Site icon Vistara News

Hampi Utsav 2024: ಹೂವಿನಲ್ಲಿ ಅರಳಿದ ಹಂಪಿ ಕಮಲ್ ಮಹಲ್

Fruit and flower show attracting everyone at Hampi Utsav

ಹೊಸಪೇಟೆ (ವಿಜಯನಗರ): ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ವಿಶ್ವವಿಖ್ಯಾತ ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಹಂಪಿ ಉತ್ಸವದ ಅಂಗವಾಗಿ (Hampi Utsav 2024) ತೋಟಗಾರಿಕೆ ಇಲಾಖೆಯಿಂದ ಏರ್ಪಡಿಸಲಾದ ಫಲ-ಪುಷ್ಪ ಪ್ರದರ್ಶನದಲ್ಲಿ 2 ಲಕ್ಷ ಚಂಡು ಹೂಗಳು, 1 ಲಕ್ಷ ಗುಲಾಬಿ ಹೂವುಗಳು ಹಾಗೂ ವಿವಿಧ ಬಗೆಯ ಹೂವುಗಳಿಂದ ಹಂಪಿಯ ಕಮಲ್ ಮಹಲ್ ಅರಳಿದ್ದು, ಎಲ್ಲರನ್ನು ಆಕರ್ಷಿಸುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಫಲ-ಪುಷ್ಷ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Karnataka Weather: ಈ ಜಿಲ್ಲೆಗಳಲ್ಲಿ ಇರಲಿದೆ ಭಾರಿ ಚಳಿ; ಬೆಂಗಳೂರಲ್ಲಿ ಹೇಗಿದೆ ವಾತಾವರಣ?

ಫಲಪುಷ್ಪ ಪ್ರದರ್ಶನದಲ್ಲಿ ಮಳೆ ನೀರು ಕೊಯ್ಲು ಘಟಕಗಳು, ಮಿಶ್ರ ತೋಟಗಾರಿಕೆ ಕೃಷಿ ಮಾದರಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಡಾ. ಬಿ.ಆರ್ ಅಂಬೇಡ್ಕರ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಹಾಗೂ ವಿಶ್ವಗುರು ಬಸವಣ್ಣ, ಶಿವಕುಮಾರ ಸ್ವಾಮೀಜಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಕಲಾಕೃತಿಗಳು ಪ್ರಮುಖ ಆಕರ್ಷಣೆಯಾಗಿವೆ.

ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಹೊರುವ ಅರ್ಜುನ ಆನೆಯ ಪ್ರತಿಕೃತಿಯನ್ನು ಸಹ ಪ್ರದರ್ಶಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ.

Exit mobile version