Video Viral: ಉಚಿತ ಬಸ್‌ನಲ್ಲಿ ಹೆಚ್ಚಿದ ಮಹಿಳೆಯರ ʼಶಕ್ತಿʼ; ಡ್ರೈವರ್‌ ಸೀಟ್‌ನಿಂದಲೇ ಹತ್ತಿದ ನಾರಿಯರು! Vistara News
Connect with us

ಕರ್ನಾಟಕ

Video Viral: ಉಚಿತ ಬಸ್‌ನಲ್ಲಿ ಹೆಚ್ಚಿದ ಮಹಿಳೆಯರ ʼಶಕ್ತಿʼ; ಡ್ರೈವರ್‌ ಸೀಟ್‌ನಿಂದಲೇ ಹತ್ತಿದ ನಾರಿಯರು!

Congress Guarantee: ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ರಾಜ್ಯದಲ್ಲಿ ಮಹಿಳೆಯರ ಬಸ್‌ ಸಂಚಾರ ಹೆಚ್ಚಳವಾಗಿದೆ. ಇದರಿಂದ ಅಲ್ಲಲ್ಲಿ ಸಮಸ್ಯೆಗಳೂ ಆಗುತ್ತಿವೆ. ಈಗ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಡ್ರೈವರ್‌ ಸೀಟ್‌ನ ಡೋರ್‌ ಮೂಲಕವೇ ಮಹಿಳೆಯರು ಬಸ್‌ ಏರಿದ ಘಟನೆ ನಡೆದಿದೆ.

VISTARANEWS.COM


on

Women climb from driver seat in Chintamani
Koo

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ “ಶಕ್ತಿ”ಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ. ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಮಹಿಳೆಯರು ಅತ್ಯುತ್ಸಾಹದಿಂದ ಬಸ್‌ ಏರುತ್ತಿದ್ದಾರೆ. ಆದರೆ, ಈಗ ಕೆಲವು ಕಡೆ ಸಾರಿಗೆ ಸಿಬ್ಬಂದಿಗೆ ಸಂಕಷ್ಟ ತಂದೊಡ್ಡಿದೆ. ಜತೆಗೆ ಎಲ್ಲ ಕಡೆಯೂ ರಶ್‌.. ರಶ್..‌ ಎಂಬ ಸ್ಥಿತಿ ನಿರ್ಮಾಣ ಆಗಿದೆ. ಈಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುವ ಬಸ್‌ನಲ್ಲಿ ಮಹಿಳೆಯರು ಬಡಿದಾಡಿಕೊಂಡಿದ್ದರು. ಇನ್ನು ಮಂಡ್ಯ, ಚಾಮರಾಜನಗರದಲ್ಲಿ ಬಸ್‌ ಡೋರ್‌ ಅನ್ನೇ ಕಿತ್ತು ಹಾಕಿದ್ದರು. ಈಗ ಚಿಕ್ಕಬಳ್ಳಾಪುರದಲ್ಲಿ ಬಸ್‌ ರಶ್‌ ಇದ್ದ ಕಾರಣ ಡ್ರೈವರ್ ಸೀಟಿನ ಬಾಗಿಲಿನಿಂದ ಮಹಿಳೆಯರು ಹತ್ತಿದ್ದಾರೆ! ಈ ವಿಡಿಯೊ ಈಗ ವೈರಲ್‌ (Video Viral) ಆಗಿದೆ.

ಚಿಂತಾಮಣಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಶಕ್ತಿ ಯೋಜನೆ ಬಂದ ಮೇಲೆ ಮಹಿಳೆಯರ ಸಂಚಾರ ಹೆಚ್ಚಾಗಿದೆ. ಚಿಂತಾಮಣಿ ಬಸ್ ನಿಲ್ದಾಣಕ್ಕೆ ಬಸ್‌ ಬರುತ್ತಿದ್ದಂತೆ ಜನರು ಓಡೋಡಿ ಬಂದಿದ್ದಾರೆ. ಎಲ್ಲರಿಗೂ ಸೀಟು ಹಿಡಿಯುವ ತವಕ. ಹೀಗಾಗಿ ಕೆಲವರು ಕಿಟಕಿ ಒಳಗಿನಿಂದ ಸೀಟ್‌ ಮೇಲೆ ತಮ್ಮ ಬ್ಯಾಗ್‌, ಕರ್ಚೀಫ್‌ಗಳನ್ನು ಒಗೆದರೆ, ಮತ್ತೆ ಕೆಲವರು ಡೋರ್‌ ಮೂಲಕ ಬೇಗ ಹೋಗಿ ಸೀಟ್‌ ಹಿಡಿಯುವ ದಾವಂತದಲ್ಲಿದ್ದರು. ಆದರೆ, ಮತ್ತೆ ಕೆಲವು ಮಹಿಳೆಯರು ಹೆಚ್ಚಿಗೆ ಸ್ಮಾರ್ಟ್‌ ಆಗಲು ಹೋಗಿ ಹೀಗಿ ಮಾಡಿದ್ದಾರೆ.

ಇನ್ನು ಬಸ್‌ನ ಮೇನ್‌ ಡೋರ್‌ನಿಂದ ಹೋದರೆ ಪ್ರಯೋಜನ ಇಲ್ಲ ಎಂದು ಲೆಕ್ಕ ಹಾಕಿದ ಕೆಲವು ಮಹಿಳೆಯರು ಸೀದಾ ಡ್ರೈವರ್‌ ಸೀಟ್‌ ಬಳಿಗೆ ಓಡಿದ್ದಾರೆ. ಅಲ್ಲಿ ಹೋದವರೇ ಡೋರ್‌ ಓಪನ್‌ ಮಾಡಿ ಅದರಿಂದ ಹತ್ತಲಾರಂಭಿಸಿದ್ದಾರೆ. ಹಾಗೂ ಹೀಗೂ ನಾಲ್ಕೈದು ಮಹಿಳೆಯರು ಅದರ ಮೂಲಕ ನುಗ್ಗಿಬಿಟ್ಟಿದ್ದಾರೆ. ಈ ವಿಚಾರ ತಿಳಿದ ಬಸ್‌ ನಿರ್ವಾಹಕ ಸೀದಾ ಬಂದು ಬೈದಿದ್ದು, ಮತ್ತೆ ಹತ್ತಲು ಮುಂದಾದ ಕೆಲವರನ್ನು ಕೆಳಗೆ ಇಳಿಸಿ ಕಳಿಸಿದ್ದಾರೆ.

