Media School: ಸಕ್ಷಮ ಪತ್ರಿಕೋದ್ಯಮ ಕಟ್ಟಿದ ಕೀರ್ತಿ ವಿಜಯ ಸಂಕೇಶ್ವರರಿಗೆ ಸಲ್ಲುತ್ತದೆ: ಪ್ರಲ್ಹಾದ್‌ ಜೋಶಿ Vistara News

ಉತ್ತರ ಕನ್ನಡ

Media School: ಸಕ್ಷಮ ಪತ್ರಿಕೋದ್ಯಮ ಕಟ್ಟಿದ ಕೀರ್ತಿ ವಿಜಯ ಸಂಕೇಶ್ವರರಿಗೆ ಸಲ್ಲುತ್ತದೆ: ಪ್ರಲ್ಹಾದ್‌ ಜೋಶಿ

Dr Vijay Sankeshwar Media School: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಸೋಮವಾರ, ʼಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್‌ʼ ಉದ್ಘಾಟಿಸಲಾಗಿದೆ.

VISTARANEWS.COM


on

Dr Vijay Sankeshwar Media School inaugurated
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಸ್ಥಾಪಿಸಿರುವ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್‌ ಅನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಉದ್ಘಾಟಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಕನ್ನಡ ಪತ್ರಿಕಾ ರಂಗದಲ್ಲಿ ಹೊಸ ಸಾಹಸಗಳನ್ನು ಮೆರೆದ ಖ್ಯಾತ ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ (viswadarshana education society) ಸ್ಥಾಪಿಸಿರುವ ʼಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್‌ʼ (Dr Vijay Sankeshwar Media School) ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್‌ ಜೋಶಿ ಅವರು ಸೋಮವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು, ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್‌ ಆರಂಭವಾಗುತ್ತಿರುವುದು ಕನ್ನಡ ಪತ್ರಿಕೋದ್ಯಮಕ್ಕೆ ಒಂದು ಕಳಶಪ್ರಾಯದಂತಿದೆ. ಕನ್ನಡ ಪತ್ರಿಕೋದ್ಯಮ ನಿಂತ ನೀರಾದ ಕಾಲದಲ್ಲಿ ಉತ್ತರ ಕನ್ನಡದ ಪ್ರೇರಣೆಯಿಂದ ಹೊಸ ಪತ್ರಿಕೆಯನ್ನು ಆರಂಭಿಸಿ, ಅವರ ಛಲದ ಪರಿಣಾಮವಾಗಿ ಒಂದು ಸಕ್ಷಮವಾದ ಪತ್ರಿಕೋದ್ಯಮವನ್ನು ಕಟ್ಟಿದ ಕೀರ್ತಿ ವಿಜಯ ಸಂಕೇಶ್ವರ್ ಅವರಿಗೆ ಸಲ್ಲುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Minister Pralhad Joshi inaugurates Dr Vijay Sankeshwar Media School

ಪತ್ರಕರ್ತನಿಗೆ ಬಹುಮುಖ್ಯವಾಗಿ ಬೇಕಾಗಿರುವುದು ಸಾಮಾನ್ಯ ತಿಳಿವಳಿಕೆ. ಹೇಳಿದ್ದನ್ನೆಲ್ಲ ಒಪ್ಪುವ ಬದಲು, ಯಾಕೆ ಏನು ಎಂದು ಪ್ರಶ್ನಿಸುವ ಧೈರ್ಯ ಬೆಳೆಸಿಕೊಳ್ಳಬೇಕು. ಆಧುನಿಕತೆಗೆ ತಕ್ಕಂತೆ ನಮ್ಮನ್ನು ತೊಡಗಿಸಿಕೊಂಡಾಗ, ಯಾವುದೇ ಮಾಧ್ಯಮವನ್ನು ಕಟ್ಟಿ ಬೆಳೆಸುವ ಸಾಮರ್ಥ್ಯ ನಮಗೆ ದೊರಕುತ್ತದೆ. ಸಾಕಷ್ಟು ಅವಕಾಶಗಳ ಫಲವಾಗಿ, ಭಾರತವು ಬರುವ 2-3 ವರ್ಷಗಳಲ್ಲಿ ವಿಶ್ವದ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ನಮ್ಮಲ್ಲಿನ ಮಾನವ ಸಂಪನ್ಮೂಲವೇ ಅತೀ ದೊಡ್ಡ ತಾಕತ್ತು. ಸ್ಕಿಲ್, ಸ್ಕೇಲ್ & ಸ್ಪೀಡ್ ನಮ್ಮಲ್ಲಿದ್ದರೆ ಯಾವುದೇ ಕೆಲಸವನ್ನು ಸಾಧಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹೇಳಿದರು.

ಇದನ್ನೂ ಓದಿ | APJ Abdul Kalam Birthday: ಪ್ರತಿ ಮಗುವಿನ ಕನಸಿನ ಮೇಷ್ಟ್ರು!

