ವಿಜಯನಗರ: ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕೊಟ್ಟೂರು ರಸ್ತೆಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ವಾಹನ ಸಮೇತ 3.64 ಲಕ್ಷ ರೂಪಾಯಿ ಮೌಲ್ಯದ 12,720 ಕೆ.ಜಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಬುಡ್ನಟ್ಟಿ ಗ್ರಾಮದ ನಿವಾಸಿ ಗೋಪಿ(39) ಬಂಧಿತ. ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ ಸಾರ್ವಜನಿಕರಿಗೆ ವಿತರಣೆ ಮಾಡುವ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೂಡ್ಲಿಗಿ ಠಾಣೆಯ ಎಎಸ್‌ಐ ಅಬ್ದುಲ್ ಮತ್ತು ಸಿಬ್ಬಂದಿ ದಾಳಿ ನಡೆಸಿ, ಚಾಲಕ ಗೋಪಿ ಹಾಗೂ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರಿಪಡಿಸಲು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ | Court Verdict | ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ 65ರ ಮುದುಕನಿಗೆ ಜೀವಾವಧಿ ಶಿಕ್ಷೆ