ಚಿಂತಾಮಣಿಯಿಂದ ಬೆಂಗಳೂರು ಸೇರಿದಂತೆ ಹಲವು ಸ್ಥಳಗಳಿಗೆ ತೆರಳುವ ಬಸ್‌ಗಳಿಗೆ ಭಾರಿ ಬೇಡಿಕೆ ಬಂದಿದ್ದು, ಸಿಕ್ಕ ಸಿಕ್ಕ ಬಸ್‌ಗಳನ್ನು ಜನರು ಹತ್ತುತ್ತಿದ್ದಾರೆ. ಹೀಗಾಗಿ ಬಹುತೇಕ ಎಲ್ಲ ಬಸ್‌ಗಳು ತುಂಬಿ ತುಳುಕುತ್ತಿವೆ. ಇನ್ನು ಪ್ರಯಾಣಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ನೋಡಿ ಸ್ವಾಮಿ ನಾವ್‌ ಇರೋದೇ ಹೀಗೆ! ಈ ಮಹಿಳೆಯರು ಬಸ್‌ ಹತ್ತಿದ್ದು ಹೇಗೆ? ಇಲ್ಲಿದೆ ವಿಡಿಯೊ!

ಇದನ್ನೂ ಓದಿ: Video Viral: ಜಗದ ಪರಿವೇ ಇಲ್ಲದೆ ರೋಡಿನ ಮಧ್ಯೆ ಬಂದಳು; ವೇಗವಾಗಿ ಬಂದ ಬಸ್‌ ಇನ್ನೇನು ಗುದ್ದೇ ಬಿಡ್ತು?

ಬೆಳಗಾವಿಯಲ್ಲಿ ಬಸ್‌ ಹತ್ತಲು ಸರತಿ ಸಾಲು! ಇಲ್ಲಿದೆ ವಿಡಿಯೊ

ಇನ್ನು 15-20 ದಿನದಲ್ಲಿ ಜನಸಂದಣಿ ತಗ್ಗಬಹುದು- ರಾಮಲಿಂಗಾ ರೆಡ್ಡಿ

ಹೊಸತಾಗಿ ಯೋಜನೆ ಜಾರಿಯಾಗಿರುವುದರಿಂದ ಮಹಿಳೆಯರು ಹುರುಪಿನಿಂದ ಸಂಚಾರ ಮಾಡುತ್ತಿದ್ದಾರೆ. ಇನ್ನು 15-20 ದಿನದಲ್ಲಿ ಜನಸಂದಣಿ ತಗ್ಗಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿಸ್ತಾರ ನ್ಯೂಸ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದರು. ಅವರು ಸಾರಿಗೆ ಇಲಾಖೆಗೆ ಸಂಬಂಧಪಟ್ಟಂತೆ ಇಲಾಖೆಯ ಹಾಗೂ ಜನರ ಸಮಸ್ಯೆ, ದೂರುಗಳ ಬಗ್ಗೆ ವಿಸ್ತಾರ ನ್ಯೂಸ್‌ ಏರ್ಪಡಿಸಿದ್ದ “ಹಲೋ ಸಚಿವರೇ” ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಈ ಪ್ರತಿಕ್ರಿಯೆ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

VISTARANEWS.COM


on

Edited by

Cat eyed snake
Koo

ಪುತ್ತೂರು (ದಕ್ಷಿಣ ಕನ್ನಡ): ನೀವು ಖಂಡಿತವಾಗಿಯೂ ಬೆಕ್ಕಿನ ಕಣ್ಣಿನ ಸುಂದರಿಯರನ್ನು (Cat eyed Beauties) ನೋಡಿರುತ್ತೀರಿ. ನಮ್ಮ ಐಶ್ವರ್ಯ ರೈ (Aishwarya Rai), ಏಮಿ ಜಾಕ್ಸನ್‌ (Amy Jackson), ಹಾಲಿವುಡ್‌ನ ಹಲವು ನಟಿಯರು ತಮ್ಮ ಸುಂದರವಾದ ಕಣ್ಣುಗಳಿಗಾಗಿಯೇ ಹೆಸರುವಾಸಿ. ಅವರೆಲ್ಲ ನಿಮಗೆ ಗೊತ್ತು. ಆದರೆ, ಬೆಕ್ಕಿನ ಕಣ್ಣಿನ ಹಾವು (Cat Eyed Snake) ನಿಮಗೆ ಗೊತ್ತಾ? ನೋಡಿದ್ದೀರಾ? ನೋಡಿಲ್ಲ ಅಂದರೆ ಒಮ್ಮೆ ನೋಡಿಬಿಡಿ ಅಂತ ಕೆಲವು ದಿನದ ಹಿಂದೆ ಈ ಹಾವೇ ಪುತ್ತೂರಿನ ಒಂದು ಮನೆಗೆ ಬಂದಿತ್ತು!

ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಗೆ ಇತ್ತೀಚೆಗೆ ಒಂದು ಹಾವು ಬಂದಿತ್ತು. ಬಂದಿತ್ತು ಅನ್ನುವುದಕ್ಕಿಂತಲೂ ನೇರವಾಗಿ ಬಂದು ಮನೆಯೊಂದರ ಒಳಗಿನ ಟೇಬಲ್ ಮೇಲೆ ಆರಾಮವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿತ್ತು. ಸಾಮಾನ್ಯವಾಗಿ ಹಾವುಗಳು ಜನ ಸಂಚಾರ ಇದ್ದರೆ ಹೆದರುತ್ತವೆ. ಆದರೆ, ಇದು ಮಾತ್ರ ಮನೆಯ ಸದಸ್ಯನೋ ಎನ್ನುವ ಹಾಗೆ ಮಲಗಿಕೊಂಡಿತ್ತು.

Cat eyed snake
ಮನೆಯ ಟೇಬಲ್‌ ಮೇಲೆ ಮಲಗಿದ್ದ ಹಾವು

ರವಿಕೃಷ್ಣ ಅವರು ಜಗಲಿಗೆ ಬಂದಾಗ ಟೇಬಲ್ ಮೇಲೆ ಹಳದಿ ಬಣ್ಣದ ವಸ್ತು ಬಿದ್ದಿದೆ ಅನಿಸಿತು. ಹತ್ತಿರ ಹೋಗಿ ನೋಡಿದಾಗಲೇ ಗೊತ್ತಾದದ್ದು ಅದು ಹಾವು ಅಂತ. ನೋಡಿದರೆ ಕಂದು ಬಣ್ಣದ ಪಟ್ಟೆ ಪಟ್ಟೆಗಳನ್ನು ಹೊಂದಿದ್ದ ಅದು ಅತ್ಯಂತ ವಿಷಕಾರಿ ಕನ್ನಡಿ ಹಾವು ಅನಿಸುತ್ತಿತ್ತು. ಅಬ್ಬಾ ದೇವರೇ.. ಕನ್ನಡಿ ಹಾವು ಮನೆಯೊಳಗೆ ಬಂದಿದೆ ಏನು ಮಾಡುವುದು ಎಂದು ಯೋಚಿಸಿದ ರವಿಕೃಷ್ಣ ಅವರಿಗೆ ನೆನಪಾದದ್ದು ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು.