5ಜಿ ಹಾಗೂ 6ಜಿ ತಂತ್ರಜ್ಞಾನವು ಹೊರದೇಶದಿಂದ ತಂತ್ರಜ್ಞಾನವಾಗದೆ, ಭಾರತೀಯ ತಂತ್ರಜ್ಞಾನವಾಗಿ ಬೆಳೆಯಲಿದೆ. ನಾವು ಸಿಗುವ ಕೆಲಸದಲ್ಲಿ ಸಮಾಧಾನ ಪಡೆದುಕೊಳ್ಳುವ ಬದಲು, ಛಲ ಹಾಗೂ ಪರಿಶ್ರಮದಿಂದ ನಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಬೆಳೆಯಬೇಕು. ಪತ್ರಿಕೆಯನ್ನು ಓದುವವರ ಸಂಖ್ಯೆ ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು, ನಿಖರ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ನೀಡಲು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ನಾವು ಯಾವ ರೀತಿಯಲ್ಲಿ ಸುಖವನ್ನು ಕಾಣಬೇಕು ಎನ್ನುವ ನಿರ್ಧಾರವನ್ನು ನಾವೇ ಮಾಡಬೇಕಿದೆ ಎಂದರು.

ಪತ್ರಿಕೋದ್ಯಮಕ್ಕೆ ಎಂದಿಗೂ ಸಾವಿಲ್ಲ: ಡಾ. ವಿಜಯ ಸಂಕೇಶ್ವರ

Pralhad Joshi Dr Vijay Sankeshwar and Dr HS Shetty

ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರು ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಬುದ್ಧಿವಂತ, ಶ್ರಮ ಪಡುವ ವಿದ್ಯಾರ್ಥಿಗಳಿದ್ದು, ಅವರಿಗೆ ಅಪಾರವಾದ ಅವಕಾಶ ದೊರಕುವ ಉದ್ದೇಶದಿಂದ ಈ ಮೀಡಿಯಾ ಸ್ಕೂಲ್ ಆರಂಭವಾಗಿದೆ. ಪತ್ರಿಕೋದ್ಯಮಕ್ಕೆ ಎಂದಿಗೂ ಸಾವಿಲ್ಲ. ಎಷ್ಟೇ ದೊಡ್ಡ ವ್ಯಕ್ತಿಯಾದರೂ ಇಂದಿಗೂ ತಮ್ಮ ನಿತ್ಯದ ದಿನಚರಿಯನ್ನು ಪತ್ರಿಕೆಗಳೊಂದಿಗೆ ಆರಂಭಿಸುತ್ತಾರೆ. ಇಲ್ಲಿನ ವಿದ್ಯಾರ್ಥಿಗಳು ಕೇವಲ ಕರ್ನಾಟಕಕ್ಕೆ ಸೀಮಿತವಾಗಿರದೆ, ನಿಮ್ಮ ಜ್ಞಾನವು ವಿಶ್ವದಾದ್ಯಂತ ಪ್ರಖರಿಸುವಂತಾಗಲಿ ಎಂದು ಆಶಿಸಿದರು.

ಕೇಂದ್ರ ಸರ್ಕಾರದ ಕೆಲ ನೀತಿಯಿಂದಾಗಿ ಪತ್ರಿಕೋದ್ಯಮವು ಇಂದು ಕಷ್ಟ ಎದುರಿಸುವಂತಾಗಿದೆ. ದೇಶವನ್ನು ರಕ್ಷಿಸುವ ಮೊದಲು ಪತ್ರಿಕೋದ್ಯಮವನ್ನು ರಕ್ಷಿಸಿಕೊಳ್ಳುವ ಅವಶ್ಯಕತೆ ಇದೆ. ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ, ಕೆಲ ಎಡಪಂಥೀಯರು ನಮ್ಮ ದೇಶದಲ್ಲಿ ಮೇಲುಗೈ ಸಾಧಿಸಲಿದ್ದಾರೆ. ಇಂದು ದೇಶದ ಕೆಲವೇ ಕೆಲ ಪತ್ರಿಕೋದ್ಯಮದ ಕಂಪನಿಗಳು ನೈಜತೆಯನ್ನು ಕಾಯ್ದುಕೊಂಡಿದೆ ಎಂದು ಹೇಳಲು ಬೇಸರವಾಗುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಪಾರದರ್ಶಕ ಮಾಧ್ಯಮದ ಉಳಿವಿಕೆ ಕಷ್ಟ ಸಾಧ್ಯ ಎಂದರು.

ನಾಗರಿಕ ಸನ್ಮಾನ ಸ್ವೀಕರಿಸಿ ಮಾತನಾಡಿದ ಮೈಸೂರು ಮರ್ಕಂಟೈಲ್ ಕಂಪನಿಯ ಸ್ಥಾಪಕ ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ನಿರ್ದೇಶಕ ಎಚ್. ಎಸ್. ಶೆಟ್ಟಿ ಅವರು, ನಾನು ದೇಶಕ್ಕಾಗಿ, ಸಮಾಜಕ್ಕಾಗಿ ದುಡಿಯುವ ಪತ್ರಕರ್ತನಾಗಿ ಬೆಳೆಯುತ್ತೇನೆ ಎನ್ನುವ ಸಂಕಲ್ಪವನ್ನು ಇಂದು ವಿದ್ಯಾರ್ಥಿಗಳು ಮಾಡಬೇಕಿದೆ. ಉತ್ತರ ಕನ್ನಡವು ಒಂದು ಸಮಪರ್ಕವಾದ ನಾಯಕತ್ವದ ಕೊರತೆಯಿಂದಾಗಿ ಅಭಿವೃದ್ಧಿಯಿಂದ ವಂಚಿತವಾಗಿದೆ. ಈ ನಿಟ್ಟಿನಲ್ಲಿ ಹರಿಪ್ರಕಾಶ್‌ ಅವರ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲ ಶ್ಲಾಘಿಸಲೇಬೇಕು. ಇಂದು ನಮ್ಮ ದೇಶದಲ್ಲಿ ಕಿತ್ತು ತಿನ್ನುವ ಬಡತವಿಲ್ಲ. ಹೀಗಾಗಿ ಎಲ್ಲಾರೂ ಸಹ ಶಿಕ್ಷಣಕ್ಕೆ ಒತ್ತು ನೀಡಬೇಕು. ಪಾಲಕರು ಸಹ ಕೇವಲ ದುಡಿಮೆಯ ಹಿಂದೆ ಬೀಳದೆ, ಮಕ್ಕಳ ಬೆಳವಣಿಗೆಯ ಮೇಲು ಕಾಳಜಿ ತೋರಬೇಕಿದೆ ಎಂದರು.

