Site icon Vistara News

Vijayanagara News: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ಮುಖ್ಯ: ಶಾಸಕ ಡಾ.ಎನ್.ಟಿ.ಶ್ರೀನಿವಾಸ್

MLA Dr NT Srinivas drives for taluk level sports event at Kudligi

ಕೂಡ್ಲಿಗಿ: ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳು (Extracurricular activities) ವಿದ್ಯಾರ್ಥಿಗಳಿಗೆ (Students) ಬಹಳ ಮುಖ್ಯ ಎಂದು ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾ ಜ್ಯೋತಿ ಬೆಳಗಿಸಿ, ಚಾಲನೆ ನೀಡಿ ಅವರು ಮಾತನಾಡಿದರು.

ಸದೃಢ ದೇಹದಲ್ಲಿ ಮಾತ್ರ ಸದೃಢ ಮನಸ್ಸು ಇರಲು ಸಾಧ್ಯ, ಆ ಕಾರಣಕ್ಕೆ ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಓದಿನ ಜತೆ ಕ್ರೀಡೆಗೂ ಅಷ್ಟೇ ಮಹತ್ವವನ್ನು ನೀಡಬೇಕು. ಕ್ರೀಡಾ ಚಟುವಟಿಕೆಯಿಂದ ದೇಹದ ಜತೆ ಮನಸ್ಸು ಕೂಡ ಗಟ್ಟಿಗೊಳ್ಳವುದು ಇದರಿಂದ ನೀವು ಓದಿದ ಪಾಠವು ಏಕಾಗ್ರತೆಯಿಂದ ಅರ್ಥ ಮಾಡಿಕೊಳ್ಳಲು ಸಹಕಾರಿಯಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: HSRP Number Plate: ಹಳೇ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ ಪಡೆಯೋದು ಹೇಗೆ? ಅಳವಡಿಸದಿದ್ರೆ ಭಾರಿ ದಂಡ!

ಪ್ರಸ್ತುತ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ನಮ್ಮ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಸೋಲು,ಗೆಲುವುಗಳನ್ನು ವಿದ್ಯಾರ್ಥಿಗಳು ಲೆಕ್ಕಹಾಕದೆ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಮನೋಭಾವ ಮೆರೆಯಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Koppala News: ಸಂವಿಧಾನ ಕೇವಲ ವಾಚನಕ್ಕೆ ಸೀಮಿತವಾಗಬಾರದು: ಶಾಸಕ ಜಿ. ಜನಾರ್ದನ ರೆಡ್ಡಿ

ಈ ಸಂದರ್ಭದಲ್ಲಿ ತಹಸೀಲ್ದಾರ್ ಟಿ.ಜಗದೀಶ್, ತಾಪಂ ಇಒ ವೈ. ರವಿಕುಮಾರ್, ಬಿಇಒ ಪದ್ಮನಾಭ ಕರ್ಣಂ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ತಾಲೂಕು ದೈಹಿಕ ಪರಿವೀಕ್ಷಕ ಬಿ.ಮಂಜುನಾಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಬಿ.ಶಿವಾನಂದ, ಟಿ.ಎಚ್.ಎಂ. ಶೇಖರಯ್ಯ, ಚೆನ್ನಬಸವಣ್ಣ, ದೈಹಿಕ ಶಿಕ್ಷಣ ಶಿಕ್ಷಕರು, ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.

Exit mobile version