ಸಣ್ಣ ವಯಸ್ಸಿನಿಂದಲೇ ಹಾವುಗಳ ಬಗ್ಗೆ ಕುತೂಹಲ ತಳೆದಿರುವ ತೇಜಸ್‌ ಅವರು ಕನ್ನಡಿ ಹಾವು ಮನೆಯ ಟೇಬಲ್‌ನಲ್ಲಿ ಮಲಗಿದೆ ಎಂಬ ಸುದ್ದಿ ಕೇಳಿ ಓಡೋಡಿ ಬಂದರು.

ಇದು ಕನ್ನಡಿ ಹಾವಲ್ಲರಿ.. ಬೆಕ್ಕಿನ ಕಣ್ಣಿನ ಹಾವು ಅಂದ್ರು ತೇಜಸ್‌!

ತೇಜಸ್‌ ಅವರು ಓಡೋಡಿ ಬಂದು ಟೇಬಲ್‌ ಹತ್ತಿರ ಹೋದರು. ಮಲಗಿದ್ದ ಹಾವನ್ನು ನೋಡಿ ಅವರು ʻಓ ಇದಾ.. ಇದು ಕನ್ನಡಿ ಹಾವಲ್ಲ ಮಾರಾಯ್ರೆ.. ಇದು ಭಾರಿ ಪಾಪದ ಹಾವುʼ ಎಂದರು. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ ಮಾಡುತ್ತಿರುವ ತೇಜಸ್ ಕಳೆದ ಹಲವು ವರ್ಷಗಳಿಂದ ಹಲವು ರೀತಿಯ, ಹಲವು ಪ್ರಕಾರದ ಹಾವುಗಳನ್ನು ರಕ್ಷಣೆ ಮಾಡಿದ್ದು, ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಹಾವನ್ನು ರಕ್ಷಿಸಿದ್ದಾರೆ.

ಹೀಗಾಗಿ ಅವರಿಗೆ ನೋಡಿದ ಕೂಡಲೇ ಹಾವು ಯಾವುದೆಂದು ಗೊತ್ತಾಗಿದೆ. ಅವರು ಹಾವನ್ನು ಕೈಯಲ್ಲೇ ಹಿಡಿದು ಹೇಳಿದರು: ನೋಡಿ ಇದು ಪಶ್ಚಿಮ ಘಟ್ಟದಂತಹ ದಟ್ಟ ಅರಣ್ಯಗಳ ಮಧ್ಯೆಯೂ ಅಪರೂಪವಾಗಿ ಕಾಣಸಿಗುವ ಬೆಕ್ಕು ಕಣ್ಣಿನ ಹಾವು. ನೋಡಿ, ಇದರ ಕಣ್ಣು ನೋಡಿ, ಐಶ್ವರ್ಯ ರೈ ಕಣ್ಣಿನ ಹಾಗೆ ಇಲ್ವಾ? ಈ ಕಣ್ಣಿನಿಂದಲೇ ಈ ಹಾವಿಗೆ ಈ ಹೆಸರು ಬಂದಿದೆ.

Cat eyed snake in Tejas hand

ಹಾವನ್ನು ಕೈಯಲ್ಲಿ ಹಿಡಿದೇ ತೇಜಸ್‌ ಹಾವಿನ ಕಥೆ ಹೇಳುತ್ತಾ ಹೋದರು

  1. ಇದರ ಹೆಸರು ಫಾರೆಸ್ಟಿನ್ ಕ್ಯಾಟ್ ಸ್ನೇಕ್-Forestian Cat snake (ಬೆಕ್ಕಿನ ಕಣ್ಣಿನ ಹಾವು)
  2. ದಟ್ಟ ಅರಣ್ಯದಲ್ಲಿ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವಿದು
  3. ಬೆಕ್ಕಿನ ಕಣ್ಞಿನಂತೆ ಬಿಳಿ ಕಣ್ಣುಗಳನ್ನು ಹೊಂದಿರುವ ಈ ಹಾವು ರಾತ್ರಿ ವೇಳೆಯಲ್ಲೇ ಸಂಚರಿಸುತ್ತದೆ.
  4. ರಾತ್ರಿಯಲ್ಲಿ ಬೆಕ್ಕಿನ ಕಣ್ಣುಗಳಂತೆಯೇ ಹೊಳೆಯುವ ಈ ಹಾವಿನ ಕಣ್ಣುಗಳು ಅತ್ಯಂತ ಆಕರ್ಷಕವೂ ಆಗಿದೆ.
  5. ರಾತ್ರಿ ವೇಳೆಯಲ್ಲೇ ಬೇಟೆಗಿಳಿಯುವ ಈ ಹಾವು ಹಕ್ಕಿಗಳ ಮೊಟ್ಟೆ, ಸಣ್ಣ ಗಾತ್ರದ ಹಕ್ಕಿ, ಓತಿಕ್ಯಾತ ಸೇರಿದಂತೆ ಹಲವು ಸಣ್ಣ ಗಾತ್ರದ ಪ್ರಾಣಿ ಪಕ್ಷಿಗಳನ್ನು ಬೇಟೆಯಾಡುತ್ತದೆ.
  6. ವಿಷಕಾರಿಯಲ್ಲದ ಈ ಹಾವು ತನ್ನ ರಕ್ಷಣೆಗಾಗಿ ಕಚ್ಚುತ್ತದೆ. ಆದರೆ ಈ ಹಾವು ಕಚ್ಚಿದಲ್ಲಿ ಯಾವುದೇ ತೊಂದರೆಯೂ ಇಲ್ಲ.
  7. ಹಳದಿ ಬಣ್ಣದಲ್ಲಿ ಕಂದು ಬಣ್ಣದ ಪಟ್ಟೆಗಳನ್ನು ಹೊಂದಿರುವ ಈ ಹಾವು ಕನ್ನಡಿ ಹಾವನ್ನೇ ಹೋಲುತ್ತವೆ‌.
  8. ಅಪರೂಪದ ಈ ಹಾವುಗಳು ಜನರ ಕಣ್ಣಿಗೆ ಬಿದ್ದಲ್ಲಿ ಕನ್ನಡಿ ಹಾವಿನ ಚಹರೆಯಿಂದಾಗಿ ಕೊಲ್ಲಲ್ಪಡುವುದೂ ಉಂಟು.
  9. ಸಣ್ಣ ಗಾತ್ರದಿಂದ ದೊಡ್ಡ ಗಾತ್ರದವರೆಗೆ ಬೆಳೆಯುವ ಈ ಹಾವು ಕೇರೆ ಹಾವಿನಷ್ಟೇ ಉದ್ದಕ್ಕೆ ಬೆಳೆಯುತ್ತದೆ.
Cat eyed snake

