ಪಂಚಪೀಠಗಳು, ಕೈ, ಕಮಲ ಪಕ್ಷಗಳ ವಿರುದ್ಧ ಅಸಮಾಧಾನದ ವಿಡಿಯೋ ವೈರಲ್; ಸತ್ಯ ಹೇಳಿದ್ದೇನೆ‌ ಎಂದ ವಚನಾನಂದ ಶ್ರೀ - Vistara News

ಕರ್ನಾಟಕ

ಪಂಚಪೀಠಗಳು, ಕೈ, ಕಮಲ ಪಕ್ಷಗಳ ವಿರುದ್ಧ ಅಸಮಾಧಾನದ ವಿಡಿಯೋ ವೈರಲ್; ಸತ್ಯ ಹೇಳಿದ್ದೇನೆ‌ ಎಂದ ವಚನಾನಂದ ಶ್ರೀ

ಪಂಚ ಪೀಠಗಳ ಜಗದ್ಗುರುಗಳು ಅವರ ಜಾತಿಗಾಗಿ ಮೀಸಲಾತಿ ಕೇಳಿದ್ದರು. ಆದರೆ ಪಂಚಮಸಾಲಿಗಳ ಬಗ್ಗೆ ಏನೂ ಕೇಳಿರಲಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು, ವೀರಶೈವ ಲಿಂಗಾಯತರು ಎಲ್ಲ ಒಂದೇ ಎಂದು ಅಧಿಕಾರ ಅನುಭವಿಸುತ್ತಿದ್ದರು ಎಂದು ವಿಡಿಯೋದಲ್ಲಿ ವಚನಾನಂದ ಸ್ವಾಮೀಜಿ ಕಿಡಿಕಾರಿದ್ದರು.

VISTARANEWS.COM


on

Panchamasali Reservation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಪಂಚಪೀಠಗಳು, ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಅಸಮಾಧಾನದ ವಿಡಿಯೋ ವೈರಲ್ ವಿಚಾರಕ್ಕೆ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ನಾನು ಸತ್ಯವನ್ನೇ ಹೇಳಿದ್ದೇನೆ. ಹೇಳಿದ್ದರಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ನಮ್ಮ ಭಕ್ತರು ಕೇಳಿದ ಪ್ರಶ್ನೆಗೆ ನಾನು ಉತ್ತರ ಕೊಟ್ಟಿದ್ದೇನೆ. ಇದರಲ್ಲಿ ಯಾವುದೇ ರೀತಿಯ ವಿವಾದ ಇಲ್ಲ ಎಂದು ತಿಳಿಸಿದ್ದಾರೆ.

ಗದಗ ಜಿಲ್ಲೆಯ ಯಳವತ್ತಿ ಗ್ರಾಮದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಂಚಪೀಠಾಧಿಪತಿಗಳ ವಿರುದ್ಧ ವಚನಾನಂದ ಸ್ವಾಮೀಜಿ ಆಕ್ರೋಶ ಹೊರಹಾಕಿದ್ದ ವಿಡಿಯೊ ವೈರಲ್‌ ಆಗಿತ್ತು. ರಾಜ್ಯದಲ್ಲಿ 3-4 ಸಾವಿರ ಮಠಗಳು ಇದ್ದವು. ಎಲ್ಲ ಮಠಗಳ ಶ್ರೀಗಳು ಇದ್ದರು. ಅವರಿಗೆ ದಾನ ಧರ್ಮ ಮಾಡುತ್ತಿದ್ದೆವು. ಅವರೇ ನಮ್ಮ ಗುರುಗಳು ಎಂದು ತಿಳಿದುಕೊಂಡಿದ್ದೆವು. ಹೀಗಿದ್ದ ಮೇಲೆಯೂ ಮತ್ತೆ ಪಂಚಮಸಾಲಿ ಪೀಠ ಮಾಡಬೇಕಿತ್ತು ಎಂಬುದನ್ನು ವಿವರಿಸಿದ್ದ ಅವರು, ಮೀಸಲಾತಿಗಾಗಿಯೇ ಪಂಚಮಸಾಲಿ ಜಗದ್ಗುರು ಪೀಠ ಸ್ಥಾಪನೆಯಾಗಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದರು.

