ವಿಜಯನಗರ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಕೋಟ್ಯಂತರ (Vijaynagara) ರೂ. ಅಕ್ರಮ ಹಣ, ಡ್ರಗ್ಸ್ ಅನ್ನು ಜಪ್ತಿ ಮಾಡಿರುವ ಜಿಲ್ಲಾಡಳಿತ ಮತ್ತಷ್ಟು ಅಲರ್ಟ್ ಆಗಿದೆ.
ಚೆಕ್ ಪೋಸ್ಟ್ ಗಳ ಸಂಖ್ಯೆಯನ್ನು 20ರಿಂದ 23ಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಏರಿಸಿದೆ. ದಿನ ನಿತ್ಯ ಚೆಕ್ ಪೋಸ್ಟ್ ಗಳ ಮೇಲೆ ನಿಗಾ ವಹಿಸಲಾಗಿದೆ.
ಖುದ್ದು ವಿಜಯನಗರ ಡಿಸಿ ನಾನಾ ಕಡೆ ಚೆಕ್ ಪೋಸ್ಟ್ ಗಳ ಕಡೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಟ್ಟುನಿಟ್ಟಿನ ತಪಾಸಣೆಯನ್ನು ವಿಜಯನಗರ ಪೊಲೀಸರು ನಡೆಸುತ್ತಿದ್ದಾರೆ.
ವಿಜಯನಗರ ಜಿಲ್ಲೆಗೆ ಎಂಟ್ರಿಯಾಗುವ ಗಡಿಭಾಗದ ಜಿಲ್ಲೆಗಳಾದ ಬಳ್ಳಾರಿ, ದಾವಣಗೆರೆ, ಕೊಪ್ಪಳ, ಹಾವೇರಿ ಜಿಲ್ಲೆಗಳಿಂದ ವಾಹನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಿಜಯನಗರ ಜಿಲ್ಲಾಡಳಿತ ಕೈಗೊಂಡಿದೆ.
ರಾಯಚೂರು ವರದಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9 ಲಕ್ಷ ರೂ. ಹಣವನ್ನು ರಾಯಚೂರಿನಲ್ಲಿ ಜಪ್ತಿ ಮಾಡಲಾಗಿದೆ. ಸಿಂಧನೂರು ತಾಲ್ಲೂಕಿನ ಶಾಂತಿನಗರದ ಚೆಕ್ ಪೋಸ್ಟ್‌ನಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಚುನಾವಣಾ ಅಧಿಕಾರಿಗಳ ತಂಡದಿಂದ ತಪಾಸಣೆ ವೇಳೆ ಹಣ ಪತ್ತೆಯಾಗಿದೆ. ಬೊಲೆರೋ ವಾಹನದಲ್ಲಿ ಹಣ ಸಾಗಿಸಲಾಗುತ್ತಿತ್ತು.