ಮರಳಿ ದಟ್ಟ ಕಾನನ ಸೇರಿದ ಬೆಕ್ಕಿನ ಕಣ್ಣಿನ ಹಾವು

ತೇಜಸ್‌ ಅವರ ಪ್ರೀತಿಯ ಕೈಗಳಿಗೆ ಸಿಕ್ಕಿದ ಈ ಹಾವು ಇದೀಗ ಅದರ ಮೂಲ ವಾಸಸ್ಥಾನವಾದ ದಟ್ಟ ಅರಣ್ಯವನ್ನು ತಲುಪಿದೆ. ಇಂಥ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಸಿಟಿ ನೋಡ್ಕೊಂಡು ಹೋಗೋಣ ಅಂತ ಬಂದಿರಬೇಕು ಎಂದು ನಕ್ಕರಂತೆ ರವಿಕೃಷ್ಣ ಕಲ್ಲಜೆ.

Continue Reading

ಕರ್ನಾಟಕ

Dakshin Bharat Utsav: ಪ್ರವಾಸೋದ್ಯಮ ಉತ್ತೇಜಿಸಲು ಖಾಸಗಿ ವಲಯಕ್ಕೆ 550 ಸ್ಮಾರಕ ದತ್ತು: ಸಚಿವ ಎಚ್‌.ಕೆ. ಪಾಟೀಲ್

Dakshin Bharat Utsav: ರಾಜ್ಯದಲ್ಲಿ ಸುಮಾರು 550 ಸ್ಮಾರಕಗಳನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ. ಇಷ್ಟು ಸ್ಮಾರಕಗಳು ಖಾಸಗಿ ವಲಯಗಳಿಗೆ ದತ್ತು ಸ್ವೀಕಾರಕ್ಕೆ ಲಭ್ಯವಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

VISTARANEWS.COM


on

Edited by

Dakshin Bharat Utsav
Koo

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ ಖಾಸಗಿ ವಲಯ ಉತ್ಸುಕವಾಗಿದ್ದು, ಖಾಸಗಿ ವಲಯದ ಈ ಸ್ವಯಂ ಪ್ರೇರಿತ ಆಸಕ್ತಿಯಿಂದಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ (Dakshin Bharat Utsav) 500 ಕೋಟಿ ರೂ.ಗೂ ಅಧಿಕ ಬಂಡವಾಳ ಹರಿದು ಬರಲಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದರು.

ನಗರದಲ್ಲಿ ಡಿಸೆಂಬರ್ 14 ರಿಂದ 16 ರವರೆಗೆ ‘ದಕ್ಷಿಣ ಭಾರತ್ ಉತ್ಸವ’ ನಡೆಯುವ ಹಿನ್ನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾವೇಶ ಪೂರ್ವ (ಕರ್ಟನ್‌ ರೈಸರ್) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 550 ಸ್ಮಾರಕಗಳನ್ನು ರಕ್ಷಿಸಲು, ಸಂರಕ್ಷಿಸಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆಯನ್ನು ರೂಪಿಸಿದೆ. ಇಷ್ಟು ಸ್ಮಾರಕಗಳು ಖಾಸಗಿ ವಲಯಗಳಿಗೆ ದತ್ತು ಸ್ವೀಕಾರಕ್ಕೆ ಲಭ್ಯವಿದೆ ಎಂದು ತಿಳಿಸಿದರು.

ದತ್ತು ನೀಡುವ ಸ್ಮಾರಕಗಳು, ದೇವಾಲಯಗಳು, ಚರ್ಚ್‌ಗಳು, ಮಸೀದಿಗಳು ಮತ್ತು ಇತರ ಪಾರಂಪರಿಕ ಸ್ಥಳಗಳಾಗಿರಬಹುದು, ಅವುಗಳನ್ನು ಪ್ರವಾಸೋದ್ಯಮಕ್ಕೆ ತೆರೆಯಲಾಗುವುದು. ಈ ಮೂಲಕ ರಾಜ್ಯದಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಅವಕಾಶಗಳು ಹೆಚ್ಚು ಸೃಷ್ಟಿಯಾಗುತ್ತವೆ. ಈ ವಿನೂತನ ಕಾರ್ಯಕ್ರಮವನ್ನು ಸೆಪ್ಟೆಂಬರ್ 25 ರಂದು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ | Sub Registrar Office: ಸಬ್‌ ರಿಜಿಸ್ಟ್ರಾರ್‌ ಕಚೇರಿ ಅವಧಿ ವಿಸ್ತರಣೆ; ಸೆ.30ವರೆಗೆ ಮಾತ್ರ ಅನ್ವಯ

ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸ್ವಯಂಪ್ರೇರಣೆಯಿಂದ ಹೂಡಿಕೆ ಮಾಡುವ ಖಾಸಗಿ ವಲಯದ ನಿರ್ಧಾರವನ್ನು ಶ್ಲಾಘಿಸಿದ ಸಚಿವರು, ಇದರ ಹಿಂದೆ ಲಾಭದ ಉದ್ದೇಶವಿಲ್ಲ, ಪ್ರವಾಸಿಗರ ಆಕರ್ಷಣೆ ಮತ್ತು ಆ ಮೂಲಕ ಜಗತ್ತಿಗೆ ಕರ್ನಾಟಕವನ್ನು ಪರಿಚಯಿಸುವ ಮಹತ್ವದ ಕಾರ್ಯ ಆಗಲಿದೆ ಎಂದು ಪ್ರತಿಪಾದಿಸಿದರು.

