Video Viral : ಹೆಡೆಯೆತ್ತಿ ನಿಂತಿದ್ದ ನಾಗರಹಾವಿನ ಜತೆ ಬೆಕ್ಕಿನ ಕಾದಾಟ ; ಸೆಣಸಾಟದಲ್ಲಿ ಗೆದ್ದವರ‍್ಯಾರು? - Vistara News

ಕರ್ನಾಟಕ

Video Viral : ಹೆಡೆಯೆತ್ತಿ ನಿಂತಿದ್ದ ನಾಗರಹಾವಿನ ಜತೆ ಬೆಕ್ಕಿನ ಕಾದಾಟ ; ಸೆಣಸಾಟದಲ್ಲಿ ಗೆದ್ದವರ‍್ಯಾರು?

Video Viral : ಹಾವು- ಮುಂಗುಸಿ ಕಾದಾಟ ಆಯ್ತು, ಇತ್ತೀಚೆಗೆ ಶ್ವಾನದೊಂದಿಗೆ ಗಲಾಟೆ ಆಯಿತು. ಈಗ ಕೊಪ್ಪಳದಲ್ಲಿ ಬೆಕ್ಕುವೊಂದು ನಾಗರಹಾವಿನ ಜತೆಗೆ ಸೆಣಸಾಡಿದೆ. ಆ ರೋಚಕ ಕಾದಾಟ ಹೇಗಿತ್ತು ಗೊತ್ತಾ?

VISTARANEWS.COM


on

Cat And snake fighting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಎಲ್ಲಾದರೂ ಹಾವು ಕಂಡರೆ ಸಾಕು ಶ್ವಾನಗಳು ಅಟ್ಟಾಡಿಸಿ ಎಗರಿ ಎಗರಿ ದಾಳಿ ಮಾಡಿ ಕೊಂದು ಹಾಕಿಬಿಡುತ್ತವೆ. ಆಗಾಗ ಪ್ರಾಣಿಗಳ ನಡುವಿನ ಸಂಘರ್ಷವನ್ನು ನಾವು ನೋಡುತ್ತೇವೆ. ಸದ್ಯ ಕೊಪ್ಪಳದ ಕುಷ್ಟಗಿ ತಾಲೂಕಿನ ಬಸಾಪುರದಲ್ಲಿ ನಾಗರ ಹಾವು ಮತ್ತು ಬೆಕ್ಕಿನ ಕಾದಾಟ (snake And Cat fighting) ನಡೆದಿದ್ದು, ವಿಡಿಯೊ ವೈರಲ್‌ (Video Viral) ಆಗಿದೆ.

Cat And snake fighting

ಶನಿವಾರ ಬೆಳಗ್ಗೆ ಬಸಾಪುರ ಸಮೀಪ ಇದ್ದ ಹೋಟೆಲ್‌ವೊಂದರ ಬಳಿ ಸುಮಾರು 5 ಅಡಿ ಉದ್ದದ ನಾಗರಹಾವು ಹೆಡೆ ಎತ್ತಿ ಬುಸುಗುಡುತ್ತಿತ್ತು. ಹೋಟೆಲ್‌ ಮಾಲೀಕರೆಲ್ಲ ಹಾವು ಕಂಡು ಗಾಬರಿ ಆಗಿದ್ದರು.

Cat And snake fighting

ಅಯ್ಯೋ ಹಾವು ಏನಾದರೂ ಹೋಟೆಲ್‌ವೊಳಗೆ ನುಗ್ಗಿ ಬಿಟ್ಟರೆ? ಏನಾಪ್ಪ ಮಾಡುವುದು ಎಂದು ಆತಂಕಕ್ಕೆ ಒಳಗಾಗಿದ್ದರು. ಹತ್ತಿರ ನಿಂತು ಹಾವನ್ನು ದೂರಕ್ಕೆ ಕಳಿಸಲು ಪ್ರಯತ್ನಿಸುತ್ತಿದ್ದರು. ಆದರೆ ಹಾವು ಕಚ್ಚಿ ಬಿಟ್ಟರೆ ಎಂದು ಹಿಂದೆ ಸರಿದಿದ್ದರು.