ವಿಶ್ವದರ್ಶನ ಶಿಕ್ಷಣ ಸಮೂಹ ನಿರ್ದೇಶಕ ಮೈಸೂರು ಮರ್ಕಂಟೈಲ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷ ಡಾ ಎಚ್ಎಸ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು

ನನ್ನ ಬೆಳವಣಿಗೆಗೆ ಕಾರಣವಾದ ವ್ಯಕ್ತಿ ಹೆಸರಲ್ಲಿ ಮೀಡಿಯಾ ಸ್ಕೂಲ್

ಪ್ರಾಸ್ತಾವಿಕ ಮಾತುಗಳನ್ನಾಡಿದ ವಿಸ್ತಾರ ನ್ಯೂಸ್ ಸಿಇಒ ಮತ್ತು ಪ್ರಧಾನ ಸಂಪಾದಕ ಹಾಗೂ ವಿಶ್ವದರ್ಶನ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಅವರು, ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿವಿಧ ಕೋರ್ಸುಗಳ ಸಮೂಹ ಗುಚ್ಛಕ್ಕೆ ಇಂದು ಡಾ.ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ಸೇರ್ಪಡೆಯಾಗಿದೆ. ನನ್ನ ಬೆಳವಣಿಗೆಗೆ ಕಾರಣವಾದಂತಹ ವ್ಯಕ್ತಿ ಹೆಸರಿನಲ್ಲಿ ಮೀಡಿಯಾ ಸ್ಕೂಲ್ ತೆರೆದಿದ್ದೇವೆ. ಇಲ್ಲಿನ ವಿದ್ಯಾರ್ಥಿಗಳು ಸಾಮಾನ್ಯವಾಗಿ ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದು, ಸಂಸ್ಥೆಯು ಪತ್ರಿಕೋದ್ಯಮದಲ್ಲಿ ಹೊಸ ಪ್ರತಿಭೆಗಳ ಅನಾವರಣಕ್ಕೆ ಸಾಕ್ಷಿಯಾಗಲಿದೆ ಎಂದರು.

ವಿಶ್ವದರ್ಶನ ಶಿಕ್ಷಣ ಸಮೂಹ ನಿರ್ದೇಶಕರು, ಮೈಸೂರು ಮರ್ಕಂಟೈಲ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷರು, ವಿಸ್ತಾರ ನ್ಯೂಸ್ ಎಕ್ಸಿಕ್ಯೂಟಿವ್ ಚೇರ್ಮನ್ ಡಾ. ಎಚ್.ಎಸ್.ಶೆಟ್ಟಿ ಅವರ ತಾಂತ್ರಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರ್ ಆಫ್ ಸೈನ್ಸ್ ಪದವಿಯನ್ನು ನೀಡಿ ಗೌರವಿಸಿದೆ. ಹೀಗಾಗಿ ಅವರಿಗೆ ವಿಶ್ವದರ್ಶನ ಬಳಗ ಮತ್ತು ಯಲ್ಲಾಪುರದ ನಾಗರಿಕರ ಪರವಾಗಿ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.

ಇದನ್ನೂ ಓದಿ | ನನ್ನ ದೇಶ ನನ್ನ ದನಿ ಅಂಕಣ: ಮಹಾನ್ ಬೌದ್ಧಿಕ ಕ್ಷತ್ರಿಯ ಸೀತಾರಾಮ ಗೋಯಲ್

ಕರ್ನಾಟಕದ ವಿಶ್ವ ವಿದ್ಯಾನಿಲಯದ ಕುಲಪತಿ ಕೆ. ಬಿ. ಗುಡಸಿ ಮಾತನಾಡಿದರು. ಮೀಡಿಯಾ ಸ್ಕೂಲ್‌ನ ಪ್ರಾಂಶುಪಾಲ ನಾಗರಾಜ ಇಳೆಗುಂಡಿ ಮೀಡಿಯಾ ಸ್ಕೂಲ್ ಕುರಿತಾಗಿ ಮಾಹಿತಿ ನೀಡಿದರು. ಶಿಕ್ಷಕಿ ವಿದ್ಯಾ ಭಟ್ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಪ್ರಸಿದ್ಧ ಕಲಾವಿದರಿಂದ ಕರ್ಣ ಭೇದನ ಪ್ರಸಂಗದ ತಾಳಮದ್ದಳೆ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಕರ್ಣ ಭೇದನ ತಾಳಮದ್ದಳೆ ನಡೆಯಿತು
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
1 Comment

