Site icon Vistara News

Video Call From Jail | ಜೈಲಿನಲ್ಲಿದ್ದುಕೊಂಡೇ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯ ಭಾಗಿ

BJP member Umesh Kamble

ಬೆಳಗಾವಿ: ಇಲ್ಲಿನ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪುರಸಭೆಯ 14ನೇ ವಾರ್ಡ್‌‌ನಲ್ಲಿ ಬಿಜೆಪಿ ಸದಸ್ಯ ಉಮೇಶ ಕಾಂಬಳೆ ಎಂಬುವವರು ಜೈಲಿನಲ್ಲಿದ್ದುಕೊಂಡೇ ಪುರಸಭೆ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದಾರೆ. ವಿಡಿಯೊ ಕಾಲ್‌ (Video Call From Jail) ಮೂಲಕ ಜೈಲಿನಿಂದಲೇ ಭಾಗಿಯಾಗಿದ್ದಾರೆ.

ಬಿಜೆಪಿ ಸದಸ್ಯ ಉಮೇಶ ಕಾಂಬಳೆ ಮೇಲೆ ಕಳೆದ ಎಂಟು ತಿಂಗಳ ಹಿಂದೆ ಕಂಟ್ರಿ ಪಿಸ್ತೂಲ್ ಬಳಸಿ ಮಹಿಳೆಯನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಅವರು ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿದ್ದಾರೆ.

ಗುರುವಾರ ನಿಗದಿಯಾಗಿದ್ದ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವ ಸಂಬಂಧ ನ್ಯಾಯಾಲಯದಲ್ಲಿ ಅನುಮತಿ ಕೋರಿದ್ದರು. ನ್ಯಾಯಾಲಯದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ ಕಾಂಬಳೆ ಸಾಮಾನ್ಯ ಸಭೆಗೆ ವಿಡಿಯೊ ಕಾಲ್‌ ಮೂಲಕ ಭಾಗವಹಿಸಿದ್ದರು. ಇದಕ್ಕಾಗಿ ಜೈಲಿನಲ್ಲಿಯೇ ಅಗತ್ಯ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಭೆಯಲ್ಲಿ ತಮ್ಮ ವಾರ್ಡ್ ಕೆಲಸಗಳು ಸಮರ್ಪಕವಾಗಿ ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿರುವ ಕಾಂಬಳೆ, ಈ ಬಗ್ಗೆ ಕ್ರಮವಹಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ | KPTCL Exam Scam | ಬೆಳಗಾವಿಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಂಡ ಮೂವರು ಆರೋಪಿಗಳ ಬಂಧನ

Exit mobile version