Vijayanagara News: ವಿಜಯನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ Vistara News

ವಿಜಯನಗರ

Vijayanagara News: ವಿಜಯನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ

Vijayanagara News: ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತದ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮ ಜರುಗಿತು.

VISTARANEWS.COM


on

Minister Zameer Ahmed Khan received the applications from the public at the Janata Darshan program in Hospete
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಜನತಾ ದರ್ಶನ (Janata Darshan) ಮೂಲಕ ಕೇವಲ ಸಾರ್ವಜನಿಕರ (Publics) ಅಹವಾಲು ಕೇಳುವುದು ಮಾತ್ರವಲ್ಲದೇ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಲ್ಲಿ ಭರವಸೆ ಮೂಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಖ್ಯಮಂತ್ರಿಗಳ ಬಳಿ ಸಲ್ಲಿಸಲು ತೆರಳುತ್ತಿದ್ದರು. ಅದರ ಬದಲಾಗಿ ಜಿಲ್ಲೆಯಲ್ಲೆ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಕೆಲವೊಂದನ್ನು ಸ್ಥಳದಲ್ಲಿಯೇ ಪರಿಹರಿಸಿ, ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನಮೂದಿಸಿ ಮೊಬೈಲ್ ಮೂಲಕ ಅರ್ಜಿದಾರರನ್ನು ಸಂಪರ್ಕಿಸಿ ಪರಿಹಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್ ಬಳಿ ಅರ್ಜಿ ಸಲ್ಲಿಸಿದರೆ ಇನ್ನೂ ಕೆಲವರು ನೇರವಾಗಿ ಉಸ್ತುವಾರಿ ಸಚಿವರನ್ನು, ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿದರು. 1 ಗಂಟೆಗಳ ಕಾಲ ಸ್ವತಃ ಸಚಿವರೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಸಹ ಸ್ಥಳದಲ್ಲೇ ಇದ್ದು ಇದರ ಬಗ್ಗೆ ಮಾಹಿತಿ ಪಡೆದುಕೊಂಡರು.

ವಿವಿಧ ಇಲಾಖೆಯ 20 ಕೌಂಟರ್ ಸ್ಥಾಪನೆ

ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ 20 ಕೌಂಟರ್ ಸ್ಥಾಪಿಸಲಾಗಿತ್ತು, ಇಲಾಖಾವಾರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಲಾ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಕಂದಾಯ ಇಲಾಖೆ ಸೇರಿದಂತೆ ಭೂ ದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು , ಮಜೂರಿ, ಜಿಲ್ಲಾ ನೋಂದಣಿ, ಗ್ರಾಮೀಣಾಭಿವೃದ್ಧಿ , ಗ್ರಾಮೀಣ ಕುಡಿಯುವ ನೀರು ಸರಬರಾಜು, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತು ಪಶುಸಂಗೋಪನೆ, ಅರಣ್ಯ, ಅಬಕಾರಿ, ಗಣಿ ಮತ್ತು ಭೂವಿಜ್ಞಾನ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಎಲ್ಲಾ ನಿಗಮ ಮಂಡಳಿಗಳು, ಶಿಕ್ಷಣ, ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗೃಹ, ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳು, ನೀರಾವರಿ, ನಗರಾಭಿವೃದ್ಧಿ, ಹಂಪಿ ವಿಶ್ವಪಾರಪಂರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ(ಹವಾಮಾ), ಕಾರ್ಮಿಕ, ಪ್ರಾದೇಶಿಕ ಸಾರಿಗೆ ಇಲಾಖೆ(ಆರ್‌ಟಿಒ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಆಯುಷ್ ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಇಲಾಖೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಿ ಕಂಪ್ಯೂಟರ್‌ನಲ್ಲಿ ನಮೂದಿಸಿ ಸ್ವೀಕೃತಿಯನ್ನು ಅರ್ಜಿದಾರರಿಗೆ ನೀಡಲಾಯಿತು.