1 Comment

  1. mshashidhar

    18 October 2023, 2:01 PM at 2:01 pm

    ದೇಶಪ್ರೇಮ ವ್ಯಾಪಾರ ಆಗಿರುವ ಇಂದಿನ ದಿನಗಳಲ್ಲಿ ಮಾಧ್ಯಮಗಳು ಮೋಧ್ಯಮಗಳಾಗಿ ಪರಿವರ್ತನೆ ಆಗುತ್ತ ಆಳುವ ದೊರೆಗಳನ್ನು ಮೆಚ್ಚಿಸಲು ವಸ್ತು ನಿಷ್ಠ ವರದಿಗಳು ಮಾಯವಾಗಿರುತ್ತದೆ. ಕೆಲವೊಮ್ಮೆ ಕೆಲವು ಚಾನಲ್ ಗಳು ಪತ್ರಿಕೆಗಳು ಸಮಾಜದಲ್ಲಿ ಕೋಮು ಸೌಹಾರ್ದ ಹಾಳುಮಾಡುವ ಉದಾಹರಣೆಗಳೂ ಸಾಕಷ್ಟಿವೆ,, ಒಂದು ನಿಶ್ಚಿತ ವರ್ಗದ, ಒಂದು ನಿಶ್ಚಿತ ರಾಜಕೀಯ ಹಿತಾಸಕ್ತಿಗೆ ಪೂರಕವಾಗಿ ಕಾರ್ಯಕ್ರಮ ರೂಪಿಸುವ ಮಾಧ್ಯಮಗಳು ಮತ್ತು ಟೀವಿ ಚಾನಲ್ ಗಳು ದೇಶದ ಆಂತರಿಕ ಶಾಂತಿಗೆ ಮಾರಕವಾಗಿ ಪರಿಣಮಿಸಿದೆ

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಿಸುವ ಕುರಿತು ಒತ್ತಾಯಿಸಿ, ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಛೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದ್ದಾರೆ.

VISTARANEWS.COM


on

Pressmeet for Demand for construction of bypass road in Yallapur
ಯಲ್ಲಾಪುರ ಪಟ್ಟಣದಲ್ಲಿ ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Koo

ಯಲ್ಲಾಪುರ: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ (Bypass Road) ನಿರ್ಮಿಸುವ ಕುರಿತು ಒತ್ತಾಯಿಸಿ, ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದರು.

ಪಟ್ಟಣದ ಫಾರೆಸ್ಟ್‌ ಐ.ಬಿ.ಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯು ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿದ್ದು, ಪ್ರತಿನಿತ್ಯ ಸಂಚರಿಸುವ ಸಾವಿರಾರು ವಾಹನಗಳಿಂದಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಹಾಗೂ ಸ್ಥಳೀಯ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಪಟ್ಟಣದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಈಗಾಗಲೇ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ ಚತುಷ್ಪಥ ರಸ್ತೆ ಆಗಿದ್ದು, ಮುಂದುವರೆದು ಯಲ್ಲಾಪುರದ ಮೂಲಕ ಈ ರಸ್ತೆ ಹಾದು ಹೋದಲ್ಲಿ, ಯಲ್ಲಾಪುರ ನಗರದಲ್ಲಿ ನಡೆದಾಡುವುದು ಸಹ ಕಷ್ಟ ಸಾಧ್ಯವಾಗಲಿದೆ.

ಇದನ್ನೂ ಓದಿ: T20 World Cup 2024:​ ನೂತನ ಲೋಗೋ ವಿನ್ಯಾಸಕ್ಕೆ ಫಿದಾ ಆದ ಕ್ರಿಕೆಟ್​ ಅಭಿಮಾನಿಗಳು

ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂಚಿತವಾಗಿಯೇ ಬೈಪಾಸ್ ನಿರ್ಮಾಣಕ್ಕೆ ಸರ್ಕಾರ ಆದೇಶಿಸಬೇಕು. ಈ ಪ್ರಯುಕ್ತ ಡಿ. 11 ರಂದು ಬೆಳಗ್ಗೆ 10 ಗಂಟೆಗೆ ವೈಟಿಎಸ್‌ಎಸ್‌ ಮೈದಾನದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪಾಲಕರು, ಅಂಗಡಿಕಾರರೆಲ್ಲ ಸೇರಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ತಹಶೀಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಸಹ ತಮ್ಮ ಮಕ್ಕಳ ಸುರಕ್ಷತೆಗಾಗಿ, ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಅಗತ್ಯತೆಯ ಕುರಿತು ಮನದಟ್ಟು ಮಾಡಲು ಪಾಲ್ಗೊಳ್ಳುವಂತೆ ಕೋರಿದರು.

