ಹರಪನಹಳ್ಳಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (Ayodhya Ram Mandir) ಲೋಕಾರ್ಪಣೆಗೊಂಡ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ನೇರವೇರಿಸಲಾಯಿತು.
ಪಟ್ಟಣದ ತೆಲುಗರ ಓಣಿಯಲ್ಲಿರುವ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಶ್ರೀರಾಮನಿಗೆ ಅಭಿಷೇಕ ನೇರವೇರಿಸಿ, ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು, ತೆಲುಗರ ಓಣಿಯ ಉದ್ದಕ್ಕೂ ಕೇಸರಿ ಧ್ವಜಗಳನ್ನು ಕಟ್ಟಲಾಗಿತ್ತು.
ಕೊಟ್ಟೂರು ರಸ್ತೆಯ ವಾಸವಿ ಕಲ್ಯಾಣಮಂಟಪದಲ್ಲಿ ಆರ್ಯವೈಶ್ಯ ಸಮಾಜ ಮತ್ತು ಹಿಂದೂ ಸಮಾಜದ ಸಹಯೋಗದಲ್ಲಿ ಶ್ರೀರಾಮ ದೇವರಿಗೆ ವಿಶೇಷ ಅಲಂಕಾರ, ಮಹಾಮಂಗಳಾರತಿ ಮತ್ತು ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಇದನ್ನೂ ಓದಿ: Ram Mandir: ನಾಳೆಯಿಂದ ಸಾರ್ವಜನಿಕರಿಗೆ ರಾಮ ಮಂದಿರ ಮುಕ್ತ; ಆರತಿ, ದರ್ಶನಕ್ಕೆ ಸಮಯ ನಿಗದಿ
ಗೌಳೇರ ಓಣಿಯಲ್ಲಿ ಬೃಹತ್ ಶ್ರೀರಾಮ ದೇವರ ಕಟೌಟ್ ನಿಲ್ಲಿಸಿ ಅದಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಠದಕೇರಿಯಲ್ಲಿ ಸಹ ಶ್ರೀರಾಮ ದೇವರ ಸ್ಮರಣೆ ನಡೆಯಿತು. ವಾಲ್ಮೀಕಿ ನಗರದಲ್ಲಿ ಶ್ರೀರಾಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅನ್ನ ಸಂತರ್ಪಣೆ ಮಾಡಲಾಯಿತು. ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ತಾರಕಹೋಮ ನಡೆಯಿತು, ಪ್ರವಾಸಿ ಮಂದಿರದ ಬಳಿಯಿರುವ ಉಕ್ಕಡದ ಹುಲಿಬೆಂಚಿ ಆಂಜನೇಯ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಕೊಸಂಬರಿ ಪಾನಕವನ್ನು ಭಕ್ತರಿಗೆ ವಿತರಣೆ ಮಾಡಲಾಯಿತು,
ತಾಲೂಕಿನ ಮತ್ತಿಹಳ್ಳಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ವಿಜಯನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟಿಲ್ ಪಾಲ್ಗೊಂಡಿದ್ದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿನ ದೇವಸ್ಥಾನಗಳಲ್ಲಿ ತೆಂಗಿನ ಗರಿ, ಮಾವಿನ ತಳಿರು ತೋರಣ ಹಾಗೂ ಬಾಳೆಕಂಬಗಳಿಂದ ಅಲಂಕರಿಸಿ, ಪೂಜೆ ನೆರವೇರಸಲಾಯಿತು.
ಪಟ್ಟಣದ ತೆಲುಗರ ಓಣಿಯಲ್ಲಿರುವ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ನೆರವೇರಿಸಲಾಗಿದ್ದು, ಇಡೀ ದೇಶದ ರಾಮ ಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಅನ್ನದಾಸೋಹ, ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ತಿಳಿಸಿದರು.
ಇದನ್ನೂ ಓದಿ: Job Alert: ಬ್ಯಾಂಕ್ ಆಫ್ ಬರೋಡಾದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಿಶೇಷ ಪೂಜೆಯಲ್ಲಿ ಮಾಜಿ ಕಂದಾಯ ಸಚಿವ ಜಿ.ಕರುಣಾಕರೆಡ್ಡಿ, ವಿಷ್ಣುವರ್ಧನರೆಡ್ಡಿ, ಪುರಸಭೆ ಸದಸ್ಯರಾದ ಎಚ್.ಎಂ.ಅಶೋಕ, ಕಿರಣ್ ಶ್ಯಾನಬಾಗ್, ಗೌಳಿ ವಿನಯಕುಮಾರ, ಮುಖಂಡರಾದ ಆರುಂಡಿ ನಾಗರಾಜ, ಆರ್.ಲೋಕೇಶ, ಬಾಗಳಿ ಕೊಟ್ರೇಶಪ್ಪ, ಯಡಿಹಳ್ಳಿ ಶೇಖಪ್ಪ, ಶಶಿಕಾಂತ ಸ್ಪಟಿಕ, ಸುನೀಲ ಸ್ಪಟಿಕ, ಸಂತ ಜ್ಞಾನೇಶ್ವರ ಮಹಾರಾಜ, ತಿಮ್ಮಪ್ಪ, ರಾಘವೇಂದ್ರಶೇಟ್ಟಿ, ನಟೇಶಕುಮಾರ, ರವಿಶಂಕರ, ಮುದಗಲ್ ಕೃಷ್ಣಪ್ಪ, ಶ್ರೀಧರಶೆಟ್ಟಿ, ಗುರುನಾಥ, ಅನಂತಶೆಟ್ಟಿ, ದಯಾನಂದ ಶೆಟ್ರು, ವೀರಣ್ಣ, ಕೆ.ಪ್ರಕಾಶ, ಮಲ್ಲೇಶ, ಆಂಜನೇಯ, ಕೌಟಿ ವಾಗೀಶ್, ಡಿಶ್ ವೆಂಕಟೇಶ್, ಮಲ್ಲೇಶ್, ಸೇರಿದಂತೆ ಇತರರು ಇದ್ದರು.