ಇದನ್ನೂ ಓದಿ | Panchamasali Reservation | ಸಾಹುಕಾರ್‌ ಹೆಸರು ತೆಗೆದರೆ ವೇದಿಕೆಗೆ ನುಗ್ಗಿ ಹೊಡೀತೀವಿ: ಯತ್ನಾಳ್‌ಗೆ ಜಾರಕಿಹೊಳಿ ಬೆಂಬಲಿಗರ ಎಚ್ಚರಿಕೆ

2003ರಲ್ಲಿ ವಾಜಪೇಯಿ ಪ್ರಧಾನಿ, ಎಲ್‌.ಕೆ.ಅಡ್ವಾಣಿ ಉಪ ಪ್ರಧಾನಿ ಆಗಿದ್ದರು. ಆ ಸಂದರ್ಭದಲ್ಲಿ ಅವರನ್ನು ಐದು ಜಗದ್ಗುರುಗಳು ಭೇಟಿಯಾಗಿ ಒಂದು ಮನವಿ ಮಾಡಿದ್ದರು. ನಾವು ಬೇಡ ಜಂಗಮರು, ಬೇಡಿಕೊಂಡು ತಿನ್ನುವವರು. ನಮಗೆ ಎಸ್‌ಸಿ ಸರ್ಟಿಫಿಕೇಟ್‌ ಕೊಡಿ ಎಂದು ಕೇಳಿದ್ದರು. ಅದು ಮಾಧ್ಯಮಗಳಲ್ಲಿ ಬಂದಿತ್ತು. ಈ ವಿಚಾರಕ್ಕೆ ಪಂಚಮಸಾಲಿ ಮುಖಂಡರು ಪ್ರತಿಕ್ರಿಯಿಸಿ, ನೀವು ಯಾವ ಆಧಾರದ ಮೇಲೆ ಎಸ್‌ಸಿ ಸರ್ಟಿಫಿಕೆಟ್ ಕೇಳುತ್ತೀರಾ? ನಿಮ್ಮನ್ನು ಗುರುಗಳು ಎಂದು ಪೂಜೆ ಪುನಸ್ಕಾರ ಮಾಡಿ ಆಶೀರ್ವಾದ ಪಡೆದುಕೊಳ್ಳುತ್ತೇವೆ. ಇಂತಹವರು ಹೇಗೆ ಎಸ್‌ಸಿ ಆಗುತ್ತೀರಿ ಎಂದು ಕೇಳಿದ್ದರು.

ದಾನಧರ್ಮ ಮಾಡುವವರು ಪಂಚಮಸಾಲಿಗಳು. ನಿಮ್ಮ ಮಠಕ್ಕೆ ಅಕ್ಕಿ, ಜೋಳ ನೀಡಿ, ಮನೆಯಲ್ಲಿ ಮಾಡಿದ ಮೊದಲ ರೊಟ್ಟಿ ಮಠಕ್ಕೆ ಇಟ್ಟವರು ನಾವು. ನಿಮ್ಮ ಶಿಕ್ಷಣ ಸಂಸ್ಥೆಗಳಿಗೆ ಜಮೀನು ದಾನ ಮಾಡಿದ್ದೇವೆ. ಆದರೆ, ನೀವು ನಿಮ್ಮ ಜಾತಿಗಾಗಿ ಮೀಸಲಾತಿ ಕೇಳಿದ್ದೀರಿ, ಆದರೆ, ಪಂಚಮಸಾಲಿ ಸಮುದಾಯದ ಭಕ್ತರಿಗಾಗಿ ಏನೂ ಕೇಳಿಲ್ಲ ಎಂದು ಪಂಚಮಸಾಲಿ ಭಕ್ತರು, ಪಂಚಪೀಠಗಳ ಜಗದ್ಗುರುಗಳನ್ನು ಪ್ರಶ್ನಿಸಿದ್ದರು.

ನಂತರ ಪಂಚಪೀಠಗಳಲ್ಲಿ ಎರಡು ಪೀಠಗಳನ್ನು ಪಂಚಮಸಾಲಿ ಸಮಾಜಕ್ಕೆ ನೀಡುವಂತೆ ಮನವಿ ಮಾಡಿದ್ದೆವು. ಆದರೆ, ಅದು ಸಾಧ್ಯವಿಲ್ಲ ಎಂದು ಪಂಚ ಪೀಠದ ಜಗದ್ಗುರುಗಳು ಹೇಳಿದ್ದರು. ಹೀಗಾಗಿ ನಾವು ದಾನ ಮಾಡಲು, ಮೆರವಣಿಗೆ ಮಾಡಲು ಬೇಕಾಗುತ್ತದೆ. ಆದರೆ ನಮ್ಮ ಸಮುದಾಯದವರು ಸ್ವಾಮೀಜಿಯಾಗಲು ಯಾಕೆ ಸಾಧ್ಯವಿಲ್ಲ ಎನ್ನುವ ಯೋಚನೆ ಮಾಡಲಾಯಿತು. ಆಗ ನಾವೇ ಒಂದು ಪ್ರತ್ಯೇಕ ಪಂಚಮಸಾಲಿ ಪೀಠವನ್ನು ಸ್ಥಾಪನೆ ಮಾಡಿದ್ದೆವು. ನಂತರ ಮಹಾಂತ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯಾದ್ಯಂತ ಮೀಸಲಾತಿಗಾಗಿ ಪ್ರತಿಭಟನೆಗಳು ನಡೆದಿದ್ದವು.

