Site icon Vistara News

Vijayanagara News: ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ: ತಹಸೀಲ್ದಾರ್ ಅಮರೀಶ್

Live telecast of Gruha Lakshmi Scheme Implementation Program was watched at Kottur

ಕೊಟ್ಟೂರು: ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme) ಸದುಪಯೋಗ ಪಡಿಸಿಕೊಳ್ಳಿ ಎಂದು ತಹಸೀಲ್ದಾರ್ ಅಮರೀಶ್ ಜಾಲಹಳ್ಳಿ ತಿಳಿಸಿದರು.

ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿಯ ಸಹಯೋಗದೊಂದಿಗೆ ಬುಧವಾರ ಏರ್ಪಡಿಸಿದ್ದ ಗೃಹಲಕ್ಷ್ಮಿ ಯೋಜನೆಯ ಜಾರಿಯ ಮೈಸೂರು ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ವೇಳೆ ಅವರು ಮಾತನಾಡಿದರು.

ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸದೃಢವಾಗಿ ಎಂದ ಅವರು, ಗೃಹಲಕ್ಷ್ಮಿ ಯೋಜನೆಗೆ ಗ್ರಾಮಾಂತರ ಪ್ರದೇಶದಿಂದ 19,674 ಹಾಗೂ ಪಟ್ಟಣದಿಂದ 5,041 ಒಟ್ಟು ತಾಲೂಕಿನಿಂದ 24,715 ಅರ್ಜಿ ಸಲ್ಲಿಕೆಯಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: Asia Cup 2023: ಪಾಕ್​ ವಿರುದ್ಧದ ಪಂದ್ಯಕ್ಕೆ ರಣತಂತ್ರ ರೂಪಿಸಿದ ರೋಹಿತ್​ ಶರ್ಮ

ಗ್ರಾಮೀಣ ಪ್ರದೇಶದಿಂದ 13,994 ಹಾಗೂ ಪಟ್ಟಣದಿಂದ 3,412 ಒಟ್ಟು 17,406 ಅರ್ಜಿದಾರರಿಗೆ ಮಂಜೂರಾಗಿದ್ದು ಬಾಕಿ ಫಲಾನುಭವಿಗಳಿಗೆ ತಾಂತ್ರಿಕ ದೋಷದಿಂದ ತಿರಸೃತವಾಗಿದ್ದು ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಅವರಿಗೂ ಸಹ ಸೌಲಭ್ಯ ದೊರೆಯುತ್ತದೆ ಎಂದು ಹೇಳಿದರು.

ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಸಾವಿರಾರು ಫಲಾನುಭವಿಗಳಾದ ಮಹಿಳೆಯರು ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Elephant attack : ಚಿಕಿತ್ಸೆಗೆ ಹೋದಾಗ ಅಟ್ಟಾಡಿಸಿದ ಗಾಯಾಳು ಕಾಡಾನೆ; ಅರಣ್ಯ ಸಿಬ್ಬಂದಿ ಸಾವು!

ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ನಸರುಲ್ಲಾ, ಕಂದಾಯ ಇಲಾಖೆ ಸಿಬ್ಬಂದಿ, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತರು ಸೇರಿದಂತೆ ಫಲಾನುಭವಿ ಮಹಿಳೆಯರು ಉಪಸ್ಥಿತರಿದ್ದರು.

Exit mobile version