ಇದನ್ನೂ ಓದಿ: Ganesh Chaturthi: 100 ಫ್ಯಾನ್‌ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್‌ ಕಂಪೆನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಸೇರಿದಂತೆ ಕೆಲ ಪಿಂಚಣಿ ಸೌಲಭ್ಯವನ್ನು ಸ್ಥಳದಲ್ಲಿಯೇ ಇತ್ಯಾರ್ಥ ಮಾಡಿಕೊಡಲಾಯಿತು.

ಸಂಜೆಯವರೆಗೂ ನಡೆದ ಜನತಾ ದರ್ಶನದಲ್ಲಿ ವಿವಿಧ ತಾಲೂಕಿನಿಂದ ಆಗಮಿಸಿದ್ದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್‌ಗಳ ಬಳಿ ತೆರಳಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 154 ಹಾಗೂ ನಗರಸಭೆಗೆ 520 ಅರ್ಜಿಗಳು ಸೇರಿದಂತೆ ಒಟ್ಟು 992 ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ಇದನ್ನೂ ಓದಿ: Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?

ಈ ಸಂದರ್ಭದಲ್ಲಿ ಶಾಸಕರಾದ ಎಚ್.ಆರ್.ಗವಿಯಪ್ಪ, ಡಾ.ಎನ್.ಟಿ.ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ದಿವಾಕರ್‌ ಎಂ.ಎಸ್., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಆರ್‌ಎಫ್‌ಒ ಅರ್ಸಲನ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಾಧಿಕಾರಿ ನೋಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಸೇರಿದಂತೆ ಅಧಿಕಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಳ್ಳಾರಿ

Death News: ರಾಮದುರ್ಗ ಗಂಗಮ್ಮ ನಿಧನ

Death News: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ನಗರದಲ್ಲಿ ರಾಮದುರ್ಗ ಗಂಗಮ್ಮ(98) ಅವರು ವಯೋಸಹಜ ಅನಾರೋಗ್ಯದ ಕಾರಣ ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ‌.

VISTARANEWS.COM


on

Ramadurga Gangamma passed away
ರಾಮದುರ್ಗ ಗಂಗಮ್ಮ ಅವರ ಭಾವಚಿತ್ರ.
Koo

ಬಳ್ಳಾರಿ: ರಾಮದುರ್ಗ ಗಂಗಮ್ಮ(98) ಅವರು ವಯೋಸಹಜ ಅನಾರೋಗ್ಯದ ಕಾರಣ ಶನಿವಾರ ಬೆಳಗಿನ ಜಾವ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ನಗರದಲ್ಲಿ ನಿಧನರಾಗಿದ್ದಾರೆ‌.

ಮೃತರು, ಪುತ್ರರಾದ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರಾಮನಗೌಡ ಮತ್ತು ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಟ್ರಸ್ಟ್ ನ ಕಾರ್ಯದರ್ಶಿ ಆರ್ .ಮರೇಗೌಡ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಹಗರಿಬೊಮ್ಮನಹಳ್ಳಿಯಲ್ಲಿ ಶನಿವಾರ ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Continue Reading

ಉಡುಪಿ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ಮಳೆಯಾಟ; ಇನ್ನೊಂದು ವಾರ ಮೋಡ ಕವಿದ ವಾತಾವರಣ

Rain News : ದಕ್ಷಿಣ ಒಳನಾಡು, ಮಲೆನಾಡಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಟಕ್ಕೆ ಬ್ರೇಕ್‌ (Karnataka Weather Forecast) ಬಿದ್ದಿದೆ. ಎಲ್ಲೆಲ್ಲಿದೆ ಮಳೆ ಅಲರ್ಟ್‌?