Dakshin Bharat utsav curtain raiser

ಪ್ರಸ್ತುತ ರಾಜ್ಯವು ಯುನೆಸ್ಕೋದಿಂದ ಮಾನ್ಯತೆ ಪಡೆದಿರುವ ನಾಲ್ಕು ಪಾರಂಪರಿಕ ತಾಣಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಅವುಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಲಿದೆ. ಯುನೆಸ್ಕೋ ಈ ವರ್ಷ ಗುರುತಿಸಿರುವ ನಾಲ್ಕನೇ ತಾಣವೆಂದರೆ ಹೊಯ್ಸಳರ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ದೇಗುಲಗಳು. ಈ ಹಿಂದೆ ಹಂಪಿ, ಪಟ್ಟದಕಲ್ಲು ಮತ್ತು ಪಶ್ಚಿಮ ಘಟ್ಟಗಳನ್ನು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳಲ್ಲಿ ಗುರುತಿಸಿತ್ತು ಎಂದ ಸಚಿವರು, ರಾಜ್ಯ ಸರ್ಕಾರದ ʼಶಕ್ತಿʼ ಯೋಜನೆ ಯಶಸ್ಸಿನ ಪರಿಣಾಮ ಪ್ರವಾಸಿ ಕೇಂದ್ರಗಳು ಮತ್ತು ದೇಗುಲಗಳಿಗೆ ಹೆಚ್ಚಿನ ಸಾರ್ವಜನಿಕರು ಭೇಟಿ ನೀಡುವಂತೆ ಆಗಿದೆ ಎಂದು ತಿಳಿಸಿದರು.

ಸವದತ್ತಿ ದೇವಸ್ಥಾನವು ವಾರ್ಷಿಕವಾಗಿ 1.25 ಕೋಟಿಗೂ ಅಧಿಕ ಪ್ರವಾಸಿಗರನ್ನು ಆಕರ್ಷಿಸಿದೆ. ಕರ್ನಾಟಕವು ಸಾಂಸ್ಕೃತಿಕ ಪರಂಪರೆ, ಮನೋಹರ ಪರಿಸರ ಪ್ರೇಕ್ಷಣೀಯ ಸ್ಥಳಗಳು, ಸಾಹಸ ಅನ್ವೇಷಣೆ ಕೇಂದ್ರಗಳು, ಸಮುದ್ರ ಸಾಗರ ಪ್ರವಾಸೋದ್ಯಮ, ತೀರ್ಥಕ್ಷೇತ್ರ ಹೀಗೆ ವಿವಿಧ ಪ್ರವಾಸೋದ್ಯಮ ಮಾರ್ಗಗಳನ್ನು ಹೊಂದಿದ್ದು, ಈ ಅಂಶಗಳು ರಾಜ್ಯ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಿವೆ ಎಂದರು.

ಪ್ರವಾಸೋದ್ಯಮ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರು ಮಾತನಾಡಿ, ‘ದಕ್ಷಿಣ ಭಾರತ ಉತ್ಸವದ ಪರಿಕಲ್ಪನೆಯನ್ನು ಸ್ವಾಗತಿಸುವುದಾಗಿ ತಿಳಿಸಿ, ಒಟ್ಟಾರೆ ಪ್ರವಾಸೋದ್ಯಮವನ್ನು ಉತ್ತೇಜಿಸಲು ದಕ್ಷಿಣ ಭಾರತದ ರಾಜ್ಯಗಳು ಒಗ್ಗೂಡುವ ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ | Power Generation: ರಾಜ್ಯದ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯ ಕುಸಿದಿರುವುದು ಏಕೆ: ಅಧಿಕಾರಿಗಳಿಗೆ ಸಿಎಂ ಪ್ರಶ್ನೆ

“ನಾವು ಒಟ್ಟಿಗೆ ಕೆಲಸ ಮಾಡಿ, ತಡೆರಹಿತ ಏಕೀಕೃತ ಪ್ರವಾಸೋದ್ಯಮ ಮತ್ತು ಪ್ರಯಾಣ ಉದ್ಯಮವನ್ನು ತರೋಣ.” ಪಶ್ಚಿಮ ಘಟ್ಟಗಳು, ರಾಜ್ಯಗಳಲ್ಲಿ ವ್ಯಾಪಿಸಿರುವ ದಕ್ಷಿಣ ಪ್ರಸ್ಥಭೂಮಿ ಮತ್ತು ಅನೇಕ ಪಾರಂಪರಿಕ ತಾಣಗಳು ಪ್ರವಾಸೋದ್ಯಮ ಸ್ನೇಹಿ ಯೋಜನೆಗಳಿಗೆ ಹೇಗೆ ಸಾಮರ್ಥ್ಯವನ್ನು ಹೊಂದಿವೆ ಎಂಬುದನ್ನು ಉಲ್ಲೇಖಿಸಿ ಅವರು ವಿವರಿಸಿದರು.

ಸ್ವಾಗತ ಭಾಷಣ ಮಾಡಿದ ಎಫ್‌ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲ್ ರೆಡ್ಡಿ, ಡಿಸೆಂಬರ್ 14 ರಿಂದ 16 ರವರೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿರುವ ‘ದಕ್ಷಿಣ ಭಾರತ ಉತ್ಸವ’ವು ದಕ್ಷಿಣ ಭಾರತದ ಶ್ರೀಮಂತ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯನ್ನು ಪ್ರದರ್ಶಿಸುತ್ತದೆ. ಪ್ರವಾಸೋದ್ಯಮದಲ್ಲಿ ಮುಕ್ತ ಹೂಡಿಕೆ ಅವಕಾಶಗಳನ್ನು ನೀಡುತ್ತದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಪುದುಚೇರಿ ದಕ್ಷಿಣ ರಾಜ್ಯಗಳಲ್ಲಿ ಪ್ರವಾಸೋದ್ಯಮ ಸಂಬಂಧಿತ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಲು ಈ ‘ಉತ್ಸವʼ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ವೇದಿಕೆಯಾಗಿದೆ, ಹೀಗಾಗಿ ಇದರಿಂದ ರಾಜ್ಯಗಳಿಗೆ ಆದಾಯವನ್ನು ತರುವುದಲ್ಲದೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಲ್ಲದು ಎಂದರು.