Cat And snake fighting Video viral

ಮಾಲೀಕನ ಜಾಡು ಹಿಡಿದು ಬಂದಿದ್ದ ಬೆಕ್ಕು, ಬುಸುಗುಡುತ್ತಿದ್ದ ಹಾವು ಕಂಡು ಕಾದಾಟಕ್ಕೆ ನಿಂತಿತ್ತು. ಹಾವು ಹೆಡೆ ಎತ್ತಿ ಹೋರಾಟ ನಡೆಸಿದರೆ, ಬೆಕ್ಕು ಕಾಲಿನ ಪಂಜರದಿಂದ ಹಿಮ್ಮೆಟ್ಟಿಸುತ್ತಿತ್ತು. ಬೆಕ್ಕು ತನ್ನ ದೃಷ್ಟಿಯನ್ನು ಕದಲಿಸದೆ ನಾಗರ ಹಾವನ್ನೇ ದುರುಗುಟ್ಟಿಕೊಂಡು ನೋಡುತ್ತಾ ದಾಳಿ ಮಾಡುತ್ತಿತ್ತು.

Cat And snake fighting

ನಾಗರ ಹಾವು ಹೋಟೆಲ್‌ ಒಳಗೆ ಬರದಂತೆ ತಡೆಯಲು ಬೆಕ್ಕು ಸುಮಾರು ಒಂದು ಗಂಟೆ ಕಾಲ ಕಾದಾಟ ನಡೆಸಿದೆ. ಇದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಯಿಡಿದಿದ್ದಾರೆ.

Cat And snake fighting Video viral

ಹೆಜ್ಜೆ ಸದ್ದು ಹಾವಿಗೆ ಗೊತ್ತಾಗದಂತೆ ಮೆಲ್ಲ ಮೆಲ್ಲನೇ ನಡೆದು ಬಂದು ಹಾವಿನ ಮೇಲೆ ಬೆಕ್ಕು ದಾಳಿ ಮಾಡಿದೆ. ಜಿದ್ದಾಜಿದ್ದಿಯಲ್ಲಿ ಕೊನೆಗೆ ನಾಗರ ಹಾವು ಬೆಕ್ಕಿಗೆ ಸೋತು ಪಲಾಯನ ಮಾಡಿದೆ.

ಇಲ್ಲಿದೆ ನೋಡಿ ರೋಚಕ ಕಾದಾಟದ ವಿಡಿಯೊ

ಇನ್ನಷ್ಟು ವೈರಲ್‌ ವಿಡಿಯೊಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಜತೆಗೆ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಸರೆಂಡರ್‌ ಆಗಿದ್ದಾರೆ. ಇತ್ತ ಎ1 ಆರೋಪಿಯಾಗಿರುವ ಪವಿತ್ರಗೌಡ ನೋಡಲು ಠಾಣೆಗೆ ಸಂಬಂಧಿಕರ ದಂಡು ಬಂದಿತ್ತು.

VISTARANEWS.COM


on

By

actor Darshan
ಜಗದೀಶ್ ಹಾಗೂ ಅನುಕುಮಾರ್ ಪೊಲೀಸರಿಗೆ ಶರಣಾದ ಆರೋಪಿಗಳು
Koo

ಬೆಂಗಳೂರು/ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಹಲವರು ಸೆರೆಯಾಗಿದ್ದು, ಇದೀಗ ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಸರೆಂಡರ್ ಆಗಿದ್ದಾರೆ.

ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಾಕರ್ ಅವರಿಗೆ ಶರಣಾಗಿದ್ದಾರೆ. ಅನು ಚಿತ್ರದುರ್ಗದ ಸಿಹಿನೀರ ಹೊಂಡ ನಿವಾಸಿಯಾದರೆ, ಜಗದೀಶ್ ಚಿತ್ತದುರ್ಗದ ರೈಲ್ವೆ ಸ್ಟೇಶನ್ ಏರಿಯಾ ನಿವಾಸಿಯಾಗಿದ್ದಾನೆ. ಸದ್ಯ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಒಟ್ಟು 16 ಮಂದಿ ಆರೋಪಿಗಳು ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ.

ಪವಿತ್ರಗೌಡ ನೋಡಲು ಬಂದ ಸಂಬಂಧಿಕರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಗೌಡ ಭೇಟಿಗೆ ಆಕೆಯ ಸಹೋದರಿ ಹಾಗೂ ಸಂಬಂಧಿ ಬಂದಿದ್ದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಕೊಲೆ ಆರೋಪಿ ಪವಿತ್ರಗೌಡ ಭೇಟಿಗೆ ಪೊಲೀಸರು ನಿರಾಕರಿಸಿದರು. ಫೋನ್ ಮಾಡಿಸಿ ಒಳಗಡೆ ಹೋಗಲು ಪ್ರಯತ್ನಿಸಿದರು. ಆದರೆ ಬಂದ ದಾರಿಗೆ ಸುಂಕ ಎಲ್ಲ ಎಂಬಂತೆ ಬರಿಗೈಯ್ಯಲ್ಲಿ ಹೋದರು. ಈ ಮೊದಲು ಸಾಂತ್ವನ ಕೇಂದ್ರಕ್ಕೆ ಹೋಗಿದ್ದಾಗ ಠಾಣೆಯಲ್ಲಿ ಭೇಟಿ ಮಾಡುವಂತೆ ಸೂಚಿಸಿ ಕಳಿಸಲಾಗಿತ್ತು. ಈಗ ಠಾಣೆಗೆ ಬಂದು ಮನವಿ ಮಾಡಿಕೊಂಡರು ಪವಿತ್ರಗೌಡ ಭೇಟಿಗೆ ಪೊಲೀಸರು ಅವಕಾಶ ಮಾಡಿಕೊಟ್ಟಿಲ್ಲ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

ಆರೋಪಿಗಳ ಫೋನ್‌ ಜಪ್ತಿ, ಎಫ್‌ಎಸ್‌ಎಲ್‌ಗೆ ರವಾನೆ

ಬೆಂಗಳೂರು: ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಸೆರೆಯಾಗಿರುವ ನಟ ದರ್ಶನ್ (Actor Darshan) ಮತ್ತು ಆತನ ಗ್ಯಾಂಗ್ ವಿಚಾರಣೆ ಮುಂದುವರಿದಿದೆ. ಇದೀಗ ತನಿಖೆಯಲ್ಲಿ ಮಹತ್ವದ ಸಾಕ್ಷ್ಯ ಇದೆ ಎನ್ನಲಾದ ಎರಡು ಮೊಬೈಲ್‌ ಫೋನ್‌ಗಳನ್ನು ನಾಶ ಮಾಡಿದ್ದಾರೆ (Darshan Arrested) ಎನ್ನಲಾಗಿದೆ.

