Site icon Vistara News

ವಿಧಾನ ಪರಿಷತ್ ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಜೂನ್‌ 13 ರಂದು ಚುನಾವಣೆ

mlc election

ಬೆಳಗಾವಿ: ವಿಧಾನ ಪರಿಷತ್ತಿನ ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಜೂನ್‌ 13 ರಂದು ಚುನಾವಣೆ ನಡೆಯಲಿದೆ. ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯವಾಗಿದೆ.

ಈವರೆಗೂ ಕಾಂಗ್ರೆಸ್, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ಸೇರಿ ವಾಯವ್ಯ ಪದವೀಧರ ಕ್ಷೇತ್ರಕ್ಕೆ ಒಟ್ಟು 23 ಅಭ್ಯರ್ಥಿಗಳಿಂದ 27ನಾಮಪತ್ರ ಸಲ್ಲಿಕೆಯಾಗಿದೆ.

ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 16 ಅಭ್ಯರ್ಥಿಗಳಿಂದ 22 ನಾಮಪತ್ರ ಸಲ್ಲಿಕೆಯಾಗಿದೆ. ವಾಯವ್ಯ ಪದವೀಧರ, ಶಿಕ್ಷಕರ ಮತಕ್ಷೇತ್ರಗಳ ನಾಮಪತ್ರ ಪರಿಶೀಲನೆ ಶುಕ್ರವಾರ ನಡೆಯಲಿದೆ.
ಬೆಳಗಾವಿ ಡಿಸಿ ಕಚೇರಿಯಲ್ಲಿ ಬೆಳಿಗ್ಗೆ11 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಬಿಜೆಪಿಯಿಂದ ವಾಯುವ್ಯ ಪದವೀಧರ ಕ್ಷೇತ್ರಕ್ಕೆ ಹನುಮಂತ ನಿರಾಣಿ, ಕಾಂಗ್ರೆಸ್ ನಿಂದ ಸುನೀಲ್ ಸಂಕ್ ನಾಮಪತ್ರ ಸಲ್ಲಿಸಿದ್ದಾರೆ.
ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಅರುಣ್ ಶಹಾಪುರ್, ಕಾಂಗ್ರೆಸ್ ನಿಂದ ಪ್ರಕಾಶ್ ಹುಕ್ಕೇರಿ ನಾಮಪತ್ರ ಸಲ್ಲಿಸಿದ್ದಾರೆ.

Exit mobile version