ವಿಜಯನಗರ: ಮನೆಯ ಗೋಡೆ ಕಲ್ಲು ಬಿದ್ದು ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ (Vijayanagara News) ಕೂಡ್ಲಿಗಿ ತಾಲೂಕಿನ ರಾಯಪುರದಲ್ಲಿ ನಡೆದಿದೆ. ಎಮ್ಮೆಯೊಂದು ಬೆದರಿ ಗುದ್ದಿದ್ದರಿಂದ ಗೋಡೆ ಕಲ್ಲು ಮುರಿದು ಬಿದ್ದಿದೆ. ಇದರಿಂದ ತಲೆಗೆ ತೀವ್ರ ಪೆಟ್ಟಾಗಿ ಮಲಗಿದ್ದ ಮಗು ಮೃತಪಟ್ಟಿದೆ.
ಶಾಂತಕುಮಾರ್, ಮಲ್ಲೇಶ್ವರಿ ದಂಪತಿಯ ಪುತ್ರ ತೇಜಸ್ (4) ಎಂಬಾತ ಮೃತ ಬಾಲಕ. ಮನೆ ಪಕ್ಕದಲ್ಲಿ ತೆಂಗಿನ ಮರಕ್ಕೆ ಎಮ್ಮೆಯನ್ನು ಕಟ್ಟಿ ಹಾಕಲಾಗಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಎಮ್ಮೆ ಬೆದರಿ ಚಪ್ಪಡಿ ಕಲ್ಲಿನ ಮನೆಗೆ ಡಿಕ್ಕಿ ಹೊಡೆದಿದೆ. ಕಡಪ ಕಲ್ಲಾಗಿದ್ದರಿಂದ ಗೋಡೆ ಕಲ್ಲು ಮುರಿದು ಬಿದ್ದಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ಬಾಲಕನಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ.
ಸಚಿವ ಜಮೀರ್ ಅಹ್ಮದ್ ಸಾಂತ್ವನ
ಘಟನಾ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್, ಕೂಡ್ಲಿಗಿ ಶಾಸಕ ಶ್ರೀನಿವಾಸ್ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಜಮೀರ್ ಅಹ್ಮದ್ ಅವರು 2 ಲಕ್ಷ ರೂ. ವೈಯಕ್ತಿಕ ಧನ ಸಹಾಯ ಮಾಡಿದ್ದಾರೆ. ಜತೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ನೆರವು ಕೊಡಿಸುವುದಾಗಿ ತಿಳಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮದಿಂದ ಅಂಬೇಡ್ಕರ್ ಆವಾಸ್ ಯೋಜನೆಯಡಿ ಬಾಲಕನ ಕುಟುಂಬಸ್ಥರಿಗೆ ಮನೆ ಕಟ್ಟಿಕೊಡುವ ಭರವಸೆ ನೀಡಿದರು.
ಇದನ್ನೂ ಓದಿ | Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
ರಾಯಪುರ ಗಣಿ ಬಾಧಿತ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಗ್ರಾಮದಲ್ಲಿ ಸುಸಜ್ಜಿತ ಮನೆಯಿಲ್ಲದರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಸಚಿವರು ಭರವಸೆ ನೀಡಿದರು.
ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ಸಾವು
ಕಲಬುರಗಿ: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನಗರದ ರಿಂಗ್ ರಸ್ತೆಯ ನಾಗನಹಳ್ಳಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ನಡೆದಿದೆ. ಹುಟ್ಟುಹಬ್ಬದ ಪಾರ್ಟಿಗೆ ಹೋಗುತ್ತಿದ್ದಾಗ ಅಪಘಾತವಾಗಿದೆ (Bike Accident).
ಅಂಬಿಕಾ ನಗರದ ಅಲಿ ಅಬ್ಬಾಸ್ ಹಾಗೂ ರೆಹಮತ್ ನಗರದ ಇರ್ಫಾನ್ ಮೃತ ವಿದ್ಯಾರ್ಥಿಗಳು. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಬ್ಬಾಸ್ ಅಲಿ, ಸ್ನೇಹಿತ ಇರ್ಫಾನ್ ಜತೆ ಬೈಕ್‌ನಲ್ಲಿ ಪಾರ್ಟಿಗೆ ಹೊರಟಿದ್ದ. ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ವೇಳೆ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು 10ನೇ ತರಗತಿ ಓದುತ್ತಿದ್ದರು. ಸ್ಥಳಕ್ಕೆ ಸಂಚಾರ-2 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.