ರೇಣುಕಾಸ್ವಾಮಿಯ ಮೃತದೇಹವನ್ನು ಸುಮ್ಮನಹಳ್ಳಿಯ ರಾಜಕಾಲುವೆಗೆ ಎಸೆದು, ಬಳಿಕ ಅದೇ ಜಾಗದಲ್ಲಿ 2 ಮೊಬೈಲ್ ಮೋರಿಗೆ ಎಸೆದಿದ್ದಾರೆ. ಒಂದು ಮೊಬೈಲ್‌ ರೇಣುಕಾಸ್ವಾಮಿಗೆ ಸೇರಿದ್ದು, ಇನ್ನೊಂದು ಓರ್ವ ಆರೋಪಿಯ ಮೊಬೈಲ್ ಫೋನ್‌ ಅನ್ನು ಎಸೆದು ಹೋಗಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳು ಈ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಇನ್ನೂ ಬಿಸಾಡಿರುವ ಮೊಬೈಲ್‌ನಲ್ಲಿ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿರುವ ವಿಡಿಯೊವನ್ನು ಆರೋಪಿಗಳು ಚಿತ್ರೀಕರಿಸಿದ್ದರು ಎನ್ನಲಾಗಿದೆ. ಹೀಗಾಗಿ ಕೊಲೆಯಾದ ರೇಣುಕಾಸ್ವಾಮಿ ಫೋನ್‌ ಜತೆಗೆ ಆರೋಪಿಯೊಬ್ಬನ ಮೊಬೈಲ್‌ ಫೋನ್‌ನನ್ನು ಮೋರಿಗೆ ಎಸೆಯಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಹಲವರು ಬಂಧಿಯಾಗಿದ್ದಾರೆ. ಅನ್ನಪೂರ್ಣೇಶ್ವರಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳಿಂದ ಒಟ್ಟು 14 ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. 14 ಮೊಬೈಲ್‌ಗಳ ಡಾಟಾ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಮೊಬೈಲ್‌ನಲ್ಲಿ ಹಲವಾರು ಮಾಹಿತಿಗಳು ಡಿಲೀಟ್ ಆಗಿರುವ ಅನುಮಾನ ಇದ್ದು, ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಕ್ಕಾಗಿ ಡಾಟಾ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ (FSL) ರವಾನೆ ಮಾಡಲಾಗಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

E. Tukaram: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಈ. ತುಕಾರಾಂ

E. Tukaram: ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

E. Tukaram
Koo

ಬಳ್ಳಾರಿ: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಈ. ತುಕಾರಾಂ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು.

ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ

ಗಣಿ ನಾಡು ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ (Bellary Election Result 2024) ಮಾಜಿ ಸಚಿವ, ಬಿಜೆಪಿಯ ಬಿ.ಶ್ರೀರಾಮುಲು (B Sriramulu) ಅವರಿಗೆ ಭಾರಿ ಮುಖಭಂಗವಾಗಿತ್ತು. ಬಿ.ಶ್ರೀರಾಮುಲು ಅವರ ವಿರುದ್ಧ ಕಾಂಗ್ರೆಸ್‌ನ ಇ. ತುಕಾರಾಮ್‌ (E Tukaram) ಅವರು 98,992 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಬಿ. ಶ್ರೀರಾಮುಲು ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಸೋಲುಂಟಾಗಿದ್ದು ತೀವ್ರ ಮುಖಭಂಗ ಆದಂತಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಅವರಿಗೆ 7,30,845 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿವೆ. ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಶೇ.20ರಷ್ಟು ಪರಿಶಿಷ್ಟ ಪಂಗಡದ ಮತಗಳಿದ್ದು, ಇವುಗಳ ಮೇಲೆ ಉಭಯ ಅಭ್ಯರ್ಥಿಗಳ ಗಮನ ಹೆಚ್ಚಿತ್ತು. ಶ್ರೀರಾಮುಲು ಅವರಿಗೆ ನರೇಂದ್ರ ಮೋದಿ ಅವರ ಅಲೆ, ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಎಂಬ ಹಣೆಪಟ್ಟಿ, ಹಿಂದುತ್ವ, ಲಿಂಗಾಯತರು ಸೇರಿ ಹಲವು ಸಮುದಾಯಗಳ ಮತಗಳ ಭದ್ರತೆಯು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿತ್ತು. ಅದರಲ್ಲೂ, ಜನಾರ್ದನ ರೆಡ್ಡಿ ಅವರ ಪಕ್ಷವು ಬಿಜೆಪಿ ಜತೆ ವಿಲೀನಗೊಂಡಿರುವುದು ಶ್ರೀರಾಮುಲು ಅವರಿಗೆ ಆನೆ ಬಲ ಬಂದಂತಾಗಿತ್ತು. ಆದರೂ ಅವರು ಗೆಲುವು ಸಾಧಿಸುವಲ್ಲಿ ವಿಫಲವಾದರು.

