ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗುರುವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ (Lok Sabha Election 2024) ಜರುಗಿತು. ನಗರಸಭೆಯ ಪೌರಾಯುಕ್ತ ಚಂದ್ರಪ್ಪ ಮತದಾನದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೇ 07ರಂದು ನಡೆಯುವ ಲೋಕಸಭಾ ಚುನಾವಣೆಗೆ ಎಲ್ಲ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: KL Rahul : ವಿಶ್ವ ಕಪ್ ತಂಡದಲ್ಲಿ ರಾಹುಲ್ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್
ಹೊಸಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಮಾತನಾಡಿ, ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ವಿಜಯನಗರ ಜಿಲ್ಲೆಯ ಶೇಕಡಾವಾರು ಮತದಾನ ಪ್ರಮಾಣವು ಹೆಚ್ಚಳವಾಗಬೇಕು. ಈ ನಿಟ್ಟಿನಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರಿಗೂ ಪ್ರೇರೇಪಣೆಯಾಗಬೇಕು ಎಂದು ಸ್ವೀಪ್ ಕಾರ್ಯಕ್ರಮಗಳನ್ನು ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾ ಅಧಿಕಾರಿ ಜೆ.ಎಂ. ಅನ್ನದಾನಸ್ವಾಮಿ, ಎಲ್ಲರಿಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ, ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಆಟೋ ಚಾಲಕರಿಗೂ ಜಾಗೃತಿ
ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಸಂದರ್ಭದಲ್ಲಿ ಅಲ್ಲಿನ ಆಟೋ ಚಾಲಕರಿಗೂ ಸಹ ಮತದಾನ ಜಾಗೃತಿ ಮೂಡಿಸಲಾಯಿತು.
ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ಅಂದಾಜು ಮೌಲ್ಯಮಾಪನಾ ಅಧಿಕಾರಿ ಪತ್ರಿಬಸಪ್ಪ ಎನ್.ಕೆ., ಅಧೀಕ್ಷಕ ಲೋಕೇಶ್ ಬಾಬು, ಜಿಲ್ಲಾ ಐಇಸಿ ಫಾಜಿಲ್, ತಾಲೂಕು ಐಇಸಿ ನಾಗರಾಜ, ನಗರಸಭೆ ಅಭಿಯಂತರರಾದ ಆರತಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.