ಹೋರಾಟಗಳ ಫಲವಾಗಿ ಇದರಿಂದ 2009ರಲ್ಲಿ ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಸಾಮಾನ್ಯ ವರ್ಗದಲ್ಲಿದ್ದ ಪಂಚಮಸಾಲಿ ಸಮುದಾಯಕ್ಕೆ ಒಬಿಸಿ 3ಬಿ ಮೀಸಲಾತಿ ಕೊಟ್ಟರು. ಆದರೆ, ಆಗಲೇ ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಬೇಡಿಕೆ ಇತ್ತು. ಮುಂದೆ ಬಂದಂತಹ ಮುಖ್ಯಮಂತ್ರಿಗಳು ಮನವಿ ಸ್ವೀಕರಿಸಿದರೇ ವಿನಃ 2ಎ ಮೀಸಲಾತಿ ನೀಡಲಿಲ್ಲ. ಅದುವರೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌, ವೀರಶೈವ ಲಿಂಗಾಯತರು ಎಲ್ಲಾ ಒಂದೇ ಎಂದು ರಾಜ್ಯದಲ್ಲಿ ಅಧಿಕಾರ ಅನುಭವಿಸುತ್ತಿದ್ದರು. ನಂತದ ಹೋರಾಟದ ಪ್ರತಿಫಲವಾಗಿ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯಿಂದ ಪಂಚಮಸಾಲಿ ಸಮಾಜದ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದೆ ಎಂದು ವಚನಾನಂದ ಶ್ರೀ ಹೇಳಿರುವುದು ವಿಡಿಯೋದಲ್ಲಿದೆ.

ಇದನ್ನೂ ಓದಿ | Election 2023 | ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಗಿಮಿಕ್‌?: ವರುಣಾ ಖಚಿತ ಎಂದ ಶ್ರೀರಾಮುಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bangalore News : ಬೆಂಗಳೂರಲ್ಲಿ ಆಘಾತಕಾರಿ ಘಟನೆ; ಗಾಂಜಾ ನಶೆಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯರನ್ನು ಬೆದರಿಸಿದ ಪುಂಡರು

Crime News : ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್​ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ. ಎಚ್​​ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

VISTARANEWS.COM


on

Crime News
Koo

ಬೆಂಗಳೂರು: ಕಾರಿನಲ್ಲಿ ಬಂದ ಮದ್ಯ ಹಾಗೂ ಗಾಂಜಾ ಮತ್ತಿನಲ್ಲಿ ಬಂದ ಪುಂಡರ ಗುಂಪೊಂದು, ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ (Bangalore News). ಇನ್ನೋವಾ ಕಾರಿನಲ್ಲಿ ಬಂದಿದ್ದ ಪುಂಡರು ಕೃತ್ಯ ಎಸಗಿದ್ದು ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀರ ಮೇಲೂ ದಾಳಿ ಮಾಡಿದ್ದಾರೆ. ಬೆಂಗಳೂರಿನ ಎಚ್​ಎಎಲ್ ಬಳಿಯಿರುವ ಇರುವ ಖಾಸಗಿ ಶಾಲೆಯ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಲಾಗಿದೆ.

ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ಫುಟ್​ಪಾತ್ ಮೇಲೆ ಹತ್ತಿಸಿದ್ದರು. ಬಳಿಕ ಮಕ್ಕಳಿಗೆ ಹೆದರಿಸಲು ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಒಬ್ಬ ನಶೆಯಲ್ಲಿ ತೂರಾಡಿ ಕೆಳಗೆ ಬಿದ್ದಿದ್ದಾನೆ. ಅಲ್ಲದೆ ಮಕ್ಕಳ ಮುಂದೆಯೇ ಅಸಭ್ಯ ವರ್ತನೆ ತೋರಿದ್ದಾನೆ. ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್​ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ. ಎಚ್​​ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

ಎಕ್ಸಾಂನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಸೂಸೈಡ್‌

ಪರೀಕ್ಷೆಯಲ್ಲಿ ‌ಫೇಲ್ (Failed in Exam) ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ. ಹುಬ್ಬಳ್ಳಿಯ ಉಣಕಲ್‌ ಕೆರೆಗೆ ಹಾರಿ ಮೃತಪಟ್ಟಿದ್ದಾಳೆ. ಸವಿತಾ ನರಗುಂದ (22) ಆತ್ಮಹತ್ಯೆ ಮಾಡಿಕೊಂಡವಳು.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೂವಿನಶಿಗ್ಲಿ ಗ್ರಾಮದ ಸವಿತಾ ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಬಿಎಸ್‌ಸಿ 5ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಳು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೆರೆಯಿಂದ ಶವವನ್ನು ಹೊರೆತೆಗೆದು ಕಿಮ್ಸ್‌ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

GT World Mall :ಪಂಚೆ ಧರಿಸಿ ಬಂದ ರೈತರೊಬ್ಬರಿಗೆ ಮಾಲ್​ ಒಳಗೆ ಬಿಡದೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜಿಟಿ ವರ್ಲ್ಡ್‌ ಮಾಲ್‌ ವಿವಾದದ ಕೇಂದ್ರ ಬಿಂದುವಾಗಿತ್ತು. ಮಾಲ್​ ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಸದನದಲ್ಲಿ ಗುಡುಗಿದ್ದರು. ಅಂತೆಯೇ ಸಂಜೆ ವೇಳೆಗೆ ಮಾಲೀಕರೇ ಅದಕ್ಕೆ ಸಮ್ಮತಿಸಿದ್ದಾರೆ.