ಇದನ್ನೂ ಓದಿ | R Ashok: ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ; ಆರ್. ಅಶೋಕ್‌ ಆರೋಪ

ಇ. ತುಕಾರಾಮ್‌ ಅವರಿಗೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳೇ ಪ್ರಮುಖ ಅಸ್ತ್ರವಾಗಿದ್ದವು. ಬಿ.ಶ್ರೀರಾಮುಲು ಅವರಿಗೆ ಟಿಕೆಟ್‌ ನೀಡಿರುವ ಕಾರಣ ಪಕ್ಷದಲ್ಲಿ ಉಂಟಾಗಿರುವ ಸಣ್ಣ ಮಟ್ಟದ ಭಿನ್ನಾಭಿಪ್ರಾಯಗಳನ್ನೇ ಬಳಸಿಕೊಂಡು ತುಕಾರಾಮ್‌ ಅವರು ಅಬ್ಬರದ ಪ್ರಚಾರ ಕೈಗೊಂಡಿದ್ದರು. ಕಾಂಗ್ರೆಸ್‌ನ ಅಲೆಯೂ ತಕ್ಕಮಟ್ಟಿಗಿದ್ದು, ಮುಸ್ಲಿಮರು, ಹಿಂದುಳಿದ ವರ್ಗಗಳ ಸಮುದಾಯಗಳ ಮತಗಳನ್ನು ನೆಚ್ಚಿಕೊಂಡಿದ್ದರು. ಇದೆಲ್ಲದರ ಫಲವಾಗಿ ಅವರು ಗೆಲುವು ಸಾಧಿಸಿದರು ಎಂದು ತಿಳಿದುಬಂದಿದೆ.

Continue Reading

ಸಿನಿಮಾ

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯು ಚುರುಕುಗೊಳ್ಳುತ್ತಿದ್ದು, ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯಲ್ಲಿ ಮಹತ್ವದ ಸಾಕ್ಷ್ಯ ಇದೆ ಎನ್ನಲಾದ ಮೊಬೈಲ್‌ ಫೋನ್‌ನನ್ನು ಆರೋಪಿಗಳು ಮೋರಿಗೆ ಬಿಸಾಡಿದ್ದಾರೆ ಎನ್ನಲಾಗಿದೆ.

VISTARANEWS.COM


on

By

Actor Darshan
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಸೆರೆಯಾಗಿರುವ ನಟ ದರ್ಶನ್ (Actor Darshan) ಮತ್ತು ಆತನ ಗ್ಯಾಂಗ್ ವಿಚಾರಣೆ ಮುಂದುವರಿದಿದೆ. ಇದೀಗ ತನಿಖೆಯಲ್ಲಿ ಮಹತ್ವದ ಸಾಕ್ಷ್ಯ ಇದೆ ಎನ್ನಲಾದ ಎರಡು ಮೊಬೈಲ್‌ ಫೋನ್‌ಗಳನ್ನು ನಾಶ ಮಾಡಿದ್ದಾರೆ (Darshan Arrested) ಎನ್ನಲಾಗಿದೆ.