ಸಮಿತಿಯ ಪ್ರಮುಖರಾದ ರವಿ ಶ್ಯಾನಭಾಗ್ ಮಾತನಾಡಿ, ಹೆದ್ದಾರಿಯ ಅಕ್ಕ ಪಕ್ಕದ ಅಂಗಡಿಕಾರರು ಹೆಚ್ಚಿನದಾಗಿ ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅವಶ್ಯಕತೆ ಇದೆ. ಬೈಪಾಸ್ ನಿರ್ಮಾಣವಾಗದೆ ಹೆದ್ದಾರಿ ಅಗಲೀಕರಣವಾದಲ್ಲಿ, ಯಲ್ಲಾಪುರದ ಬಹುತೇಕ ಅಂಗಡಿಗಳು ನೆಲೆ ಕಳೆದುಕೊಳ್ಳಲಿದೆ. ಹೀಗಾಗಿ ಮುಂದಿನ ಭವಿಷ್ಯಕ್ಕಾಗಿ ಪಾಲ್ಗೊಳ್ಳಬೇಕು. ಬೈಪಾಸ್ ನಿರ್ಮಾಣಕ್ಕೆ ಸಮಯ ಆಗಲಿದ್ದು, ಅಲ್ಲಿಯವರೆಗೆ ಟ್ರಾಫಿಕ್ ಪೊಲೀಸರ ತಂಡ ಪ್ರಾರಂಭಿಸಿ, ಟ್ರಾಫಿಕ್ ನಿರ್ವಹಣೆಯ ಕಾರ್ಯ ಮಾಡಬೇಕಿದೆ ಎಂದರು.

ಇದನ್ನೂ ಓದಿ: The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ,‌ ಎ.ಎ. ಶೇಖ್‌, ಮಹ್ಮದ್‌ ಗೌಸ್‌, ವಕೀಲೆ ಬೇಬಿ ಅಮಿನಾ, ಸುರೇಶ್ ಬೊರಕರ, ಪ್ರಭಾಕರ ನಾಯ್ಕ, ಮಾಧವ ನಾಯಕ, ದಾಸಿಂತ್ ಫರ್ನಾಂಡಿಸ್, ಉಲ್ಲಾಸ್ ಮಹಾಲೆ, ವೇಣುಗೋಪಾಲ ಮದ್ಗುಣಿ, ಜಗನ್ನಾಥ ರೇವಣಕರ ಇದ್ದರು.

Continue Reading

ಆರೋಗ್ಯ

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ

Super Speciality Hospital : ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

VISTARANEWS.COM


on

super speciality hospital in Uttara Kannada District
Koo

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ (Uttara Kannada District) ದಶಕಗಳ ಬೇಡಿಕೆಯಾಗಿದ್ದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಕನಸು ಸದ್ಯಕ್ಕೆ ಈಡೇರುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕೊನೇ ಬಜೆಟ್‌ನಲ್ಲಿ ಕುಮಟಾದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದಕ್ಕಾಗಿ ಕುಮಟಾದಲ್ಲಿ ಜಾಗವನ್ನೂ ಗುರುತಿಸಿ ಓಕೆ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಳೆದ ಬಜೆಟ್‌ನಲ್ಲಿ (Karnataka budget 2023) ಅನುದಾನ ನೀಡಿರಲಿಲ್ಲ. ಈಗ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

ವಿಧಾನ ಪರಿಷತ್‌ ಕಲಾಪ ವೇಳೆ ಕಾರವಾರ ಶಾಸಕ ಸತೀಶ್‌ ಸೈಲ್‌ ಮಾತನಾಡಿ, ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೇ ಬೇಕು. ಹೀಗಾಗಿ ಸದ್ಯಕ್ಕೆ ಕಾರವಾರದಲ್ಲಿ ಮಾಡಿಕೊಡಿ. ನಂತರ ಉತ್ತರ ಕನ್ನಡದ ಬೇರೆ ಪ್ರದೇಶದಲ್ಲಿ ನಿರ್ಮಾಣ ಮಾಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಆಯತಪ್ಪಿ ಬಿದ್ದ ಸವಾರನ ಮೇಲೆ ಹರಿದ ಲಾರಿ! ತುಂಡಾದ ದೇಹ

ಇದರಿಂದ ಅಸಮಾಧಾನಗೊಂಡ ಕುಮಟಾ ಶಾಸಕ ದಿನಕರ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಬೇಕು. ಈಗಾಗಲೇ ಈ ಬಗ್ಗೆ ಒಮ್ಮೆ ನಿರ್ಣಯ ಕೂಡಾ ಆಗಿದೆ. ಅಲ್ಲದೆ, ಸ್ಥಳವನ್ನೂ ಗುರುತಿಸಲಾಗಿದ್ದು, ಎಲ್ಲರೂ ಆಗ ಒಪ್ಪಿಗೆ ನೀಡಿದ್ದರು. ಹೀಗಾಗಿ ಕುಮಟಾದಲ್ಲಿಯೇ ಆಗಬೇಕು. ಇದು ಜಿಲ್ಲೆಯ ಹೃದಯ ಸ್ಥಳ ಆಗಿರುವುದರಿಂದ ಜಿಲ್ಲೆಯ ಎಲ್ಲರಿಗೂ ಇಲ್ಲಿಗೆ ಬರಲು ಅನುಕೂಲ ಆಗಲಿದೆ ಎಂದು ಆಗ್ರಹಿಸಿದರು.

ಆಗ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಶಿರಸಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿ ಎಂದು ಆಗ್ರಹಿಸಿದ್ದಾರೆ. ಅದಕ್ಕೆ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರು, ಘಟ್ಟದ ಮೇಲೊಂದು, ಘಟ್ಟದ ಕೆಳಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಒತ್ತಾಯ ಮಾಡಿದರು. ಹೀಗಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಡಿಮ್ಯಾಂಡ್‌ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಸಕರಿಂದಲೂ ಕೇಳಿಬಂತು.

ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಬಹಳ ದಿನಗಳಿಂದ ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇದೆ. ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಮಾಡಬೇಕು ಎಂಬ ಪ್ರಯತ್ನ ನಡೆದಿದೆ. ಆದರೆ, ಕಾರವಾರದಲ್ಲಿ ಅಗತ್ಯ ವೈದ್ಯ ಹುದ್ದೆಗಳಿಗೆ ಎರಡು ಸಲ ಕಾಲ್ ಫಾರ್ ಮಾಡಿದರೂ ಯಾರೂ ಅರ್ಜಿ ಹಾಕಿಲ್ಲ. ಮತ್ತೊಮ್ಮೆ ವೈದ್ಯ ಹುದ್ದೆಗಳಿಗೆ ಆಹ್ವಾನ ನೀಡಲಾಗುತ್ತದೆ. ಈ ಕೆಲಸವಾದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸುಲಭವಾಗಲಿದೆ ಎಂದು ಹೇಳಿದರು.

ಉ.ಕ. ಜನರಿಂದ ನಡೆದಿದ್ದ ಆಂದೋಲನ

ಉತ್ತರ ಕನ್ನಡ ಜಿಲ್ಲೆಯು ಭೌಗೋಳಿಕವಾಗಿ ಬಹಳ ದೊಡ್ಡದಿರುವ ಕಾರಣ, ಅಪಘಾತವಾದರೆ ಇಲ್ಲವೇ ತುರ್ತು ಚಿಕಿತ್ಸೆ ಬೇಕಿದ್ದರೆ ಪಕ್ಕದ ಮಂಗಳೂರು, ಗೋವಾ ಇಲ್ಲವೇ ಹುಬ್ಬಳ್ಳಿಯಂತಹ ಕಡೆಗಳಿಗೆ ಹೋಗಬೇಕು. ಇದರಿಂದ ಸಾಕಷ್ಟು ಜೀವ ಹಾನಿಯಾಗುತ್ತಲಿದೆ. ರಾಜ್ಯಕ್ಕೆ ವಿದ್ಯುತ್‌ ಕೊಟ್ಟ ಜಿಲ್ಲೆಯ ಜನರಿಗೆ ಕನಿಷ್ಠ ಮೂಲ ಸೌಕರ್ಯವೂ ಇಲ್ಲದಂತೆ ಆಗಿದ್ದು, ಕೊನೇ ಪಕ್ಷ ಒಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನಾದರೂ ನೀಡಬೇಕು ಎಂದು ಈಚೆಗೆ ಭಾರಿ ಹೋರಾಟ ನಡೆದಿತ್ತು.

ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮೇಲೆ ಸಾಕಷ್ಟು ಒತ್ತಡವನ್ನು ಹೇರಲಾಗಿತ್ತು. ಹೀಗಾಗಿ ಆಗಿನ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರು ಉತ್ತರ ಕನ್ನಡ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ನಡೆಸಿದ್ದಲ್ಲದೆ, ಜಿಲ್ಲೆಗೆ ಭೇಟಿ ನೀಡಿ ಸ್ಥಳಪರಿಶೀಲನೆಯನ್ನೂ ನಡೆಸಿದ್ದರು. ಕೊನೆಗೆ ಸರ್ಕಾರ ಸಹ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸುವಾಗ ಇದರ ಪ್ರಸ್ತಾಪವೇ ಇರಲಿಲ್ಲ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿತ್ತು.

ಬಗೆಹರಿದಿದ್ದ ಜಾಗದ ಗೊಂದಲ

ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗ ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ವೆ ನಂಬರ್ 440ರಲ್ಲಿ 15.35 ಎಕರೆ ಜಾಗವನ್ನು ಮೀಸಲಿಡಲಾಗಿದೆ. ಹಿಂದೆ ಈ ಜಾಗವನ್ನು ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕಾಗಿ ಮೀಸಲಿಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗವಾಗಿರುವ ಹಿನ್ನೆಲೆಯಲ್ಲಿ ಸದ್ಯ ಈ ಜಾಗವನ್ನು ಆಸ್ಪತ್ರೆಗಾಗಿ ನೀಡುವಂತೆ ಸೂಚನೆ ನೀಡಲಾಗಿತ್ತು. ವಸತಿ ಶಾಲೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಪರ್ಯಾಯ ಜಾಗವನ್ನು ಒದಗಿಸುವ ಭರವಸೆಯನ್ನು ನೀಡಲಾಗಿತ್ತು.

ಇದನ್ನೂ ಓದಿ: NPS Cancellation: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

ವಸತಿ ಶಾಲೆಯ ಜಾಗ ಆಸ್ಪತ್ರೆಗೆ

ಉತ್ತರ ಕನ್ನಡ ಜಿಲ್ಲಾಡಳಿತವು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗೆ ಮೀಸಲಿರಿಸಲಾಗಿದ್ದ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ನೀಡುವಂತೆ ಇಲಾಖೆಗೆ ಕಳೆದ ವರ್ಷ ಪತ್ರ ಬರೆಯಲಾಗಿತ್ತು. ಆಗಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಉತ್ತರ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಅವರು ಆ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸಲು ಅನುಮತಿ ನೀಡಿದ್ದರು. ಅದರಂತೆ ಏಕಲವ್ಯ ವಸತಿ ಶಾಲೆಗಾಗಿ ನಿಗದಿಪಡಿಸಿ ಇರಿಸಲಾಗಿದ್ದ 17 ಎಕರೆ 14 ಗುಂಟೆ ಜಮೀನಿನಲ್ಲಿ, 15 ಎಕರೆ 35 ಗುಂಟೆಯಷ್ಟು ಪ್ರದೇಶವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಜತೆಗೆ ಏಕಲವ್ಯ ವಸತಿ ಶಾಲೆಗೆ ಪರ್ಯಾಯ ಜಾಗ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಷರತ್ತು ವಿಧಿಸಿ, ಆ ಪ್ರದೇಶವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕಾಯ್ದಿರಿಸಲು ಸರ್ಕಾರದ ಆಪ್ತ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದರು.