VISTARANEWS.COM


on

GT World Mall
Koo

ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ವರ್ಲ್ಡ್​ ಮಾಲ್​ (GT World Mall) ಏಳು ದಿನಗಳ ಕಾಲ ಬಂದ್​ ಆಗಲಿದೆ. ಮಾಲ್​ನ ಮಾಲೀಕರ ಪುತ್ರ ಪ್ರಶಾಂತ್ ಅವರು ಸುದ್ದಿಗೋಷ್ಠಿ ನಡೆಸಿ ಆಗಿರುವ ಘಟನೆಗೆ ಕ್ಷಮೆ ಕೋರಿದರಲ್ಲದೆ, ನಗರಾಭಿವೃದ್ಧಿ ಸಚಿವರ ಸೂಚನೆ ಪ್ರಕಾರ ಏಳು ದಿನಗಳ ಕಾಲ ಬಂದ್ ಮಾಡುವುದಾಗಿ ಹೇಳಿದ್ದಾರೆ.

ಪಂಚೆ ಧರಿಸಿ ಬಂದ ರೈತರೊಬ್ಬರಿಗೆ ಮಾಲ್​ ಒಳಗೆ ಬಿಡದೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜಿಟಿ ವರ್ಲ್ಡ್‌ ಮಾಲ್‌ ವಿವಾದದ ಕೇಂದ್ರ ಬಿಂದುವಾಗಿತ್ತು. ಮಾಲ್​ ಒಂದು ವಾರ ಕಾಲ ಮುಚ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಸದನದಲ್ಲಿ ಗುಡುಗಿದ್ದರು. ಅಂತೆಯೇ ಸಂಜೆ ವೇಳೆಗೆ ಮಾಲೀಕರೆ ಅದಕ್ಕೆ ಸಮ್ಮತಿಸಿದ್ದಾರೆ.

ನಮ್ಮ ಮಾಲ್ ನಡೆಯಬಾರದಂಥ ಘಟನೆ ನಡೆದಿದೆ. ಹೊಸ ಸಿಬ್ಬಂದಿಯಿಂದ ಪ್ರಮಾದವಾಗಿದೆ. ಮಾಲ್​ನ ಮಾಲೀಕನಾಗಿ ನಾನು ಈ ಘಟನೆಗೆ ಕ್ಷಮೆ ಕೇಳುತ್ತಿದ್ದೇನೆ. ತಪ್ಪು ಮಾಡಿದ ಸಿಬ್ಬಂದಿಯನ್ನ ಕೆಲಸದಿಂದ ತೆಗೆದಿದ್ದೇವೆ. ಈ ರೀತಿಯ ಅಪಮಾನ ನಡೆಯಬಾರದಿತ್ತು. ನಮ್ಮ ತಂದೆಯವರೂ ಮಾತಾಡಿ ಕ್ಷಮೆ ಕೇಳಿದ್ದಾರೆ ಎಂದು ಪ್ರಶಾಂತ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಮಗೆ ಬಿಬಿಎಂಪಿ ಕಡೆಯಿಂದ ನೋಟಿಸ್ ಜಾರಿಯಾಗಿದೆ. ನಡೆದಿರುವ ಘಟನೆ ಬಗ್ಗೆ ಮಾಹಿತಿ ಕೊಡಿ ಅಂತಾ ನೋಟಿಸ್ ಕೊಟ್ಟಿದ್ದಾರೆ. ಒಂದು ವರ್ಷದ 1. 70 ಕೋಟಿ ತೆರಿಗೆ ಬಾಕಿ ಇದೆ. ಆದರೆ, ಪಾಲಿಕೆ ಘಟನೆ ಬಗ್ಗೆ ಮಾಹಿತಿ ಕೊಡಿ ಅಂತಾ ನೋಟಿಸ್ ಕೊಟ್ಟಿದೆ. ಇದೀಗ ನಾವು ಸ್ವಯಂಪ್ರೇರಿತವಾಗಿ ಕ್ಲೋಸ್ ಮಾಡುತ್ತಿದ್ದೇವೆ ಎಂದು ಪ್ರಶಾಂತ್ ಹೇಳಿದ್ದಾರೆ.

