ನ್ಯಾಯಾಲಯವು ವ್ಯಾಜ್ಯ ವೆಚ್ಚ ಸೇರಿ 5000 ರೂ. ದಂಡ ವಿಧಿಸಿದೆ. 2023ರಲ್ಲಿ ಗ್ರಾಹಕರೊಬ್ಬರು ಸ್ವಿಗ್ಗಿ ಆ್ಯಪ್‌ ಮೂಲಕ ಐಸ್‌ ಕ್ರೀಂ ಬುಕ್‌ ಮಾಡಿದ್ದರು. ಅದರೆ, ಐಸ್‌ ಕ್ರೀಂ ಡೆಲಿವರಿ ಮಾಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಗ್ರಾಹಕರೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಆರ್ಡರ್ ಮಾಡಿದ ಉತ್ಪನ್ನವನ್ನು ದೂರುದಾರರಿಗೆ ತಲುಪಿಸದಿದ್ದರೂ ಹಣ ಮರುಪಾವತಿ ಮಾಡಿರಲಿಲ್ಲ. ಸ್ವಿಗ್ಗಿ ಕಡೆಯಿಂದ ತಪ್ಪು ನಡೆದಿದೆ ಎಂದು ದೂರುದಾರರು ಸಾಬೀತುಪಡಿಸಿದ್ದಾರೆ. ಇದು ಮೋಸದ ವ್ಯಾಪಾರವಾಗಿದ್ದು, ಗ್ರಾಹಕನಿಗೆ ವ್ಯಾಜ್ಯ ಶುಲ್ಕ 2000 ರೂ. ಹಾಗೂ ಪರಿಹಾರ 3000 ರೂ. ನೀಡಬೇಕು ಎಂದು ಸ್ವಿಗ್ಗಿ ಸಂಸ್ಥೆಗೆ ಕೋರ್ಟ್‌ ಸೂಚನೆ ನೀಡಿದೆ.

2023ರ ಜನವರಿಯಲ್ಲಿ ನಗರದಲ್ಲಿ ಗ್ರಾಹಕರೊಬ್ಬರು, ಸ್ವಿಗ್ಗಿ ಆ್ಯಪ್‌ ಮೂಲಕ ಚಾಕೋಲೆಟ್‌ ಐಸ್‌ ಕ್ರೀಂ ಅನ್ನು ಆರ್ಡರ್‌ ಮಾಡಿದ್ದರು. ಆದರೆ, ಐಸ್‌ ಕ್ರೀಂ ಡೆಲಿವರಿ ಆಗದಿದ್ದರೂ, ತಲುಪಿದೆ ಎಂದು ಸಂದೇಶ ಬಂದಿತ್ತು. ಇದರಿಂದ ಗ್ರಾಹಕ, ನ್ಯಾಯಾಲಯದ ಮೊರೆ ಹೋಗಿದ್ದರು.

ಸ್ವಿಗ್ಗಿ ಸಂಸ್ಥೆಯು, ತಾವು ಗ್ರಾಹಕರು ಮತ್ತು ಥರ್ಡ್-ಪಾರ್ಟಿ ರೆಸ್ಟೋರೆಂಟ್‌ ಅಥವಾ ವ್ಯಾಪಾರಿಗಳ ನಡುವಿನ ಮಧ್ಯವರ್ತಿಯಾಗಿದ್ದೇವೆ. ಡೆಲಿವರಿ ಬಾಯ್‌ ತಪ್ಪಿಗೆ ತಮ್ಮನ್ನು ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಮತ್ತು ಆ ಸಮಯದಲ್ಲಿ ಆರ್ಡರ್ ಅನ್ನು ತಲುಪಿಸಲಾಗಿದೆಯೇ ಎಂದು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿತ್ತು.

