Site icon Vistara News

Road Accident : ಅತಿಥಿ ಶಿಕ್ಷಕನ ಪ್ರಾಣ ತೆಗೆದ ಲಾರಿ!

Lorry collides with bike Death of guest teacher

ವಿಜಯನಗರ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ (Road Accident) ಪರಿಣಾಮ ಅತಿಥಿ ಶಿಕ್ಷಕರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯನಗರದ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲಕನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಿರಂಜೀವಿ ಮಾಳಗಿ (28) ಮೃತ ದುರ್ದೈವಿ.

ಚಿರಂಜೀವಿ ಮಗಿಮಾವಿನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಾಲ್ಮೀಕಿ ಜಯಂತಿ ಹಿನ್ನೆಲೆ ಶಾಲೆಯಲ್ಲಿ ಕಾರ್ಯಕ್ರಮ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿಯು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಚಿರಂಜೀವಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಇತ್ತ ಅಪಘಾತ ಆಗುತ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ಹಗರಿಬೊಮ್ಮನಹಳ್ಳಿ ಪಟ್ಟಣ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Killer BMTC : ಪತ್ನಿ ಸೀಮಂತಕ್ಕೆ ಹೂ ತರಲು ಹೋದವನ ಬಲಿ ಪಡೆದ ಬಿಎಂಟಿಸಿ!

ಬೈಕ್‌ಗಳ ನಡುವೆ ಡಿಕ್ಕಿ; ಬಿಎಸ್‌ಎಫ್‌ ಉದ್ಯೋಗಿ, ಯೂಟ್ಯೂಬರ್‌ ಸಾವು!

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳಲು ಬೈಕ್‌ ತೆಗೆಯುವಾಗ ಮತ್ತೊಂದು ರಾಯಲ್‌ ಎನ್ಫೀಲ್ಡ್‌ ಬೈಕ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ (Road Accident) ಇಬ್ಬರು ಸವಾರರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಧಾಕರ್ ಮತ್ತು ಗಣಿ ಎಂಬ ಸವಾರರು ಮೃತ ಪಟ್ಟಿದ್ದಾರೆ.

ಸುಧಾಕರ್ ಬಿಎಸ್‌ಎಫ್ ಉದ್ಯೋಗಿಯಾಗಿದ್ದರೆ, ಗಣಿ ಯೂಟ್ಯೂಬರ್ ಆಗಿದ್ದರು. ಸುಧಾಕರ್‌ ಕೆಲಸ ಮುಗಿಸಿ ಬಿಎಸ್ಎಫ್ ಕಾಂಪೌಂಡ್‌ನಿಂದ ಹೊರಗೆ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸುಧಾಕರ್‌ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಾಳು ಗಣಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.

ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌!

ಬೆಂಗಳೂರು: ಬಿಎಂಟಿಸಿ ಬಸ್‌ (Killer BMTC) ಹರಿದು ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ (Road Accident) ನಡೆದಿದೆ. ವೀಣಾ ಬಿಎಂಟಿಸಿ ಬಸ್‌ಗೆ ಬಲಿಯಾದ ಮಹಿಳೆ.

ವೀಣಾ ಅವರು ರಸ್ತೆ ದಾಟುವಾಗ ವೇಗವಾಗಿ ಬಂದ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಹುಳಿಮಾವು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version