ಮುಂದಿನ ಸೂಚನೆ ಬರೋ ತನಕ ಮಾಲ್ ಬಂದ್ ಮಾಡ್ತೀವೆ. ಬಿಬಿಎಂಪಿಗೆ ಘಟನೆ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ. ಫಕೀರಪ್ಪ ಅವರನ್ನು ವೈಯಕ್ತಿಕವಾಗಿ ಕರೆದು ಕ್ಷಮೆ ಕೇಳಿದ್ದೇವೆ. ಈ ಬಗ್ಗೆ ವಿಮರ್ಶೆ ನಡೆಸಲು ನಮಗೆ 2-3 ದಿನ ಕಾಲಾವಕಾಶ ಬೇಕಾಗಿದೆ. ಇನ್ನಷ್ಟು ವಿವರಣೆ ನೀಡಲು 2ರಿಂದ 3 ದಿನ ಸಮಯ ಬೇಕಾಗುತ್ತದೆ ಎಂದು ಪ್ರಶಾಂತ್ ಹೇಳಿದರು.

ಗೇಟ್ ಬಾಗಿಲು ಬಂದ್​

ಜಿಟಿ ಮಾಲ್ ಅನ್ನು ಅಧಿಕಾರಿಗಳು ಬಂದ್ ಮಾಡುವ ಮೊದಲೇ ಅಲ್ಲಿನ ಸಿಬ್ಬಂದಿಗಳೇ ಬಂದ್ ಮಾಡಿಸಿದ್ದಾರೆ. ಮಳಿಗೆಗಳ ಬಳಿಗೆ ತೆರಳಿದ ಮಾಲ್​ ಸಿಬ್ಬಂದಿ ಅಂಗಡಿ ಬಂದ್ ಮಾಡುವಂತೆ ಕೋರಿದ್ದಾರೆ. ಅದೇ ರೀತಿ ಒಳಗಿರುವ ಪಿವಿಆರ್​ ಸಿನಿಮಾ ಮಂದಿಗಳನ್ನು ಒಂದೊಂದಾಗಿ ಬಂದ್ ಮಾಡಿಸಲಾಗಿದೆ. ಸಿನಿಮಾ ಚಾಲನೆಯಲ್ಲಿರುವ ಸ್ಕ್ರಿನ್ ಬಿಟ್ಟು ಉಳಿದೆಲ್ಲ ಸ್ಕ್ರೀನ್​ಗಳನ್ನು ಬಂದ್ ಮಾಡಿಸಲಾಗಿದೆ. ಜತೆಗೆ ಒಳಗಿರುವ ಎಲ್ಲ ಗ್ರಾಹಕರನ್ನು ಹೊರಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

ಕಂದಾಯ ವಿಭಾಗ ಆಸ್ತಿತೆರಿಗೆ ಬಾಕಿ ಉಳಿಸಿಕೊಂಡ ಬಗ್ಗೆ ನೋಟಿಸ್ ಕೊಟ್ಟಿದೆ. ಆರೋಗ್ಯ ಇಲಾಖೆ ಕಡೆಯಿಂದಲೂ ನೋಟಿಸ್ ಜಾರಿಯಾಗಿದೆ ಎಂಬುದಾಗಿ ಪ್ರಶಾಂತ್ ಮಾಹಿತಿ ನೀಡಿರು.

ಕಲಾಪದಲ್ಲಿ ಬಂದ್​ಗೆ ಸೂಚನೆ

ಗುರುವಾರ ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ (Santosh Lad) ಕೂಡ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಆದರೆ ಎಚ್ಚರಿಕೆ ನೀಡಿ ಮೂರು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

Karnataka Job Reservation : ಮೀಸಲಾತಿ ಕುರಿತು ಸರ್ಕಾರ ತನ್ನ ಪ್ರಕಟಣೆ ಹೊರಡಿಸಿದೆ. ಬಳಿಕ ಅದಕ್ಕೆ ತಡೆದಿದೆ. ಕರ್ನಾಟಕದಿಂದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವಲಯದಿಂದ ಉದ್ಯೋಗ ಮೀಸಲಿಡಬೇಕು ಎಂಬುದರ ಕುರಿತು ಸಿಎಂ ತಮ್ಮ ನಿಲುವು ಪ್ರಕಟಿಸಬೇಕು. ನಿಮ್ಮ ಸರ್ಕಾರದ ಮೇಲೆ ಹಗರಣ ಸುತ್ತಿಕೊಂಡಿದೆ. ಅದಕ್ಕಾಗಿ ಈ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದಿರು

VISTARANEWS.COM


on

CT Ravi
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ವಿಚಾರವನ್ನು (Karnataka Job Reservation) ಮುನ್ನೆಲೆಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ವಿಧಾನಸೌಧದ ಪಡಸಾಲೆಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರದ ಮೇಲೆ ಹಗರಣಗಳು ಸುತ್ತಿಕೊಂಡಿವೆ. ಅವುಗಳನ್ನು ವಿಷಯಾಂತರ ಮಾಡುವುದಕ್ಕೆ ಮೀಸಲಾತಿ ವಿಚಾರವನ್ನು ಎತ್ತಿದ್ದಾರೆ ಎಂದು ಹೇಳಿದ್ದಾರೆ.

