ಹೊಸಪೇಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆ- 2024ರ (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಮಂಗಳವಾರ ನಗರದಲ್ಲಿ ಬೈಕ್ ರ‍್ಯಾಲಿ ನಡೆಯಿತು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ಚೀಪ್ ಸಮಿತಿಯ ಸಹಯೋಗದಲ್ಲಿ ಹೊಸಪೇಟೆಯ ಡ್ಯಾಮ್ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಆವರಣದಲ್ಲಿ ಏರ್ಪಡಿಸಿದ್ದ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಡಿಸಿ ಎಂ.ಎಸ್.ದಿವಾಕರ್, ಮತದಾನವು ಪ್ರತಿಯೊಬ್ಬರಿಗೂ ಸಂವಿಧಾನಬದ್ಧವಾಗಿ ಬಂದಿರುವ ಹಕ್ಕಾಗಿದೆ. ಹೀಗಾಗಿ ಪ್ರತಿಯೊಬ್ಬರು ಮತದಾನದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!
ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಬಿ. ಮಾತನಾಡಿ, ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲಾದ್ಯಂತ ಸಾಕಷ್ಟು ಸ್ವೀಪ್ ಕಾರ್ಯಕ್ರಮಗಳನ್ನು ರೂಪಿಸಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.
ವಿವಿಧೆಡೆ ಸಂಚಾರ
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರು ಸ್ವತಃ ತಾವೇ ಬೈಕ್ ಚಲಾಯಿಸಿ ಇತರರಿಗೆ ಸ್ಪೂರ್ತಿ ತುಂಬಿದರು. ನಗರದ ವಿವಿಧೆಡೆ ಬೈಕ್ ರ‍್ಯಾಲಿ ನಡೆಸಿ ಜಾಗೃತಿ ಮೂಡಿಸಲಾಯಿತು.
ಪ್ರತಿಜ್ಞಾವಿಧಿ ಬೋಧನೆ
ಬೈಕ್ ರ‍್ಯಾಲಿಯ ಆರಂಭಕ್ಕೂ ಮುನ್ನ ಮತದಾನ ಜಾಗೃತಿಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಜೆ.ಎಂ. ಪ್ರತಿಜ್ಞಾವಿಧಿ ಬೋಧಿಸಿದರು.
ಇದನ್ನೂ ಓದಿ: Fortis Hospital: ಪಾರ್ಕಿನ್ಸನ್ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್ ಆರಂಭಿಸಿದ ಫೋರ್ಟಿಸ್ ಆಸ್ಪತ್ರೆ
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಎಚ್.ಎಸ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶ ರಾಮಚಂದ್ರಪ್ಪ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಸುಧೀರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಯುವರಾಜ ನಾಯಕ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಹೊಸಪೇಟೆ ತಾಲೂಕು ಪಂಚಾಯಿತಿ ಇಒ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ರವಿಕುಮಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂದು ಯಲಿಗಾರ ಸೇರಿದಂತೆ ಇತರರು ಇದ್ದರು.