ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸತ್ತಿದ್ದಾಗಿ ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ (BPL Card) ಹೆಸರಿನಿಂದ ಆಹಾರ ಇಲಾಖೆಯು (Food Department) ಡಿಲೀಟ್ ಮಾಡಿದೆ. ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ (ration card) ಯಡವಟ್ಟಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಬದುಕಿದ್ದರೂ 2019ರಲ್ಲೇ ಸತ್ತಿದ್ದಾರೆ ಎಂದು ಬಿಪಿಎಲ್ ಕಾರ್ಡ್‌ನಿಂದ ಹೆಸರು ಡಿಲೀಟ್ ಮಾಡಲಾಗಿದೆ. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿದೆ. ಆಹಾರ ಇಲಾಖೆ ಯಡವಟ್ಟಿನಿಂದ ಪಡಬಾರದ ಕಷ್ಟ ಪಡುತ್ತಿರುವ ಕುಟಂಬ ತಿಂಗಳ ಪಡಿತರಕ್ಕೂ ಅಲೆಯುತ್ತಿದೆ.
ಇದನ್ನೂ ಓದಿ: Road Accident : ಬಸ್ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್ ಡೆತ್, ನಾಲ್ವರಿಗೆ ಗಾಯ
ಆಹಾರ ಇಲಾಖೆ ಯಾರದ್ದೋ ಮಾತು ಕೇಳಿ ಪಡಿತರ ಚೀಟಿಯಿಂದ ಹೆಸರು ಡಿಲೀಟ್ ಮಾಡಿದೆ. ಕೂಡ್ಲಿಗಿ ತಾಲೂಕಿನ ಅಂಜಿನಮ್ಮ ತೀರಾ ಕಡು ಬಡವರಾಗಿದ್ದು, ಆಹಾರ ಇಲಾಖೆಯ ಕೆಲಸಕ್ಕೆ ಇತರೇ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ರೇಷನ್ ಕಾರ್ಡ್ ಇಲ್ಲದೇ ಇರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಅಂಜಿನಮ್ಮಗೆ ಸಿಕ್ಕಿಲ್ಲ.
ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆದು ಸುಸ್ತಾಗಿದ್ದಾರೆ. ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಡಿತರ ಚೀಟಿಯಿಂದ ಹೆಸರು ತೆಗೆಯಬೇಕಾದರೆ ಅಧಿಕಾರಿಗಳು ಸ್ಪಾಟ್ ವಿಸಿಟ್ ಮಾಡಬೇಕು. ಪಡಿತರ ಚೀಟಿಯಲ್ಲಿ ಇರುವವರು ಬದುಕಿದ್ದಾರಾ ಇಲ್ವಾ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಅಧಿಕಾರಿಗಳು ಪರಿಶೀಲಿಸದೇ ಹೀಗೆ ಅಂಜೀನಮ್ಮ ಹೆಸರು ತೆಗೆದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