ಈ ಶೃಂಗಸಭೆಗೆ ಆತಿಥ್ಯ ವಹಿಸಲಿರುವ ಕರ್ನಾಟಕವು ಅನೇಕ ಪಾರಂಪರಿಕ ತಾಣಗಳನ್ನು ಹೊಂದಿದ್ದು, ಸ್ಮಾರಕಗಳಿಗೆ ಧಕ್ಕೆಯಾಗದಂತೆ ಪ್ರವಾಸಿ ಸ್ಥಳಗಳಾಗಿ ಅಭಿವೃದ್ಧಿಪಡಿಸಬಹುದು ಎಂದ ಅವರು, ಕರ್ನಾಟಕ ರಾಜ್ಯವು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳನ್ನು, 600 ಭಾರತದ ಪುರಾತತ್ವ ಸಮೀಕ್ಷೆ(ASI) ಸಂರಕ್ಷಿತ ಸ್ಮಾರಕಗಳು ಮತ್ತು 800 ರಾಜ್ಯ ಸಂರಕ್ಷಿತ ಸ್ಮಾರಕಗಳ ವೈಶಿಷ್ಟ್ಯತೆಯನ್ನು ಹೊಂದಿರುವುದು ರಾಜ್ಯದ ಹಿರಿಮೆ ಹೆಚ್ಚಿಸಿದೆ ಎಂದರು.

ಇದನ್ನೂ ಓದಿ | Mysore Dasara 2023: ಬರ ಹಿನ್ನೆಲೆ ಸರಳವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

ಎಫ್‌ಕೆಸಿಸಿಐ ಪ್ರವಾಸೋದ್ಯಮ ಸಮಿತಿಯ ಅಧ್ಯಕ್ಷ ಜಿ.ಕೆ.ಶೆಟ್ಟಿ ಅವರು ಮಾತನಾಡಿ, ದಕ್ಷಿಣ ರಾಜ್ಯಗಳಲ್ಲಿ ‘ದಕ್ಷಿಣ ಭಾರತ ಉತ್ಸವವನ್ನು ಸರದಿಯ ಆಧಾರದ ಮೇಲೆ ನಡೆಸಲಾಗುವುದು. ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮವನ್ನು ಸುಧಾರಿಸಲು ಎಫ್‌ಕೆಸಿಸಿಐ ಸಕ್ರಿಯವಾಗಿ ಭಾಗವಹಿಸುತ್ತದೆ. ದಕ್ಷಿಣದ ರಾಜ್ಯಗಳ ನಡುವಿನ ಸಂಪರ್ಕವನ್ನು ಸುಧಾರಿಸುವ ಮೂಲಕ, ಪ್ರವಾಸಿಗರ ಸಂಚಾರವನ್ನು ಹೆಚ್ಚಿಸುತ್ತದೆ, ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ವಿದೇಶಿ ವಿನಿಮಯವನ್ನು ತರುತ್ತದೆ ಎಂದು ವಿವರಿಸಿದರು.

ರಾಜ್ಯದ ಹೊಯ್ಸಳರ ಮೂರು ದೇಗುಲಗಳು ಯೂನೆಸ್ಕೋದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆಗೋಂಡಿರುವುದು ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ. ಇದರಿಂದ ರಾಜ್ಯವು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲಿದೆ. ಹೀಗಾಗಿ 550 ಸ್ಮಾರಕಗಳನ್ನು ದತ್ತು ನೀಡುವ ಮೂಲಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ. ಆ ಮೂಲಕ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬಂಡವಾಳ ಆಕರ್ಷಣೆ ಮತ್ತು ಉದ್ಯೋಗ ಸೃಷ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಡಿ ಇರಿಸಿದೆ
| ಎಚ್.ಕೆ. ಪಾಟೀಲ್‌, ಪ್ರವಾಸೋದ್ಯಮ ಸಚಿವರು

Continue Reading

ವಿಜಯನಗರ

Vijayanagara News: ಹಗರಿಬೊಮ್ಮನಹಳ್ಳಿಯ ಆಸ್ಪತ್ರೆ, ಸರ್ಕಾರಿ ಕಚೇರಿಗಳಿಗೆ ಡಿಸಿ ದಿವಾಕರ್‌ ದಿಢೀರ್‌ ಭೇಟಿ

Vijayanagara News: ಹಗರಿಬೊಮ್ಮನಹಳ್ಳಿ ತಾಲೂಕಿನ ಆಸ್ಪತ್ರೆ, ಹಾಸ್ಟೆಲ್, ಶಾಲೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್., ಶುಕ್ರವಾರ ದಿಢೀರ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

Edited by

Vijayanagara DC Diwakar MS Visit and inspection of hospital in Hagaribommanahalli
ಹಗರಿಬೊಮ್ಮನಹಳ್ಳಿ ತಾಲೂಕಿನ ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್. ಭೇಟಿ ನೀಡಿ, ಪರಿಶೀಲನೆ ನಡೆಸಿದರು.
Koo

ಹಗರಿಬೊಮ್ಮನಹಳ್ಳಿ: ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ಆಗಮಿಸುವ ರೋಗಿಗಳಿಗೆ (Patients) ಆಸನ ಮತ್ತು ನೆರಳಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ (Infrastructure) ಒದಗಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್. ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಹಗರಿಬೊಮ್ಮನಹಳ್ಳಿ ತಾಲೂಕಿನ ಸಾರ್ವಜನಿಕರ ಆಸ್ಪತ್ರೆ, ವಿವಿಧ ಸರ್ಕಾರಿ ಕಚೇರಿಗಳಿಗೆ ಶುಕ್ರವಾರ ದಿಢೀರ್‌ ಭೇಟಿ ನೀಡಿ, ಪರಿಶೀಲನೆ ನಡೆಸಿ, ಬಳಿಕ ಅವರು ಮಾತನಾಡಿದರು.

ಚಿಕಿತ್ಸೆ ಪಡೆಯಲು ಬರುವ ರೋಗಿಗಳು ನಿಲ್ಲದಂತೆ ಸೂಕ್ತ ಆಸನ ವ್ಯವಸ್ಥೆ ಹಾಗೂ ಆಸ್ಪತ್ರೆ ಆವರಣದಲ್ಲಿ ನೆರಳಿನ ವ್ಯವಸ್ಥೆ ಕಲ್ಪಿಸಲು ಬೇಕಾದ ಅಗತ್ಯ ಸೌಕರ್ಯದ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಿದರು.