VISTARANEWS.COM


on

By

Rain in south interior and malnad Cloudy weather for another week
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆಗ್ನೇಯ ಮತ್ತು ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಘಳಿಗೆಗೊಂದು ವಾತಾವರಣ (Karnataka weather Forecast) ಇರಲಿದೆ. ಒಮ್ಮೊಮ್ಮೆ ಬಿಸಿಲು ಇದ್ದರೆ ಮತ್ತೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಸಮಯ ಸಣ್ಣ ಮಳೆಯೊಂದಿಗೆ ಭಾರಿ ಮಳೆಯಾಗುವ (rain News) ಸಾಧ್ಯತೆ ಇದೆ..

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಲ್ಲಿ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆ ಅಬ್ಬರ ಇರಲಿದೆ.

ಅಲ್ಲಲ್ಲಿ ಮಳೆ

ಉತ್ತರ ಒಳನಾಡಲ್ಲಿ ಸಕ್ರಿಯವಾಗಿದ್ದ ಮಳೆಯು ದುರ್ಬಲಗೊಳ್ಳಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ ವಿಜಯಪುರದ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿಂದು ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 35.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶಿವಮೊಗ್ಗ, ಉಡುಪಿ ಹಾಗೂ ಉತ್ತರ ಕನ್ನಡ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಚಿಕ್ಕಮಗಳೂರು, ಹಾವೇರಿ, ವಿಜಯಪುರ, ದಾವಣಗೆರೆ, ಧಾರವಾಡ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ನಿಂದ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಇದನ್ನೂ ಓದಿ: Mens Winter Fashion: ಚಳಿಗಾಲದ ಮೆನ್ಸ್ ಲೇಯರ್‌ ಲುಕ್‌ಗೆ 3 ಮಿಕ್ಸ್‌ ಮ್ಯಾಚ್‌ ಸ್ಟೈಲಿಂಗ್‌ ರೂಲ್ಸ್

ಹಾಸನ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಜತೆಗೆ ಚಾಮರಾಜನಗರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬೀದರ್ ಮತ್ತು ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 16 ರಿಂದ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 21 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ನಾಳೆಯಿಂದ ಡಿ. 9ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ

Rain News : ಬೆಂಗಳೂರು ಸೇರಿದಂತೆ ಹಲವೆಡೆ ಹಗುರದಿಂದ ಕೂಡಿದ ಮಳೆಯೊಂದಿಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆ ನೀಡಿದೆ.

VISTARANEWS.COM


on

By

Rain Alert
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಮಳೆಯು ಕಣ್ಣಾಮುಚ್ಚಾಲೆ ಆಟವನ್ನಾಡುತ್ತಿದೆ. ಡಿ.1 ರಿಂದ 9ರವರೆಗೆ ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯೊಂದಿಗೆ (Rain news) ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಲಿದೆ.

ಆಗ್ನೇಯ ಮತ್ತು ನೈರುತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ವಾತಾವರಣದಲ್ಲಿ ಬದಲಾವಣೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಡಿ.1 ರಿಂದ 5ರವರೆಗೆ ಸಾಧಾರಣ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮೊದಲೆರಡು ದಿನ ಮಳೆ ಸಾಧ್ಯತೆ ಇದ್ದರೆ, ನಂತರ ಒಣಹವೆ ಮುಂದುವರಿಯಲಿದೆ.

ಉತ್ತರ ಒಳನಾಡಲ್ಲಿ ಸಕ್ರಿಯವಾಗಿದ್ದ ಮಳೆಯು ಮುಂದಿನ ವಾರ ದುರ್ಬಲಗೊಳ್ಳಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ ವಿಜಯಪುರದ ಅಲ್ಲಲ್ಲಿ ತಕ್ಕ ಮಟ್ಟಿಗೆ ಮಳೆ ಸಾಧ್ಯತೆ ಇದೆ. ಉಳಿದಂತೆ ಗದಗ, ಕೊಪ್ಪಳದಲ್ಲಿ ಒಣಹವೆ ಇರಲಿದೆ.

ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಭರ್ಜರಿ ಮಳೆ

ದಕ್ಷಿಣ ಒಳನಾಡಲ್ಲಿ ಡಿ.1 ಹಾಗೂ 2ರಂದು ವ್ಯಾಪಕ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆ ಅಬ್ಬರ ಇರಲಿದೆ.

ಇದನ್ನೂ ಓದಿ: Jeera Water Benefits: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದು ಎಷ್ಟು ಒಳ್ಳೆಯದು ಗೊತ್ತೇ?

ಹುಕ್ಕೇರಿಯಲ್ಲಿ ಅಧಿಕ ಮಳೆ

ಗುರುವಾರ ರಾಜ್ಯದ ವಿವಿಧೆಡೆ ಮಳೆಯಾಗಿರುವ ವರದಿ ಆಗಿದ್ದು, ಬೆಳಗಾವಿಯ ಹುಕ್ಕೇರಿಯಲ್ಲಿ 7 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಉಳಿದಂತೆ ಚಿಕ್ಕೋಡಿಯಲ್ಲಿ 5 ಸೆಂ.ಮೀ, ಸೇಡಬಾಳ, ಬೈಲಹೊಂಗಲ, ಹಿಡಕಲ್ ಅಣೆಕಟ್ಟಲ್ಲಿ 4 ಸೆಂ.ಮೀ, ರಾಯ್‌ಭಾಗ, ಶೃಂಗೇರಿಯಲ್ಲಿ 3, ಗೋಕಾಕ್‌, ಸಂಕೇಶ್ವರ್‌ನಲ್ಲಿ 2 ಸೆಂ.ಮೀ, ರಾಯಲ್‌ಪಡು, ಚಿಕ್ಕಬಳ್ಳಾಪುರ, ಜಯಪುರ, ಕಮ್ಮರ್ಡಿಯಲ್ಲಿ 1 ಸೆಂ,ಮೀ ಮಳೆಯಾಗಿದೆ. ಚಿಕ್ಕನಹಳ್ಳಿಯಲ್ಲಿ ಕನಿಷ್ಠ ಉಷ್ಣಾಂಶ 17.0 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ಇಂದು – ನಾಳೆ ಭಾರಿ ಮಳೆ ಮುನ್ಸೂಚನೆ; ಹಾಗೇ ತಾಪಮಾನದಲ್ಲೂ ಏರಿಕೆ!

Karnataka Weather : ಬೆಳಗ್ಗೆ ವೇಳೆಗೆ ಬಿಸಿಲಿನ ತಾಪವೂ ತಟ್ಟಲಿದೆ. ಅದೇ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

