Site icon Vistara News

Vijayanagara News: ಆ.9ರಿಂದ ಸಚಿವ ಜಮೀರ್ ಅಹ್ಮದ್ ಖಾನ್‌ರಿಂದ ವಿಜಯನಗರ ಜಿಲ್ಲಾ ಪ್ರವಾಸ; ಪ್ರಗತಿ ಪರಿಶೀಲನೆ

Zameer ahmad Khan about Speaker post

ಹೊಸಪೇಟೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್‌ (Minister Zameer Ahmed Khan), ಆ.9 ರ ಬುಧವಾರದಿಂದ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ 5 ದಿನಗಳ ಕಾಲ ತಾಲೂಕುವಾರು ಪ್ರಗತಿ ಪರಿಶೀಲನಾ ಸಭೆ (progress review meeting) ಕೈಗೊಳ್ಳಲಿದ್ದಾರೆ, ಇದರ ಜತೆಗೆ ವಿವಿಧ ಭಾಗಗಳಿಗೆ ಭೇಟಿ ಕಾರ್ಯಕ್ರಮವನ್ನು ನಿಗಧಿಪಡಿಸಲಾಗಿದೆ.

ಆ.9 ರ ಬುಧವಾರ ಹೊಸಪೇಟೆ ತಾಲೂಕು ಕಚೇರಿಯಲ್ಲಿ ಆರಂಭಿಸಲಾದ ಇ-ಆಫೀಸ್ ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ನೂತನ ಕಚೇರಿ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ.

ನಂತರ ಪಾಪಿನಾಯಕನಹಳ್ಳಿ ಏತನೀರಾವರಿ ಕಾಮಗಾರಿ ಸ್ಥಳ ಪರಿಶೀಲಿಸಿ, ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹೊಸಪೇಟೆ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: Vijayanagara News: ಶಿವಪುರ ಗ್ರಾಮದಲ್ಲಿ ಕಾಡುಹಂದಿಗಳ ದಾಳಿ; ಮೆಕ್ಕೆಜೋಳ ಬೆಳೆ ನಾಶ

ಆ‌.10 ರಂದು ಗುರುವಾರ ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆ, ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಶಿವಪುರದ ಕೂಡ್ಲಿಗಿ-ಪಾವಗಡ ನೀರು ಸರಬರಾಜು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಅಲ್ಪಸಂಖ್ಯಾತರ ವಸತಿ ನಿಲಯ, ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಪದವಿಪೂರ್ವ ಕಾಲೇಜು, ಅಂಗಡಿ ವೀರಮ್ಮ ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಲಿದ್ದಾರೆ.

ನಂತರ ಕೂಡ್ಲಿಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಖಾಸಗಿ ಸಂಸ್ಥೆಯ ಸಮಾರಂಭದಲ್ಲಿ ಭಾಗಿಯಾಗುವರು.

ಆ.11ರಂದು ಶುಕ್ರವಾರ ಹೂವಿನಹಡಗಲಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆ, ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಹೂವಿನಹಡಗಲಿಯ 6ನೇ ವಾರ್ಡ್ ಟಿಡಿವಿ ಸ್ಕೂಲ್ ಹಿಂಭಾಗದ ಪ್ರದೇಶದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳ ಪರಿಶೀಲನೆ, ಅಂಗನವಾಡಿ ಕೇಂದ್ರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನೂತನ ಬಸ್ ನಿಲ್ದಾಣ ಕಾಮಗಾರಿ ವೀಕ್ಷಣೆ, ಸೋಗಿ ಗ್ರಾಮದಲ್ಲಿ ಎನ್‌ಆರ್ ಎಲ್‌ಎಂ ಯೋಜನೆಯಡಿ ನಿರ್ಮಿ‌ಸಿರುವ ನರ್ಸರಿಗೆ ಭೇಟಿ ನೀಡಲಿದ್ದಾರೆ. ನಂತರ ಹೂವಿನಹಡಗಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಆ.12ರ ಶನಿವಾರ ಹಗರಿಬೊಮ್ಮನಹಳ್ಳಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ನಂತರ, ತಾಲೂಕಿನಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣ ನಿರ್ಮಾಣ ಕಾಮಗಾರಿ, ಸಾರ್ವಜನಿಕ ಆಸ್ಪತ್ರೆ ಉನ್ನತೀಕರಿಸುವ ಕಾಮಗಾರಿ ಹಾಗೂ ಹಳೇ ಹಗರಿಬೊಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಕಯಂತ್ರ ಕೊಠಡಿ, ಬಾಲಕಿಯರ ಶೌಚಾಲಯ ಕಟ್ಟಡಗಳ ನಿರ್ಮಾಣ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: Yadgiri News: ಭರ್ತಿಯಾದ ಹತ್ತಿಕುಣಿ ಜಲಾಶಯ; ರೈತರಲ್ಲಿ ಸಂತಸ

ನಂತರ ಬ್ಯಾಸಿಗಿದೇರಿ ಗ್ರಾಮ ಪಂಚಾಯಿತಿಯ ನಂದಿಪುರ ಗ್ರಾಮದ ವೈಯಕ್ತಿಕ ಕೋಳಿ ಶೆಡ್, ಕೃಷಿಹೊಂಡ ನಿರ್ಮಾಣ ಕಾಮಗಾರಿ, ಹಂಪಾಪಟ್ಟಣ ಗ್ರಾಮ ಪಂಚಾಯಿತಿಯ ಪಿಂಜಾರ ಹೆಗ್ಡಾಳ್ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳ ಪರಿಶೀಲನೆ ನಡೆಸಲಿದ್ದಾರೆ. ನಂತರ ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಆ.14 ರ ಸೋಮವಾರ ಹರಪನಹಳ್ಳಿ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆ, ಅಹವಾಲು ಸ್ವೀಕರಿಸಲಿದ್ದಾರೆ. ನಂತರ ನೂತನ ಪೊಲೀಸ್ ಠಾಣೆ ಉದ್ಘಾಟನೆ, ಚಿಕ್ಕಳ್ಳಿ ನರೇಗಾ ಕಾಮಗಾರಿ, ಆದರ್ಶ ವಿದ್ಯಾಲಯದ ಭೋಜನಾಲಯ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ಹಾಗೂ ತೆಲಿಗಿ ನಾಡಕಚೇರಿ ಉದ್ಘಾಟಿಸಲಿದ್ದಾರೆ. ಬಳಿಕ ಎಪಿಎಂಸಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: Ballari News: ಬಳ್ಳಾರಿಯಲ್ಲಿ ಕಿಷ್ಕಿಂದ ವಿಶ್ವವಿದ್ಯಾಲಯ ಪ್ರಾರಂಭ: ಡಾ. ಎಸ್.ಜೆ.ವಿ. ಮಹಿಪಾಲ್

ಆ‌.15 ರಂದು ಮಂಗಳವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಲಿದ್ದಾರೆ.

Exit mobile version