ಆಸ್ಪತ್ರೆಗೆ ಅವಶ್ಯವಿರುವ ಚಿಕಿತ್ಸಾ ಸಲಕರಣೆಗಳ ಮಾಹಿತಿ ಪಡೆದರು. ನಂತರ ರೋಗಿಗಳಿಗೆ ಆಸ್ಪತ್ರೆಯಿಂದಲೇ ಅಗತ್ಯ ಔಷಧಿ ನೀಡಬೇಕು, ರೋಗಿಗಳಿಂದಲೇ ತರಿಸಿಕೊಳ್ಳುವುದು ಕಂಡುಬಂದಲ್ಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು. ವೈದ್ಯರ ಕೊರತೆ ಇರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಈಗಾಗಲೇ ವೈದ್ಯರ ನೇಮಕಕ್ಕೆ ಪ್ರಕಟಣೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್. ಅವರು ಭೂಮಿ, ಪಹಣಿ ಸೇರಿದಂತೆ ಇತರ ಸರ್ಕಾರಿ ಸೇವೆಗಳು ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ನಂತರ ಸರ್ಕಾರದ ಸೇವೆ ಪಡೆಯಲು ಬಂದಿದ್ದ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: Vijayanagara News: ಕನ್ನಡ ಮಾಧ್ಯಮದಲ್ಲಿ ಓದಿದರೆ ವಿಜ್ಞಾನಿಗಳಾಗುವುದಕ್ಕೆ ಅಡ್ಡಿ ಇಲ್ಲ: ಇಸ್ರೋ ವಿಜ್ಞಾನಿ ಡಾ.ಬಿ.ಎಚ್‌.ಎಂ ದಾರುಕೇಶ್‌

ನಂತರ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಸತಿ ನಿಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಬೇಕಾದ ಅಗತ್ಯ ಸೌಲಭ್ಯ ಹಾಗೂ ಊಟೋಪಚಾರದ ಬಗ್ಗೆ ಮಾಹಿತಿ ಪಡೆದರು.

ನಂತರ ಹಗರಿಬೊಮ್ಮನಹಳ್ಳಿ ಪುರಸಭೆ ಕಚೇರಿಗೆ ಭೇಟಿ ನೀಡಿ, ನಗರೋತ್ಥಾನ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಗೆ ಸಂಬಂಧಿಸಿದ ವರದಿ, ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳು ಹೆಚ್ಚಿದ್ದು, ಸಂಬಂಧಪಟ್ಟ ಮಾಲೀಕರಿಗೆ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಗೋಶಾಲೆಗೆ ರವಾನಿಸಲು ಕ್ರಮಕೈಗೊಳ್ಳಲು ಡಿಸಿ ಸೂಚಿಸಿದರು.

ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ

ನಂತರ ರಾಮನಗರದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಕಾಲಕಳೆದು ನಂತರ ಶಾಲೆಗೆ ಒದಗಿಸಬೇಕಾದ ಮೂಲ ಸೌಕರ್ಯದ ಕುರಿತು ಶಿಕ್ಷಕರೊಂದಿಗೆ ಚರ್ಚಿಸಿದರು.

Continue Reading

ತುಮಕೂರು

Tumkur News: ಗುಬ್ಬಿಯಲ್ಲಿ ನೇಗಿಲು ಕಾವ್ಯ ಅಭಿಯಾನಕ್ಕೆ ಸಾಹಿತಿ ಸಂತೋಷ್ ಮಡೆನೂರು ಚಾಲನೆ

Tumkur News: ಗುಬ್ಬಿ ತಾಲೂಕಿನ ಸಾವಯವ ಕೃಷಿಕ ಮಹೇಶ್ ರವರ ಮಣ್ಣಿನ ಮನೆಯಲ್ಲಿ ಶುಕ್ರವಾರ ನೇಗಿಲು ಕಾವ್ಯ ಅಭಿಯಾನ ಕಾರ್ಯಕ್ರಮ ಜರುಗಿತು.

VISTARANEWS.COM


on

Edited by

Neegilu Kavya Abhiyan programme at gubbi
ಗುಬ್ಬಿ ತಾಲೂಕಿನ ಸಾವಯವ ಕೃಷಿಕ ಮಹೇಶ್ ರವರ ಮಣ್ಣಿನ ಮನೆಯಲ್ಲಿ ಶುಕ್ರವಾರ ನೇಗಿಲು ಕಾವ್ಯ ಅಭಿಯಾನ ಕಾರ್ಯಕ್ರಮ ಜರುಗಿತು.
Koo

ಗುಬ್ಬಿ: ಕನ್ನಡ ಸಾಹಿತ್ಯವನ್ನು (Kannada Literature) ಶ್ರೀಮಂತಗೊಳಿಸುವ ಜತೆಗೆ ರೈತರಲ್ಲಿ (Farmers) ಹಾಗೂ ಜನಸಾಮಾನ್ಯರಲ್ಲಿ ಪರಿಸರ (Environment) ಕಾಳಜಿಯನ್ನು ಬೆಳೆಸುವ ನಿಟ್ಟಿನಲ್ಲಿ ಸಸ್ಯಯಜ್ಞ ತಂಡವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಾಹಿತಿ ಸಂತೋಷ್ ಮಡೆನೂರು ತಿಳಿಸಿದರು.

ತಾಲೂಕಿನ ಸಾವಯವ ಕೃಷಿಕ ಮಹೇಶ್ ಅವರ ಮಣ್ಣಿನ ಮನೆಯಲ್ಲಿ ಶುಕ್ರವಾರ ನೇಗಿಲು ಕಾವ್ಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೆಚ್ಚುತ್ತಿರುವ ಪ್ರಾಕೃತಿಕ ವಿಕೋಪ ಹಾಗೂ ಪರಿಸರ ವಿನಾಶದ ಬಗ್ಗೆ ಜಾಗೃತಿ ಮೂಡಿಸಲು ಸಾಹಿತ್ಯ ರಚನೆಯ ಮೂಲಕ ಪ್ರಯತ್ನ ಮಾಡಲಾಗುತ್ತಿದೆ. ಸಸ್ಯಯಜ್ಞ ತಂಡದ ವತಿಯಿಂದ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪರಿಸರ ಜಾಗೃತಿಯನ್ನು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ

ಯಾವುದೇ ಫಲಾಪೇಕ್ಷೆ ಇಲ್ಲದೆ ಕೇವಲ ಜಾಗೃತಿ ಮೂಡಿಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ. ಕೇವಲ ಮಾತನಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎನ್ನುವುದನ್ನು ಅರಿತಿರುವ ನಾವು ನಿರಂತರವಾಗಿ ಜನರ ಒಡನಾಟದೊಂದಿಗೆ ಉತ್ತಮ ಕೆಲಸಗಳನ್ನು ಮಾಡುವ ಉದ್ದೇಶವನ್ನು ಹೊಂದಿದ್ದೇವೆ. ಉತ್ತಮ ಸಾಹಿತ್ಯ ರಚನೆಯ ಮೂಲಕ ಪರಿಸರ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಕೃಷಿಕ ಮಹೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗುತ್ತಿತ್ತುವುದರಿಂದ ಅವರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಪ್ರಸ್ತುತ ಸಂದರ್ಭದಲ್ಲಿ ಸಾವಯವ ಪದ್ಧತಿ ಕೃಷಿಯನ್ನು ಆಯ್ಕೆ ಮಾಡಿಕೊಳ್ಳುವುದು ರೈತರಿಗೆ ಅನಿವಾರ್ಯವಾಗಿದೆ ಎಂದರು.