VISTARANEWS.COM


on

Girl in Rain with Umbrella
Koo

ಬೆಂಗಳೂರು: ರಾಜ್ಯದ ಕೆಲವು ಕಡೆ ಶುಕ್ರವಾರ ಮತ್ತು ಶನಿವಾರ (ಡಿ. 1 ಮತ್ತು 2) ದಿನ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Report) ಉಲ್ಲೇಖಿಸಿದೆ. ಆದರೆ, ಇದೇ ವೇಳೆ ಒಳನಾಡು ಪ್ರದೇಶ ಸಹಿತ ಕರಾವಳಿ ಭಾಗಗಳಲ್ಲಿ ಉಷ್ಣಾಂಶದಲ್ಲಿಯೂ ಹೆಚ್ಚಳವಾಗುವ ಬಗ್ಗೆ ಅಂದಾಜಿಸಲಾಗಿದೆ. ಅಂದರೆ, ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಳವಾಗಲಿದ್ದು, 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ ವರೆಗೆ ಉತ್ತರ ಒಳನಾಡು (North Inland), ದಕ್ಷಿಣ ಒಳನಾಡು (South Inland) ಹಾಗೂ ಕರಾವಳಿಯ (coastal regions) ಕೆಲವು ಕಡೆಗಳಲ್ಲಿ ಏರಿಕೆ ಕಾಣಲಿದೆ. ಹೀಗಾಗಿ ಬೆಳಗ್ಗೆ ವೇಳೆಗೆ ಬಿಸಿಲಿನ ತಾಪವೂ ತಟ್ಟಲಿದೆ. ಅದೇ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ (Rain News) ಎಂದು ಅಂದಾಜಿಸಲಾಗಿದೆ. ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ರಾತ್ರಿ ವೇಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಚಳಿಯ ವಾತಾವರಣವೂ ಇರಲಿದೆ ಎಂದು ಹೇಳಲಾಗಿದೆ. ಅಂದರೆ, ಅಲ್ಲಿ ತಾಪಮಾನದಲ್ಲಿ ಸಾಮಾನ್ಯಕ್ಕಿಂತ -1.5 ಡಿಗ್ರಿ ಸೆಲ್ಸಿಯಸ್‌ನಿಂದ 1.5 ಡಿಗ್ರಿ ಸೆಲ್ಸಿಯಸ್‌ ವರೆಗೆ ಇಳಿಕೆ ಕಾಣಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಉತ್ತರ ಒಳನಾಡಿನ ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಗದಗ, ವಿಜಯನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಸಾಮಾನ್ಯವಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಮೈಸೂರು, ದಾವಣಗೆರೆಯಲ್ಲಿ ಮಳೆ ತೀವ್ರ

ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆಯಲ್ಲಿ ವ್ಯಾಪಕ ಮಳೆಯಾಗಲಿದ್ದರೆ, ಉಳಿದ ಕಡೆ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅಬ್ಬರ?

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕೊಡಗು ಜಿಲ್ಲೆಯ ಬಹುತೇಕ ಕಡೆ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಬೆಂಗಳೂರಲ್ಲಿ ಬೆಳಗಿನ ಜಾವ ಮಂಜಿನ ಹವಾ!

ಬೆಂಗಳೂರಿನಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಹೆಚ್ಚಾಗಿ ಕಂಡು ಬರಲಿದೆ. ಮಧ್ಯಾಹ್ನದ ನಂತರ ಅಲ್ಲಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಜಿಟಿ ಜಿಟಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Laksha Deepotsava : ಡಿ. 8ರಿಂದ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ; ಈ ಜಿಲ್ಲೆಗಳಿಂದ KSRTC ವಿಶೇಷ ಬಸ್‌

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 34 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 19 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

Continue Reading
Advertisement
Crime Sense Murder Case
ಕರ್ನಾಟಕ11 mins ago

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

election five states
ದೇಶ17 mins ago

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

Police call off protest FIR against lawyer who slapped police
ಕರ್ನಾಟಕ30 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ33 mins ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Bobby Deol cries after paparazzi praise him as Animal
ಬಾಲಿವುಡ್35 mins ago

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

R Ashok
ಕರ್ನಾಟಕ49 mins ago

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Snehit Gowda and Namratha Gowda
ಬಿಗ್ ಬಾಸ್1 hour ago

BBK SEASON 10: ನಮ್ರತಾ ಮೇಲೆ ಸ್ಟ್ರಾಂಗ್​ ಫೀಲಿಂಗ್ಸ್ ಇದೆ ಎಂದ ಸ್ನೇಹಿತ್‌!

Narendra Modi
ದೇಶ1 hour ago

Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

DK Shivakumar Telangana congress
ಕರ್ನಾಟಕ1 hour ago

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್

MLA T.B.Jayachandra spoke at the inauguration program of the new Para Medical College at Shira
ತುಮಕೂರು2 hours ago

Tumkur News: ಪ್ಯಾರಾ ಮೆಡಿಕಲ್ ಓದಿದವರಿಗೆ ವಿಫುಲ ಅವಕಾಶ: ಶಾಸಕ ಟಿ.ಬಿ.ಜಯಚಂದ್ರ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ30 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ7 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ19 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