ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ (Vidhana Soudha) ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ.
ಟ್ರೆಕ್ಕಿಂಗ್ ಹೋಗಿ ಪೃಥ್ವಿ ನಾಪತ್ತೆಯಾಗಿದ್. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | ಇದನ್ನೂ ಓದಿ: Physical Abuse : ತಪಾಸಣೆಗೆ ಬಂದ ರೋಗಿಗಳಿಬ್ಬರನ್ನು ಅತ್ಯಾಚಾರ ಮಾಡಿದ ಸರ್ಕಾರಿ ವೈದ್ಯ; ಜೂನಿಯರ್ ವೈದ್ಯರ ಪೆಟ್ಟು ತಿಂದು ಐಸಿಯು ಸೇರಿದ ಆರೋಪಿ
ಮೂರು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯಲ್ಲೇ ಇತ್ತು!
ಧಾರವಾಡ: ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ (Body Found) ಪತ್ತೆಯಾಗಿದೆ. ಅದೂ ಧಾರವಾಡ (Dharwad news) ನಗರದಲ್ಲಿ ಅವರ ಸ್ವಂತ ಮನೆಯಲ್ಲೇ! ಶವ ಮನೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಕಂಡುಬಂದಿದೆ. ಆದರೆ ಮೂರು ವರ್ಷಗಳಿಂದ ಯಾರೂ ಇದನ್ನು (Viral News) ಗಮನಿಸಿಲ್ಲ!
ಧಾರವಾಡದ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ. ಚಂದ್ರಶೇಖರ್ ಎಂಬ ಈ ವ್ಯಕ್ತಿ ಮೂರು ವರ್ಷಗಳಿಂದ ಎಲ್ಲೂ ಕಾಣಿಸಿರಲಿಲ್ಲ. ಕಳೆದ ತಿಂಗಳು ಈತ ಕಾಣುತ್ತಿಲ್ಲ ಎಂದು ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಒಬ್ಬರು ದೂರು ಕೊಟ್ಟಿದ್ದರು. ಚಂದ್ರಶೇಖರ್ ಅವರನ್ನು ಎಲ್ಲ ಕಡೆ ಹುಡುಕಾಡಿದ್ದ ಪೊಲೀಸರು, ನಿನ್ನೆ ಅವರ ಮನೆಗೆ ಹೋಗಿದ್ದರು. ಅಲ್ಲಿ ಹೋದಾಗ ಪೊಲೀಸರಿಗೆ ಅಚ್ಚರಿಯಾಗುವಂತೆ ಚಂದ್ರಶೇಖರ್ ಅಸ್ಥಿಪಂಜರ ಮನೆಯಲ್ಲೇ ಪತ್ತೆಯಾಗಿದೆ.
ಚಂದ್ರಶೇಖರ್ ತಮ್ಮ ಪತ್ನಿಯ ಸಾವಿನ ನಂತರ ಮನೆಯಲ್ಲಿ ಒಬ್ಬನೇ ಇರುತ್ತಿದ್ದರು. ಅದಾದ ಬಳಿಕ ಕೋವಿಡ್ ಬಂದಿತ್ತು. ಕೋವಿಡ್ ವೇಳೆಯೇ ಇವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತ ವ್ಯಕ್ತಿಯ ಸಂಬಂಧಿಕರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇರುವ ಬಗ್ಗೆ ಮಾಹಿತಿ ಇದೆ. ಯಾರೂ ಇವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿರಲಿಲ್ಲ.
ಇದನ್ನೂ ಓದಿ | Bank Irregularities: ಪದೇಪದೆ ಅಕ್ರಮ; 2 ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡಲು ಸರ್ಕಾರ ಸೂಚನೆ
ಇವರು ಹಾಲು, ಪೇಪರ್ ಕೂಡ ಹಾಕಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ ವ್ಯಕ್ತಿ ಸತ್ತದ್ದು ಯಾರ ಗಮನಕ್ಕೂ ಬಂದಿಲ್ಲ. ಸುತ್ತಮುತ್ತ ಮನೆಗಳಿದ್ದರೂ ಯಾರಿಗೂ ಗೊತ್ತಾಗಿಲ್ಲ ಎಂಬುದು ವಿಚಿತ್ರ. ಸದ್ಯ ಅಸ್ಥಿಪಂಜರವನ್ನು ವಶಕ್ಕೆ ಪಡೆದ ಪೊಲೀಸರು, ಇದು ಅವರದೇನಾ ಎಂದು ತಿಳಿಯಲು ವಿಧಿವಿಜ್ಞಾನ ತಪಾಸಣೆಗೆ ಕಳಿಸಿದ್ದಾರೆ.