ಬರಹಗಾರರು ಕನ್ನಡ ಸಾಹಿತ್ಯದ ಜತೆಯಲ್ಲಿಯೇ ಕೃಷಿ ಸಾಹಿತ್ಯ ರಚನೆಯತ್ತಲೂ ಗಮನ ಹರಿಸಿದರೆ ರೈತರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುವುದು ಎಂದರು .

ರೈತರು ಪ್ರಕೃತಿದತ್ತವಾಗಿ ಬೆಳೆಗಳನ್ನು ಬೆಳೆಯುವುದನ್ನು ರೂಢಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಇದೇ ವೇಳೆ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ನೇಗಿಲಿಗೆ ಪೂಜೆ ಸಲ್ಲಿಸುವ ಮೂಲಕ ನೇಗಿಲು ಕಾವ್ಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು ಹಾಗೂ ಕೃಷಿಕ ಮಹೇಶ್ ರವರನ್ನು ಗೌರವಿಸಲಾಯಿತು.

ಇದನ್ನೂ ಓದಿ: Vijayanagara News: ಕನ್ನಡ ಮಾಧ್ಯಮದಲ್ಲಿ ಓದಿದರೆ ವಿಜ್ಞಾನಿಗಳಾಗುವುದಕ್ಕೆ ಅಡ್ಡಿ ಇಲ್ಲ: ಇಸ್ರೋ ವಿಜ್ಞಾನಿ ಡಾ.ಬಿ.ಎಚ್‌.ಎಂ ದಾರುಕೇಶ್‌

ಈ ಸಂದರ್ಭದಲ್ಲಿ ಸಸ್ಯ ಯಜ್ಞ ತಂಡದ ಪ್ರಭುಸ್ವಾಮಿ, ರೈತರಾದ ಮೋಹನ್ ಕುಮಾರ್, ಶಿವನಂಜಪ್ಪ,ರಾಜಣ್ಣ,ಕಂಬಯ್ಯ, ಮಲ್ಲಿಕಾರ್ಜುನ, ಪರಶುರಾಮ್, ಹಾಗೂ ಹಲವಾರು ಗ್ರಾಮಸ್ಥರು ಹಾಜರಿದ್ದರು.

Continue Reading
Advertisement
Ruturaj Gaikwad
ಕ್ರಿಕೆಟ್25 mins ago

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

Cat eyed snake
ಕರ್ನಾಟಕ39 mins ago

Cat Eyed Snake : ಬೆಕ್ಕಿನ ಕಣ್ಣಿನ ಸುಂದರಿಯರನ್ನು ನೋಡೇ ಇರ್ತೀರಿ, ಬೆಕ್ಕಿನ ಕಣ್ಣಿನ ಹಾವು ನೋಡಿದ್ದೀರಾ?

Dakshin Bharat Utsav
ಕರ್ನಾಟಕ42 mins ago

Dakshin Bharat Utsav: ಪ್ರವಾಸೋದ್ಯಮ ಉತ್ತೇಜಿಸಲು ಖಾಸಗಿ ವಲಯಕ್ಕೆ 550 ಸ್ಮಾರಕ ದತ್ತು: ಸಚಿವ ಎಚ್‌.ಕೆ. ಪಾಟೀಲ್

savings
ದೇಶ48 mins ago

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Mohammed Shami
ಕ್ರಿಕೆಟ್1 hour ago

Mohammed Shami : ಬೌಲಿಂಗ್​ನಲ್ಲಿ ಹೊಸ ಮಿಂಚು ಸೃಷ್ಟಿಸಿದ ಮೊಹಮ್ಮದ್ ಶಮಿ; ಏನಿದು ಸಾಧನೆ

Vijayanagara DC Diwakar MS Visit and inspection of hospital in Hagaribommanahalli
ವಿಜಯನಗರ1 hour ago

Vijayanagara News: ಹಗರಿಬೊಮ್ಮನಹಳ್ಳಿಯ ಆಸ್ಪತ್ರೆ, ಸರ್ಕಾರಿ ಕಚೇರಿಗಳಿಗೆ ಡಿಸಿ ದಿವಾಕರ್‌ ದಿಢೀರ್‌ ಭೇಟಿ

Neegilu Kavya Abhiyan programme at gubbi
ತುಮಕೂರು1 hour ago

Tumkur News: ಗುಬ್ಬಿಯಲ್ಲಿ ನೇಗಿಲು ಕಾವ್ಯ ಅಭಿಯಾನಕ್ಕೆ ಸಾಹಿತಿ ಸಂತೋಷ್ ಮಡೆನೂರು ಚಾಲನೆ

T20 wordl cup venue
ಕ್ರಿಕೆಟ್1 hour ago

T20 World Cup : 2024 ಟಿ20 ವಿಶ್ವ ಕಪ್​ ಪಂದ್ಯಗಳು ಎಲ್ಲೆಲ್ಲಿ ನಡೆಯುತ್ತವೆ ಎಂಬ ಮಾಹಿತಿ ಇಲ್ಲಿದೆ

sugar factory representatives and sugarcane growers meeting at DC office Karwar
ಉತ್ತರ ಕನ್ನಡ1 hour ago

Uttara Kannada News: ಕಬ್ಬು ಬೆಳೆಗಾರರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಡಿಸಿ ಗಂಗೂಬಾಯಿ ಮಾನಕರ್

Vishwa Hindu Mahasabha Ganapati Utsav Committee Honorary President Sanjiva Achar spoke at the pressmeet
ಶಿವಮೊಗ್ಗ2 hours ago

Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ3 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ6 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ6 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ6 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

Dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದರೆ ನಷ್ಟ ಗ್ಯಾರಂಟಿ!

ಟ್ರೆಂಡಿಂಗ್‌