ರೇಣುಕಾಸ್ವಾಮಿಯ ಮೃತದೇಹವನ್ನು ಸುಮ್ಮನಹಳ್ಳಿಯ ರಾಜಕಾಲುವೆಗೆ ಎಸೆದು, ಬಳಿಕ ಅದೇ ಜಾಗದಲ್ಲಿ 2 ಮೊಬೈಲ್ ಮೋರಿಗೆ ಎಸೆದಿದ್ದಾರೆ. ಒಂದು ಮೊಬೈಲ್‌ ರೇಣುಕಾಸ್ವಾಮಿಗೆ ಸೇರಿದ್ದು, ಇನ್ನೊಂದು ಓರ್ವ ಆರೋಪಿಯ ಮೊಬೈಲ್ ಫೋನ್‌ ಅನ್ನು ಎಸೆದು ಹೋಗಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳು ಈ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಇನ್ನೂ ಬಿಸಾಡಿರುವ ಮೊಬೈಲ್‌ನಲ್ಲಿ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿರುವ ವಿಡಿಯೊವನ್ನು ಆರೋಪಿಗಳು ಚಿತ್ರೀಕರಿಸಿದ್ದರು ಎನ್ನಲಾಗಿದೆ. ಹೀಗಾಗಿ ಕೊಲೆಯಾದ ರೇಣುಕಾಸ್ವಾಮಿ ಫೋನ್‌ ಜತೆಗೆ ಆರೋಪಿಯೊಬ್ಬನ ಮೊಬೈಲ್‌ ಫೋನ್‌ನನ್ನು ಮೋರಿಗೆ ಎಸೆಯಲಾಗಿದೆ.

ಆರೋಪಿಗಳ ಫೋನ್‌ ಜಪ್ತಿ, ಎಫ್‌ಎಸ್‌ಎಲ್‌ಗೆ ರವಾನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಹಲವರು ಬಂಧಿಯಾಗಿದ್ದಾರೆ. ಅನ್ನಪೂರ್ಣೇಶ್ವರಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳಿಂದ ಒಟ್ಟು 14 ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. 14 ಮೊಬೈಲ್‌ಗಳ ಡಾಟಾ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಮೊಬೈಲ್‌ನಲ್ಲಿ ಹಲವಾರು ಮಾಹಿತಿಗಳು ಡಿಲೀಟ್ ಆಗಿರುವ ಅನುಮಾನ ಇದ್ದು, ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಕ್ಕಾಗಿ ಡಾಟಾ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ (FSL) ರವಾನೆ ಮಾಡಲಾಗಿದೆ.

ಇದನ್ನೂ ಓದಿ: Actor Darshan: ಹಲವು ವರ್ಷಗಳಿಂದ ದರ್ಶನ್ ಆಪ್ತ ʻಮಲ್ಲಿʼನಾಪತ್ತೆ; ರೇಣುಕಾ ಸ್ವಾಮಿಯ ಗತಿಯೇ ಆಯ್ತಾ?

ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renuka Swamy murder case) ಈಗಾಗಲೇ ದರ್ಶನ್‌ ಸೇರಿ 13 ಆರೋಪಿಗಳನ್ನು (Actor Darshan) ‌ಪೊಲೀಸರು ಅರೆಸ್ಟ್‌ ಮಾಡಿದ್ದು, ಮತ್ತಷ್ಟು ಆರೋಪಿಗಳು ಸೆರೆಯಾಗುವ ಸಾಧ್ಯತೆ ಇದೆ. ಈ ನಡುವೆ ಹಂತಕರಿಗೆ ನೀಡಲು ಆರೋಪಿ ವಿನಯ್ ಮಾಲೀಕತ್ವದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ರೂ.ಗಳನ್ನು ಜಪ್ತಿ ಮಾಡಲಾಗಿದೆ.

ಆರ್‌.ಆರ್‌.ನಗರದ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಆರೋಪಿಗಳ ತಂಡ ಪಾರ್ಟಿ ಮಾಡಿತ್ತು. ವಿನಯ್ ಮಾಲೀಕತ್ವದ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ 30 ಲಕ್ಷ ಹಣ ಸೀಜ್ ಮಾಡಲಾಗಿದೆ. ಇದು ಕೊಲೆ ಆರೋಪ ಹೊರುವ ಯುವಕರಿಗೆ ನೀಡಲು ಇಟ್ಟಿದ್ದ ಹಣ ಎನ್ನಲಾಗಿದೆ. ಕೊಲೆ ನಾವೇ ಮಾಡಿದ್ದು ಎಂದು ಒಪ್ಪಿಕೊಂಡು ಬಂದಿದ್ದ ರಾಘವೇಂದ್ರ, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿಗೆ ತಲಾ 5 ಲಕ್ಷ ನೀಡಲು ಹಣ ಇಡಲಾಗಿತ್ತು.