ಮೀಸಲಾತಿ ಕುರಿತು ಸರ್ಕಾರ ತನ್ನ ಪ್ರಕಟಣೆ ಹೊರಡಿಸಿದೆ. ಬಳಿಕ ಅದಕ್ಕೆ ತಡೆದಿದೆ. ಕರ್ನಾಟಕದಿಂದ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ವಲಯದಿಂದ ಉದ್ಯೋಗ ಮೀಸಲಿಡಬೇಕು ಎಂಬುದರ ಕುರಿತು ಸಿಎಂ ತಮ್ಮ ನಿಲುವು ಪ್ರಕಟಿಸಬೇಕು. ನಿಮ್ಮ ಸರ್ಕಾರದ ಮೇಲೆ ಹಗರಣ ಸುತ್ತಿಕೊಂಡಿದೆ. ಅದಕ್ಕಾಗಿ ಈ ವಿಷಯವನ್ನು ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿದಿರು

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಹಣ ವರ್ಗಾವಣೆ ಮಾಡಿ ವಂಚನೆ ಮಾಡಿರೋದು ಸಿಎಂ ಗಮನಕ್ಕೂ ಬಂದಿದೆ. ಇದರಿಂದಾ ನಿಮ್ಮ ಸರ್ಕಾರದ ಘನತೆಗೆ ಚ್ಯುತಿ ತಂದಿದೆ. ಹೀಗಾಗಿ ಜನರನ್ನು ಭಾವನಾತ್ಮಕವಾಗಿ ಬದಲಾಯಿಸಲು ಮೀಸಲಾತಿ ವಿಚಾರವನ್ನು ಎತ್ತಲಾಗಿದೆ ಎಂದು ಸಿಟಿ ರವಿ ಆರೋಪಿಸಿದರು.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಉದ್ದಿಮೆಯಲ್ಲಿ ಎಷ್ಟು ಉದ್ಯೋಗ ಇದೆ. ಕನ್ನಡಿಗರಿಗೆ ಎಷ್ಟು, ಹೊರಗಿನವರಿಗೆ ಎಷ್ಟು ಅಂತ‌ಮಾಹಿತಿ ಪಡೆಯಬೇಕಿತ್ತು. ಯಾವ ಉದ್ಯೋಗಕ್ಕೆ ಕೌಶಲದ ಅವಶ್ಯಕತೆ ಇದೆ ಅಂತ ಮಾಹಿತಿ ಪಡೆಯಬೇಕಿತ್ತು. ಹಾಗಾದರೆ ಮಾತ್ರ ಅದು ಸರ್ಕಾರದ ಬದ್ಧತೆಯಾಗಲಿದೆ.

ಮೀಸಲಾತಿ ವಿಷಯದ ಕುರಿತು ಚರ್ಚಿಸಲು ಎಷ್ಟು ಸಭೆ ನಡೆಸಲಾಗಿದೆ. ಈ ವಿಷಯದಲ್ಲಿ ಮುಖ್ಯಮಂತ್ರಿಗೆ ಬದ್ಧತೆ ಇದೆಯೇ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಬದಲಾಗಿದ್ದಾರೆ. ಈ ಹಗರಣಗಳೇ ಅದಕ್ಕೆ ಸ್ಪಷ್ಟ ಉದಾಹರಣೆ. ಚಾಮುಂಡೇಶ್ವರಿ ಉಪಚುನಾವಣೆ ಬಂದಾಗ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇತ್ತು. ಆಗ ನಾನು ಹೋರಾಟಗಾರರು ಸೋಲಬಾರದು ಎಂದು ಹೇಳಿದ್ದೆ. ಅಹಿಂದ ನಾಯಕರು ಗೆಲ್ಲಬೇಕು ಎಂದಿದ್ದೆ ಎಂದು ಸಿಟಿ ರವಿ ಹೇಳಿದ್ದಾರೆ.

ನಿಗಮದ ಹಣ, ಎಸ್​ಸಿಪಿ ಮತ್ತು ಟಿಎಸ್​​ಪಿ ಹಣ ದುರ್ಬಳಕೆಗೆ ನಿಮ್ಮ ಸರ್ಕಾರವೇ ಹೊಣೆಯಾಗಿದೆ. ಅದರ ಲೂಟಿಯಲ್ಲಿ ಸಿಎಂ ಸಚಿವ ಸಂಪುಟ ಸಹೋದ್ಯೋಗಿ ಭಾಗಿಯಾಗಿದ್ದಾರೆ. ಹಿಂದಿನ ನಾಯಕ ಸಿದ್ದರಾಮಯ್ಯ ಇಂಥದ್ದನ್ನು ಸಹಿಸುತ್ತಿರಲಿಲ್ಲ. ಇದು ಕೇವಲ‌ ಆಷಾಢ ಭೂತಿತನ ಅಷ್ಟೆ ಎಂದು ಸಿಟಿ ರವಿ ಹೇಳಿದ್ದಾರೆ.