ಇದನ್ನೂ ಓದಿ | MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ವಿಜಯಕುಮಾರ್ ಎಂ ಪಾವಲೆ, ವಿ ಅನುರಾಧಾ ಮತ್ತು ರೇಣುಕಾದೇವಿ ದೇಶಪಾಂಡೆ ಅವರನ್ನೊಳಗೊಂಡ ನ್ಯಾಯಪೀಠ, ಹಣ ಮರುಪಾವತಿಗಾಗಿ ಗ್ರಾಹಕ ನೀಡಿದ ಕಾನೂನು ನೋಟಿಸ್‌ಗೆ ಪ್ರತಿಕ್ರಿಯಿಸುವಲ್ಲಿ ಸ್ವಿಗ್ಗಿ ವಿಫಲವಾಗಿದೆ ಎಂದು ಕೋರ್ಟ್‌ ಗಮನಿಸಿದೆ. ಇನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಹೊಣೆಗಾರಿಕೆಯಿಂದ ಮಧ್ಯವರ್ತಿಗಳನ್ನು ರಕ್ಷಿಸಲಾಗಿದೆ ಎಂಬ ಸ್ವಿಗ್ಗಿಯ ವಾದವನ್ನು ತಿರಸ್ಕರಿಸಿರುವ ಕೋರ್ಟ್, ಈ ವಿನಾಯಿತಿ ಕೇವಲ ಮಾಹಿತಿಯ ಪ್ರಸಾರಕ್ಕೆ ಸೀಮಿತವಾಗಿದ್ದು, ಸರಕು ಮತ್ತು ಸೇವೆಗಳ ಮಾರಾಟಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಸೇವೆಯಲ್ಲಿ ನ್ಯೂನ್ಯತೆ ಮತ್ತು ಮೋಸದ ವ್ಯಾಪಾರ ಮಾಡಿದ ಕಾರಣ ಐಸ್‌ ಕ್ರೀಂಗೆ ನೀಡಿದ್ದ 187 ರೂ. ಮಾತ್ರವಲ್ಲದೇ ವ್ಯಾಜ್ಯ ವೆಚ್ಚ ಹಾಗೂ ಪರಿಹಾರ ಸೇರಿ 5000 ರೂ.ಗಳನ್ನು ಗ್ರಾಹಕನಿಗೆ ನೀಡಲು ಸ್ವಿಗ್ಗಿ ಸಂಸ್ಥೆಗೆ ಸೂಚಿಸಲಾಗಿದೆ.

Continue Reading

ಕರ್ನಾಟಕ

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

Modi in Karnataka: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಪ್ರಧಾನಿ ಮೋದಿ ಅವರು ಶನಿವಾರ ರಾತ್ರಿ ಬೆಳಗಾವಿಯ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿದ್ದಾರೆ.

VISTARANEWS.COM


on

Koo

ಬೆಳಗಾವಿ: ಎರಡು ದಿನಗಳ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರು ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ಅವರಿಗಾಗಿ 36 ವಿಧದ ಭಕ್ಷ್ಯ ಭೋಜನಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮೋದಿ ಅವರು ಎಳನೀರು ಮಾತ್ರ ಸೇವಿಸಿ ನಿದ್ರೆಗೆ ಜಾರಿದ್ದಾರೆ.

ಬೆಳಗಾವಿಯ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯವಿದ್ದು, ಅವರಿಗಾಗಿ ಜೋಳದ ರೊಟ್ಟಿ, ರಾಗಿ ಮುದ್ದೆ, ಟೊಮ್ಯಾಟೊ ಸಾರು ಸೇರಿ 36 ಖಾದ್ಯಗಳನ್ನು ಹೋಟೆಲ್ ಸಿಬ್ಬಂದಿ ತಯಾರಿಸಿದ್ದರು. ಆದರೆ ರಾತ್ರಿ ಭೋಜನ ತಿರಸ್ಕರಿಸಿರುವ ಪ್ರಧಾನಿ ಅವರು ಎಳನೀರು ಮಾತ್ರ ಸೇವಿಸಿ ನಿದ್ರೆಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ ಹೀಗಿತ್ತು

ಇನ್ನು ಪ್ರಧಾನಿ ಮೋದಿ ಅವರು ಐಟಿಸಿ ವೆಲ್‌ಕಮ್ ಹೋಟೆಲ್‌ಗೆ ಆಗಮಿಸುವ ವೇಳೆ ರಸ್ತೆ ಇಕ್ಕೆಲಗಳಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿ ಮೋದಿ ಪರ ಜೈಕಾರಗಳನ್ನು ಕೂಗಿದರು. ಈ ವೇಳೆ ಮೋದಿ ಅವರು ಮುಗುಳ್ನಗುತ್ತಾ ಜನರತ್ತ ಕೈಬೀಸಿ ಹೋಟೆಲ್‌ನೊಳಗೆ ಹೋದರು.

ಪ್ರಧಾನಿಗೆ ಕಾರ್ಯಕರ್ತರು ಸೇರಿ ಗಣ್ಯರ ಸ್ವಾಗತ

ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌, ಸಂಸದ ಅಣ್ಣಾಸಾಬ್ ಜೊಲ್ಲೆ, ಶಾಸಕಿ ಶಶಿಕಲಾ ‌ಜೊಲ್ಲೆ ಸೇರಿ ಗಣ್ಯರು ಸ್ವಾಗತ ಕೋರಿದರು.

ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರು ಮೋದಿ ಅವರನ್ನು ಸ್ವಾಗತಿಸಿದರು.

ಬೆಳಗಾವಿ, ಶಿರಸಿ, ಬಳ್ಳಾರಿಯಲ್ಲಿ ಭಾನುವಾರ ಪ್ರಚಾರ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

Hassan Pen Drive Case: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಇದಕ್ಕೂ ಮೊದಲೇ ಸಂಸದ ವಿದೇಶಕ್ಕೆ ಹೋಗಿದ್ದಾರೆ.

VISTARANEWS.COM


on

Hassan Pen Drive Case
Koo

ದೇವನಹಳ್ಳಿ: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ ರಾತ್ರಿ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಆದರೆ, ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan Pen Drive Case) ಅವರು ವಿದೇಶಕ್ಕೆ ಹೋಗಿರುವುದು ಕಂಡುಬಂದಿದೆ. ಶನಿವಾರ ಮುಂಜಾನೆ ಮೂರು ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ.

LH 755 ಲುಫ್ತಾನ್ಸಾ (Lufthansa airlines) ಏರ್‌ಲೈನ್ಸ್ ಮೂಲಕ ಕೆಐಎಎಲ್‌ನಿಂದ ಜರ್ಮನಿಯ ಫ್ರಾಂಕ್ ಫರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅವರು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರವು ಎಸ್‌ಐಟಿ ತನಿಖೆಗೆ ಆದೇಶ ಮಾಡುವ ಮುಂಚೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಿರುವ ಹಾಸನ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಅವರು ವಿದೇಶಕ್ಕೆ ಹೋಗಿರಬಹುದು ಎನ್ನಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hasan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Modi in Karnataka: ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಬೆಳಗಾವಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು.

VISTARANEWS.COM


on

Modi in Karnataka
Koo

ಬೆಳಗಾವಿ: ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ನಗರಕ್ಕೆ ಪ್ರಧಾನಿ‌ ನರೇಂದ್ರ ಮೋದಿ (Modi in Karnataka) ಅವರು ಶನಿವಾರ ರಾತ್ರಿ ಆಗಮಿಸಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌, ಸಂಸದ ಅಣ್ಣಾಸಾಬ್ ಜೊಲ್ಲೆ, ಶಾಸಕಿ ಶಶಿಕಲಾ ‌ಜೊಲ್ಲೆ ಸೇರಿ ಗಣ್ಯರು ಸ್ವಾಗತ ಕೋರಿದರು. ಅಲ್ಲಿಂದ ಕಾಕತಿ ಬಳಿಯ ಐಟಿಸಿ ವೆಲ್‌ಕಮ್‌ ಹೋಟೆಲ್‌ಗೆ ಪ್ರಧಾನಿ ತೆರಳಿದರು.

ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ನಾಯಕರ ಜತೆಗೆ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಕಾರ್ಯಕರ್ತರಿಗೆ ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರು ಮೋದಿ ಅವರನ್ನು ಸ್ವಾಗತಿಸಿದರು.

ನಗರದ ಕಾಕತಿಯಲ್ಲಿರುವ ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ಮೋದಿ ಅವರು ವಾಸ್ತವ್ಯ ಮಾಡಲಿದ್ದು, ಅವರಿಗಾಗಿ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ. ಗುಜರಾತಿ ಸೇರಿ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಶೈಲಿಯ ಖಾದ್ಯಗಳನ್ನು ಸಿದ್ಧಪಡಿಸಿದ್ದು, ಮೂವತ್ತಕ್ಕೂ ಹೆಚ್ಚು ಬಗೆಯೆ ಪದಾರ್ಥಗಳನ್ನು ತಯಾರಿಸಲಾಗಿದೆ. ಇವುಗಳಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ, ಟೊಮ್ಯಾಟೊ ‌ಸಾರು,‌ ದಾಲ್ ಕೂಡ ಸೇರಿವೆ.

ಬೆಳಗಾವಿ, ಶಿರಸಿ, ಬಳ್ಳಾರಿಯಲ್ಲಿ ಭಾನುವಾರ ಪ್ರಚಾರ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

Karnataka Election: PM Modi Roadshow Ends In Bengaluru, Here are some photos

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading
Advertisement
Swiggy fined
ಬೆಂಗಳೂರು3 hours ago

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Vistara Editorial
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕರ್ನಾಟಕ3 hours ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

IPL 2024
ಪ್ರಮುಖ ಸುದ್ದಿ3 hours ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ3 hours ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ3 hours ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್3 hours ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ4 hours ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ4 hours ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ5 hours ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 202410 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ15 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ21 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ3 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