ಹೊಸಪೇಟೆ (ವಿಜಯನಗರ): ಹಂಪಿ ಉತ್ಸವದ (Hampi Utsav 2024) ಅಂಗವಾಗಿ ಕೃಷಿ ಇಲಾಖೆಯಿಂದ ಹಂಪಿಯ ಮಾತಂಗ ಪರ್ವತ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಲಾದ ಸಾವಯವ ಮತ್ತು ಸಿರಿಧಾನ್ಯಗಳ ವಸ್ತು ಪ್ರದರ್ಶನವು ನೋಡುಗರ ಗಮನ ಸೆಳೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಚಾಲನೆ ನೀಡಿದರು.
ಈ ವೇಳೆ ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Job Alert: ಪದವಿ ಪೂರೈಸಿದವರಿಗೆ ಉದ್ಯೋಗಾವಕಾಶ; ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಸಾವಯವ ಮತ್ತು ಸಿರಿಧಾನ್ಯಗಳ ವಸ್ತು ಪ್ರದರ್ಶನದಲ್ಲಿ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ ಮತ್ತು ಜಮೀನುಗಳಲ್ಲಿ ನೀರಿನ ಹೊಂಡ ನಿರ್ಮಾಣ ಹಾಗೂ ಮಿಶ್ರ ಬೇಸಾಯದ ಜತೆಗೆ ಸಮಗ್ರ ಹಾಗೂ ಸುಸ್ಥಿರ ಕೃಷಿ ಮಾದರಿಗಳನ್ನು ಪ್ರದರ್ಶಿಸುವ ಜತೆಗೆ ರೈತರಿಗೆ ಕೃಷಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಮುಖ್ಯವಾಗಿ ಸಿರಿ ಧಾನ್ಯಗಳಿಂದ ನಿರ್ಮಿಸಿದ ಕನ್ನಡಾಂಬೆ ಭುವನೇಶ್ವರಿ ತಾಯಿ ಹಾಗೂ ವಿಶ್ವಗುರು ಬಸವಣ್ಣ ಅವರ ಕಲಾಕೃತಿಗಳು ಸೇರಿದಂತೆ ವಿವಿಧ ಕಲಾಕೃತಿಗಳು ಸಾರ್ವಜನಿಕರಿಗೆ ಕೈಬೀಸಿ ಕರೆಯುವಂತಿವೆ. ಇದೆ ವೇಳೆ ಸಿರಿಧಾನ್ಯಗಳ ಪಾಕ ಸ್ಪರ್ಧೆಗೂ ಚಾಲನೆ ದೊರೆಯಿತು.