Continue Reading

ಉಡುಪಿ

Karnataka Weather : ಮತ್ತೆ ಬದಲಾಯ್ತು ವಾತಾವರಣ; ಮಳೆ ಹೋಯ್ತು, ಬಿಸಿಲು ಬಂತು!

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಪ್ರಭಾವದಿಂದಾಗಿ ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇತ್ತು. ಇದೀಗ ಪ್ರಭಾವ ಕಡಿಮೆ ಆಗಿದ್ದು, ರಾಜ್ಯಾದ್ಯಂತ ಇನ್ನೆರಡು ದಿನಗಳು ಶುಷ್ಕ ವಾತಾವರಣ (Dry weather) ಇರಲಿದ್ದು, ಮಳೆಗೆ (Rain News) ಬ್ರೇಕ್‌ ಬಿದ್ದಿದೆ.

VISTARANEWS.COM


on

By

dry weather karnataka weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ವಾತಾವರಣ ಬದಲಾಗಿದೆ. ಮಳೆಗೆ ಹೋಗಿ ಮತ್ತೆ ಬಿಸಿಲು ಆವರಿಸುತ್ತಿದೆ. ಇನ್ನೆರಡು ದಿನಗಳು ರಾಜ್ಯದಲ್ಲಿ ಒಣಹವೆ (Dry weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಡಿ.7-8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಬದಲಿಗೆ ಒಣಹವೆಯೇ ಮೇಲುಗೈ ಸಾಧಿಸಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Winter Cardigan Fashion: ಚಳಿಗಾಲದಲ್ಲಿ ಸ್ಟೈಲಿಶ್‌ ಆಗಿ ಕಾಣಿಸುವ ಕಾರ್ಡಿಗಾನ್‌ ಫ್ಯಾಷನ್‌

ಹಗುರ ಮಳೆಯಷ್ಟೇ!

ಇನ್ನೂ ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಮಾತ್ರ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿ ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಒಣಹವೆ ಇರಲಿದೆ.

ಇತ್ತ ಮಲೆನಾಡಿನ ಹಾಸನ, ಕೊಡಗು, ಶಿವಮೊಗ್ಗ,ಚಿಕ್ಕಮಗಳೂರಲ್ಲೂ ಮಳೆ ಮುನ್ಸೂಚನೆ ಇಲ್ಲ. ಬಿಸಿಲಿನಿಂದ ಕೂಡಿರಲಿದೆ. ಇನ್ನು ಬೆಂಗಳೂರಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉತ್ತರ ಕನ್ನಡ

Uttara Kannada News: ವಜ್ರಳ್ಳಿಯಲ್ಲಿ ಸ್ವಚ್ಛತಾ ಆಂದೋಲನ

Uttara Kannada News: ಯಲ್ಲಾಪುರ ತಾಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯಲ್ಲಿ ಮಂಗಳವಾರ ಯಲ್ಲಾಪುರದ ಆಶಿಯಾ ಸಮಾಜ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು.

VISTARANEWS.COM


on

Uttara Kannada News Cleanliness movement programme in Vajralli
ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನ ಕಾರ್ಯಕ್ರಮದಲ್ಲಿ ವಜ್ರಳ್ಳಿಯ ಸರ್ವೋದಯ ಶಿಕ್ಷಣ ಸಮಿತಿಯ ಉಪಾಧ್ಯಕ್ಷ ಟಿ.ಸಿ.ಗಾಂವ್ಕಾರ ಮಾತನಾಡಿದರು.
Koo

ಯಲ್ಲಾಪುರ: ತಾಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯಲ್ಲಿ ಮಂಗಳವಾರ ಯಲ್ಲಾಪುರದ ಆಶಿಯಾ ಸಮಾಜ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಆಂದೋಲನ (Cleanliness Movement) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವಜ್ರಳ್ಳಿಯ ಸರ್ವೋದಯ ಶಿಕ್ಷಣ ಸಮಿತಿಯ ಉಪಾಧ್ಯಕ್ಷ ಟಿ.ಸಿ.ಗಾಂವ್ಕಾರ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ಲಾಸ್ಟಿಕ್ ಮುಕ್ತವಾದ ಪರಿಸರ ಎಲ್ಲರ ಸಂಕಲ್ಪವಾಗಬೇಕು. ನಿತ್ಯ ನಾವು ಬಳಸುವ ವಸ್ತುಗಳು ತ್ಯಾಜ್ಯಗಳಾಗಿ ನಮ್ಮ ಜೀವನಕ್ಕೆ ಆತಂಕ ತಂದೊಡ್ಡಿದೆ ಎಂದರು.

ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಗೀರಥ ನಾಯ್ಕ ಮಾತನಾಡಿ, ಸ್ವಚ್ಛತೆಯ ಕುರಿತಾದ ಜಾಗೃತಿ ನಮ್ಮ ಮನಸ್ಸಿನಲ್ಲಿ ಮೊದಲು ಮೂಡಬೇಕು. ನಾವು ಬದಲಾಗದೇ ನಮ್ಮ ಜೀವನ ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಬದುಕಿನ ಜತೆಗೆ ಎಲ್ಲರ ಆರೋಗ್ಯ ಪೂರ್ಣವಾದ ಬದುಕನ್ನು ಯೋಚಿಸಿ ಸ್ವಚ್ಛತೆಯ ಕಾಳಜಿ ವಹಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ನಮ್ಮ ಸಮಾಜದಲ್ಲಿ ಸ್ವಚ್ಛತೆ ಕಾಪಾಡಿದರೆ ನಾವು ದೇಶಸೇವೆ ಮಾಡಿದ ಹಾಗೆಯೇ. ಕಸದ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ. ಪ್ಲಾಸ್ಟಿಕ್ ಮರುಬಳಕೆಯ ಬಗ್ಗೆ ಗಂಭೀರವಾಗಿ ಯೋಚಿಸುವ ಕಾಲ ಬಂದಿದೆ ಎಂದರು.

ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಭಟ್ಟ ಕೀಚನಾಳ, ಆಶಿಯಾ ಸಮಾಜ ಸೇವಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ವಿಜಯ ನಾಯ್ಕ, ಅಧ್ಯಕ್ಷ ಅನಿಲ್ ಮರಾಠೆ, ಸಂಸ್ಥೆಯ ಸದಸ್ಯರಾದ ಫರಜಾನಾ, ಆಯೇಷಾ, ಬಾನು ಬಿ., ಮುಶೃತ್, ಬಾಲಚಂದ್ರ ಹಾಗೂ ಮುಖ್ಯಾಧ್ಯಾಪಕ ಎಂ. ಕೆ. ಭಟ್ಟ, ಗ್ರಾಮ ಪಂಚಾಯಿತಿಯ ದತ್ತಾತ್ರೇಯ ಆಚಾರಿ, ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಶಿಕ್ಷಕ ಎಸ್. ಟಿ. ಬೇವಿನಕಟ್ಟಿ ನಿರ್ವಹಿಸಿ, ವಂದಿಸಿದರು. ನಂತರ ವಜ್ರಳ್ಳಿಯ ಬೀಗಾರ ಬಸ್ ನಿಲ್ದಾಣದಿಂದ ಹೊನ್ನಗದ್ದೆ ಕ್ರಾಸ್ ವರೆಗೆ ಆಶಿಯಾ ಸಮಾಜ ಸೇವಾ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯ ನಡೆಸಿದರು.

Continue Reading
Advertisement
Krishna Byregowda Central assistance
ಕರ್ನಾಟಕ25 mins ago

Assembly Session : ಕೇಂದ್ರ ಅನುದಾನ ವರ್ಷದಿಂದ ವರ್ಷಕ್ಕೆ ಇಳಿಕೆ; ಪೈಸೆ ಪೈಸೆ ಲೆಕ್ಕ ಕೊಟ್ಟ ಕೃಷ್ಣ ಬೈರೇಗೌಡ

Karnataka Drought
ಕರ್ನಾಟಕ35 mins ago

Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

IT raids on liquor traders across Odisha and Jharkhand
ದೇಶ37 mins ago

ತೆರಿಗೆಗಳ್ಳರ ಮೇಲೆ ಐಟಿ ದಾಳಿ; ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

Attendance Araga Jnanendra UT Khader Araga jnanendra
ಕರ್ನಾಟಕ58 mins ago

Belagavi Winter Session : ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Madhu Bangarappa in Belagavi Winter Session
ಕರ್ನಾಟಕ1 hour ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Pressmeet for Demand for construction of bypass road in Yallapur
ಉತ್ತರ ಕನ್ನಡ1 hour ago

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Israel
ಪ್ರಮುಖ ಸುದ್ದಿ1 hour ago

Israel Palestine War: ಅರ್ಧದಷ್ಟು ಹಮಾಸ್ ಕಮಾಂಡರ್‌ಗಳು ಫಿನಿಷ್! ಇಸ್ರೇಲ್ ಹೇಳಿಕೆ

bengaluru bulls kiccha sudeep
ಕ್ರೀಡೆ1 hour ago

ಬೆಂಗಳೂರು ಬುಲ್ಸ್​ಗೆ ಫುಲ್ ಚಾರ್ಜ್​ ಮಾಡಲು ಬರಲಿದ್ದಾರೆ ಕಿಚ್ಚ ಸುದೀಪ್

self harming by wadi Acc cement Depute Director
ಕರ್ನಾಟಕ2 hours ago

Self Harming : ಅದಾನಿ ಗ್ರೂಪ್‌ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ಸೂಸೈಡ್‌!

A girl shoots her classmate and herself with shotgun
ವಿದೇಶ2 hours ago

viral video: ಸಹಪಾಠಿಗೆ ಗುಂಡು ಹೊಡೆದು ತಾನೂ ಸತ್ತ 14 ವರ್ಷದ ವಿದ್ಯಾರ್ಥಿನಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Madhu Bangarappa in Belagavi Winter Session
ಕರ್ನಾಟಕ1 hour ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ2 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ8 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ15 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ23 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

ಟ್ರೆಂಡಿಂಗ್‌