ಎಸ್​ಸಿಪಿ- ಟಿಎಸ್​​ಪಿ ಹಣ ದುರ್ಬಳಕೆ ಆಗಿದೆ. ಆ ಹಣ ಅವರಿಗೆ ಮಾತ್ರ ಬಳಕೆ‌ ಆಗಬೇಕು. ಸರ್ಕಾರದ ಗ್ಯಾರಂಟಿ ಉದ್ದೇಶಕ್ಕೆ ಅಲ್ಲ. ಹೀಗಾಗಿ ಹಣ ಬಳಕೆಯನ್ನು ಕೂಡಲೇ ನಿಲ್ಲಿಸಬೇಕು. ವಾಲ್ಮೀಕಿ ನಿಗಮ, ಮುಡಾ, ಪರಿಶಿಷ್ಟರ ಹಣದ ಬಳಕೆಯ ಹೊಣೆಯನ್ನು ಸಿಎಂ ಹೊರಬೇಕು ಎಂದು ಸಿಟಿ ರವಿ ನುಡಿದಿದ್ದಾರೆ.

ಅರ್ಕಾವತಿ ರೀಡು ಹಗರಣ ಸಿಎಂ ಮೇಲೆ ಬಂದಿತ್ತು. ರಿಯಲ್ ಎಸ್ಟೇಟ್ ಉದ್ಯಮಗಳಿಂದ ಕೋಟ್ಯಂತ ರೂಪಾಯಿ ಪಡೆದಿರೋ ಆರೋಪ ಬಂದಿತ್ತು. ವಿಚಾರಣೆಗೆ ಕೆಂಪಣ್ಣ ಆಯೋಗ ರಚನೆ ಮಾಡಿದ್ದೀರಿ. ಬಳಿಕ ದೇಸಾಯಿ ಆಯೋಗ ರಚನೆ ಮಾಡಿದ್ದೀರಿ. ಸದನದಲ್ಲಿ ಮೊದಲು ಕೆಂಪಣ್ಣ ಆಯೋಗದ ವರದಿ ತಂದು ಬಳಿಕ ಅನ್ನು ಮುಚ್ಚಿಟ್ರಿ. ಬಳಿಕ ಸಾಯಿ ಆಯೋಗ ಸಿದ್ದಪಡಿಸಿದ್ದೀರಿ. ಬಳಿಕ ತಪ್ಪನ್ನು ಮುಚ್ಚಿಟ್ಟಿರಿ ಎಂದು ರವಿ ಅವರು ಆರೋಪಿಸಿದರು.

ಲೋಕಾಯುಕ್ತ ಪವರ್ ಕಡಿಮೆ ಮಾಡಿ, ಎಸಿಬಿ ರಚನೆ ಮಾಡಿದವರು ಸಿಎಂ ಸಿದ್ದರಾಮಯ್ಯ. ಎರಡೂ ಇಲಾಖೆ ದುರ್ಬಳಕೆ ಮಾಡಿಕೊಂಡವರು ನೀವೇ. ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಿಟಿ ರವಿ ಆಗ್ರಹಿಸಿದರು.

Continue Reading

ಹುಬ್ಬಳ್ಳಿ

Student Death : ಎಕ್ಸಾಂನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಸೂಸೈಡ್‌

Student Death : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಎಕ್ಸಾಂನಲ್ಲಿ ಫೇಲ್‌ (Failed in Exam) ಆಗಿದ್ದಕ್ಕೆ ಮನನೊಂದು ಕೆರೆಗೆ ಹಾರಿ (Self Harming) ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಶವವನ್ನು ಹೊರತೆಗೆದಿದ್ದಾರೆ.

VISTARANEWS.COM


on

By

Student death
ಸಾಂದರ್ಭಿಕ ಚಿತ್ರ
Koo

ಹುಬ್ಬಳ್ಳಿ: ಪರೀಕ್ಷೆಯಲ್ಲಿ ‌ಫೇಲ್ (Failed in Exam) ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ. ಹುಬ್ಬಳ್ಳಿಯ ಉಣಕಲ್‌ ಕೆರೆಗೆ ಹಾರಿ ಮೃತಪಟ್ಟಿದ್ದಾಳೆ. ಸವಿತಾ ನರಗುಂದ (22) ಆತ್ಮಹತ್ಯೆ ಮಾಡಿಕೊಂಡವಳು.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೂವಿನಶಿಗ್ಲಿ ಗ್ರಾಮದ ಸವಿತಾ ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಬಿಎಸ್‌ಸಿ 5ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಳು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೆರೆಯಿಂದ ಶವವನ್ನು ಹೊರೆತೆಗೆದು ಕಿಮ್ಸ್‌ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

ನದಿಗೆ ಹಾರಿದ್ದ ವ್ಯಕ್ತಿ ಶವ ಪತ್ತೆ

ನದಿಗೆ ಹಾರಿ ನಾಪತ್ತೆಯಾಗಿದ್ದ ಹರೀಶ್ ಭೋವಿ ಎಂಬಾತನ ಶವ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನಗಳ್ಳಿಯಲ್ಲಿ ಹೊಳೆಯಲ್ಲಿ ಶವ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಹೊಳೆಗೆ ಹಾರಿ ಹರೀಶ್‌ ನಾಪತ್ತೆಯಾಗಿದ್ದ.