ಪವಿತ್ರಾ ಗೌಡ ಕಾಲಿಗೆ ಬಿದ್ದರೂ ಕರಗಲಿಲ್ಲ ಆರೋಪಿಗಳ ಮನಸ್ಸು

ಹಲ್ಲೆ ಸಮಯದಲ್ಲಿ ಪವಿತ್ರಾ ಗೌಡ ಕಾಲಿಗೆ ರೇಣುಕಾಸ್ವಾಮಿಯನ್ನು ಬೀಳಿಸಿ ಡಿ ಗ್ಯಾಂಗ್ ಕ್ಷಮಾಪಣೆ ಕೇಳಿಸಿತ್ತು ಎನ್ನಲಾಗಿದೆ. ಅಕ್ಕನ ಕಾಲಿಗೆ ಬೀಳೋ ಎಂದು ಸೂ… ಮಗನನೇ ಎಂದು ಹಿಂಸೆ ನೀಡಲಾಗಿದೆ. ದರ್ಶನ್ ಹೊಡೆತಕ್ಕೆ ನೋವು ತಾಳಲಾರದೆ ಪವಿತ್ರಾ ಗೌಡ ಕಾಲಿಗೆ ಬಿದ್ದು ರೇಣುಕಾಸ್ವಾಮಿ ಅಂಗಲಾಚಿಕೊಂಡಿದ್ದ. ಮೆಡ್ಂ ತಪ್ಪಾಯಿತು, ಕ್ಷಮಿಸಿ ಬಿಡಿ, ನಿಮ್ಮ ಕಾಲು ಹಿಡಿದುಕೊಳ್ತೇನೆ ಎಂದು ಗೋಗರೆದಿದ್ದ. ಆಗ ತಪ್ಪಾಯಿತು ಸಾರ್ ಎಂದು ಕಾಲಿಗೆ ಬಿದ್ದಾಗ, ದರ್ಶನ್ ಎಗರಿಸಿ ಒದ್ದಿದ್ದರು. ಪೊಲೀಸರು ಸ್ಥಳ ಮಹಜರು ಮಾಡುವಾಗ ಈ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Arun Somanna: ವಂಚನೆ, ಜೀವ ಬೆದರಿಕೆ; ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್

Arun Somanna: ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

Arun Somanna
Koo

ಬೆಂಗಳೂರು: ವಂಚನೆ, ಜೀವ ಬೆದರಿಕೆ ಆರೋಪದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್ ದಾಖಲಾಗಿದೆ. ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರುಣ್ ಸೋಮಣ್ಣ, ಜೀವನ್ ಕುಮಾ‌ರ್ ಮತ್ತು ಪ್ರಮೋದ್ ರಾವ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಸಂಜಯ ನಗರದ ಎಇಸಿಎಸ್ ನಿವಾಸಿ ತೃಪ್ತಿ ಹೆಗಡೆ ಎಂಬುವವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 37ನೇ ಹೆಚ್ಚುವರಿ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಅರುಣ್ ಸೋಮಣ್ಣ‌ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ದೂರುದಾರರಾದ ತೃಪ್ತಿ ಹಾಗೂ ಮಧ್ವರಾಜ್ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರು. 2013ರಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಧ್ವರಾಜ್‌ಗೆ ಆರುಣ್ ಸೋಮಣ್ಣ ಪರಿಚಯವಾಗಿತ್ತು. 2017ರಲ್ಲಿ ಅರುಣ್ ಸೋಮಣ್ಣ ಪುತ್ರಿಯ ಹುಟ್ಟುಹಬ್ಬ ಕಾರ್ಯಕ್ರಮವನ್ನೂ ಮಧ್ವರಾಜ್ ಒಡೆತನದ ಕಂಪನಿ ಆಯೋಜಿಸಿತ್ತು. ಇದರಿಂದ ಆರುಣ್ ಸೋಮಣ್ಣ ಮಧ್ವರಾಜ್ ಜತೆ ಉತ್ತಮ ಬಾಂಧವ್ಯ ಏರ್ಪಟ್ಟಿತ್ತು.

