ಹೊಸಪೇಟೆ: ವಿಜಯನಗರ ಜಿಲ್ಲೆಯ ಬರ (Drought) ಪರಿಸ್ಥಿತಿ ಅಧ್ಯಯನಕ್ಕೆ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಕೇಂದ್ರದ ಎರಡನೇ ತಂಡ (Team) ಅ.7 ರಂದು ಶನಿವಾರ ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್. ತಿಳಿಸಿದ್ದಾರೆ.
ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಬರ ಅಧ್ಯಯನದ ಎರಡನೇ ತಂಡವಾದ ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ. ರಾಜಶೇಖರ್ ನೇತೃತ್ವದಲ್ಲಿ ಪಶುಸಂಗೋಪನೆ ಇಲಾಖೆ ನಿರ್ದೇಶಕ ಆರ್.ಥಾಕರೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಮೋತಿರಾಂ, ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಕರೀಗೌಡ ಅವರ ನೇತೃತ್ವದ ತಂಡ ವಿವಿಧ ತಾಲೂಕಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: CDAC Recruitment 2023: 278 ಹುದ್ದೆಗಳಿವೆ; ಇಂದೇ ಅರ್ಜಿ ಸಲ್ಲಿಸಿ
ಅಧಿಕಾರಿಗಳ ನೇತೃತ್ವದ ಭೇಟಿ ನೀಡಿದ ಸಂದರ್ಭದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡುವ ಜತೆಗೆ ಹಲವು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದ್ದು, ಕೆಲವೆಡೆ ಬೆಳೆ ಇದ್ದರೂ ಉಂಟಾಗಲಿರುವ ತೀವ್ರ ಇಳುವರಿ ಕುಸಿತದ ಬಗ್ಗೆ ಪರಿಣಾಮಕಾರಿಯಾಗಿ ವಿವರಿಸಿ ಅರ್ಥ ಮಾಡಿಕೊಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಅಧ್ಯಯನ ತಂಡ ಭೇಟಿ ನೀಡಲಿರುವ ಬರ ಪ್ರದೇಶಗಳು
ಜಿಲ್ಲೆಯಲ್ಲಿ ನಿಗದಿಯಾದ ಪ್ರದೇಶಗಳಲ್ಲಿ 10-15 ನಿಮಿಷಗಳ ಕಾಲ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.
ಅ.7 ರಂದು ಶನಿವಾರ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲಿನಲ್ಲಿ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಆಯಾ ಪ್ರದೇಶಗಳಿಗೆ ತಂಡ ಭೇಟಿ ನೀಡಲಿದೆ.
ಇದನ್ನೂ ಓದಿ: ENG vs NZ: ಸಬರಮತಿ ತೀರದಲ್ಲಿ ವಿಶ್ವಕಪ್ ಕ್ರಿಕೆಟ್ ಮಹಾ ಸಮರಕ್ಕೆ ಚಾಲನೆ; ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕಿವೀಸ್
ಹೊಸಪೇಟೆ ತಾಲೂಕಿನ ನಂದಿಬಂಡಿ ಗ್ರಾಮ ಸೇರಿದಂತೆ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ, ಹಂಪಾಪಟ್ಟಣ, ರಾಯರ ತಾಂಡಾ, ಆನೆಕಲ್, ಮಾದೂರು, ಕೊಟ್ಟೂರು ತಾಲೂಕಿನ ತಿಮ್ಮಲಾಪುರ ನಂತರ ಕೂಡ್ಲಿಗಿ ತಾಲೂಕಿನ ಈಚಲುಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ರೈತರೊಂದಿಗೆ ಮಾತುಕತೆ ನಡೆಸಲಿದ್ದಾರೆ.