ಹರೀಶ್ ದಂಪತಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ತೆರಳಿದ್ದರು. ಠಾಣೆಯಲ್ಲಿ ಮಾತುಕತೆ ಮುಗಿಸಿ ಮನೆಗೆ ಮರಳುವಾಗ ದಾರಿ ಮಧ್ಯೆ ರಿಕ್ಷಾದಿಂದಲೇ ಹೊಳೆಗೆ ಹಾರಿದ್ದ. ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಹರೀಶ್ ಶವಕ್ಕಾಗಿ ಎರಡು ದಿನ ಶೋಧ ಕಾರ್ಯಚರಣೆ ನಡೆಸಿದ್ದರು. ವಾರಿ ಮಳೆಯಿಂದಾಗಿ ಅಬ್ಬರದಿಂದ ಹರಿಯುತ್ತಿದ್ದ ನದಿಯಿಂದಾಗಿ ಶೋಧ ಕಾರ್ಯಚರಣೆಗೆ ಅಡಚಣೆಯಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆಯಿಂದಲೂ ಶೋಧ ಕಾರ್ಯ ನಡೆದಿತ್ತು. ಗುರುವಾರ ಶವ ಕೊಳೆತ ಪರಿಣಾಮ ಆನೆಗಳ್ಳಿ ಹೊಳೆಯಲ್ಲಿ ಪತ್ತೆಯಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
Latest12 mins ago

Viral Video: ಬಸ್‌ ಡ್ರೈವರ್‌ನ ರೀಲ್ಸ್‌ ಕ್ರೇಜ್‌ಗೆ 2 ಎತ್ತುಗಳು ಬಲಿ; ರೈತನ ಸ್ಥಿತಿ ಗಂಭೀರ

Train Accident
ದೇಶ12 mins ago

Train Derail: ಹಳಿ ತಪ್ಪಿದ ರೈಲು; ಅಪಘಾತದ ಹಿಂದೆ ಇದ್ಯಾ ವಿಧ್ವಂಸಕ ಕೃತ್ಯ?

Crime News
ಪ್ರಮುಖ ಸುದ್ದಿ22 mins ago

Bangalore News : ಬೆಂಗಳೂರಲ್ಲಿ ಆಘಾತಕಾರಿ ಘಟನೆ; ಗಾಂಜಾ ನಶೆಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯರನ್ನು ಬೆದರಿಸಿದ ಪುಂಡರು

Lady Police Officer
Latest33 mins ago

Lady Police Officer: ಗೂಂಡಾಗಿರಿ ಮಾಡಿದರೆ ಹುಷಾರ್‌! ಪುಂಡರಿಗೆ ಲೇಡಿ ಪೊಲೀಸ್ ವಾರ್ನಿಂಗ್‌; ವಿಡಿಯೊ ವೈರಲ್

kiccha sudeep‌ Fans
ಸಿನಿಮಾ59 mins ago

Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

Ratna Bhandar
ದೇಶ1 hour ago

Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

GT World Mall
ಪ್ರಮುಖ ಸುದ್ದಿ1 hour ago

GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Viral Video
Latest1 hour ago

Viral Video: ಗರ್ಭಗುಡಿಗೆ ನುಗ್ಗಿ ದೇವರ ಕಿರೀಟಕ್ಕೇ ಕನ್ನ ಹಾಕಿದ ಕಳ್ಳ! ಪರಾರಿಯಾಗುವಾಗ ಮಾಡಿದ್ದೇನು? ವಿಡಿಯೊ ನೋಡಿ!

Dog Attacks
Latest2 hours ago

Dog Attacks: ಬಡಪಾಯಿ ಡೆಲಿವರಿ ಮ್ಯಾನ್‌ನನ್ನು ಭೀಕರವಾಗಿ ಕಚ್ಚಿದ ಶ್ರೀಮಂತರ ಮನೆಯ ನಾಯಿಗಳು; ವಿಡಿಯೊ ಇದೆ

Kashmir Encounter
ದೇಶ2 hours ago

Kashmir Encounter: ಕಾಶ್ಮೀರದಲ್ಲಿ ಮತ್ತೆ ಎನ್‌ಕೌಂಟರ್‌; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