ಅರುಣ್, ಮಧ್ವರಾಜ್ ಜಂಟಿಯಾಗಿ ನೈಬರ್‌ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಪಾರ್ಟ್ನರ್‌ಶಿಪ್ ಡೀಡ್ ಮೇಲೆ ಆರಂಭಿಸಿದ್ದರು. ಆದ್ದರಿಂದ ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಅರುಣ್ ವಹಿಸಿಕೊಂಡಿದ್ದರು. ನಂತರ ಕೆಲ ತಿಂಗಳಲ್ಲಿ ಕಂಪನಿಯ ವ್ಯವಹಾರದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆ ಮಧ್ವರಾಜ್‌ಗೆ ಕಂಪನಿಗೆ ರಾಜೀನಾಮೆ ನೀಡಲು ಒತ್ತಾಯಿಸಿ ಕಿರುಕುಳ, ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪ ಅರುಣ್‌ ಸೋಮಣ್ಣ ವಿರುದ್ಧ ಕೇಳಿಬಂದಿದೆ.

ಇದನ್ನೂ ಓದಿ | Train Accident : ಹಳಿ ದಾಟುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

ಕಂಪನಿಯಲ್ಲಿ ಲಾಸ್ ಆಗಿದ್ದ ಹಣವನ್ನು ಬೆದರಿಸಿ, ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪವಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಸಂಜಯ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

ಕಾರವಾರ: ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದವರು. ಜೂಜಾಟ ಆರೋಪದಡಿ ಭಾಸ್ಕರ್‌ ವಿರುದ್ಧ ರಾಮನಗರ ಪಿಎಸ್ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದಾನೆ.

ಇದನ್ನೂ ಓದಿ | Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Continue Reading
Advertisement
World Blood Donor Day
ಆರೋಗ್ಯ3 mins ago

World Blood Donor Day: ರಕ್ತದಾನ ಯಾರು ಮಾಡಬಹುದು? ಯಾರು ಮಾಡಬಾರದು?

actor Darshan
ಬೆಂಗಳೂರು3 mins ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Money Guide
ಮನಿ-ಗೈಡ್8 mins ago

Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Anant Ambani Love Letter Printed On Radhika Merchant Pre-Wedding Dress
ಬಾಲಿವುಡ್16 mins ago

Anant Ambani: ಅನಂತ್ ಅಂಬಾನಿ ಕೊಟ್ಟ ಪ್ರೇಮ ಪತ್ರ ಪ್ರಿಂಟ್ ಆಗಿದ್ದ ಗೌನ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌!

E. Tukaram
ಕರ್ನಾಟಕ24 mins ago

E. Tukaram: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಈ. ತುಕಾರಾಂ

INDW vs SAW
ಕ್ರೀಡೆ31 mins ago

INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

Actor Darshan
ಸಿನಿಮಾ36 mins ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

Pawan Kalyan Fan Narendra cut hairs after Five Years
ಟಾಲಿವುಡ್44 mins ago

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Arun Somanna
ಕರ್ನಾಟಕ55 mins ago

Arun Somanna: ವಂಚನೆ, ಜೀವ ಬೆದರಿಕೆ; ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್

Nagastra 1
ದೇಶ59 mins ago

Nagastra 1: ಭಾರತೀಯ ಸೇನೆ ಸೇರಿದ ‘ದೇಶೀಯ’ ನಾಗಾಸ್ತ್ರ ಡ್ರೋನ್‌ಗಳು; ಉಗ್ರರಿಗೆ ನಡುಕ, ಏನಿದರ ವಿಶೇಷ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