ವಿಜಯನಗರ: ಬೈಕ್ ಹಾಗೂ ಶಾಲಾ ವಾಹನದ ಮಧ್ಯೆ ಅಪಘಾತ (Road Accident) ಸಂಭವಿಸಿದ್ದು, ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಸರ್ಕಾರಿ ಶಾಲೆಯ ಹಿಂದಿ ಶಿಕ್ಷಕ ಮುನಿಯಪ್ಪ (55) ಮೃತ ದುರ್ದೈವಿ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಮುನಿಯಪ್ಪನವರು ಅಮ್ಮನಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದರು. ಮೂಲತಃ ಹರಪನಹಳ್ಳಿ ತಾಲೂಕಿನ ಉಂಚಳ್ಳಿ ಗ್ರಾಮದವದ ಮುನಿಯಪ್ಪ ಅವರು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಕೊಠಡಿ ನಿರೀಕ್ಷಕರಾಗಿ ಕರ್ಥವ್ಯಕ್ಕೆ ನಿಯೋಜನೆ ಆಗಿದ್ದರು.
ಕೂಡ್ಲಿಗಿ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಖಾಸಗಿ ಶಾಲಾ ವಾಹನ ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ಮುನಿಯಪ್ಪ ಸ್ಥಳದಲ್ಲೇ ರಕ್ತಕಾರಿ ಮೃತಪಟ್ಟಿದ್ದಾರೆ. ಕೊಟ್ಟೂರು ತಾಲೂಕಿನಲ್ಲಿ ಕುಟುಂಬ ಸಮೇತ ವಾಸವಾಗಿದ್ದ ಶಿಕ್ಷಕ ಮುನಿಯಪ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು
ಕೋಲಾರದಲ್ಲಿ ಕಾಡಾನೆ ದಾಳಿಗೆ ವೃದ್ಧೆ ಸಾವು
ಕೋಲಾರದ ಗಡಿಯಲ್ಲಿ ಕಾಡಾನೆ ದಾಳಿಯಲ್ಲಿ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುರಿ ಮೇಯಿಸಲು ಹೋದಾಗ ಒಂಟಿ ಸಲಗವೊಂದುಉ ದಾಳಿ ಮಾಡಿತ್ತು. ನಿನ್ನೆ ಭಾನುವಾರ ಸಂಜೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚತ್ತಗುಟ್ಟಹಳ್ಳಿ ಗ್ರಾಮದ ಬಳಿ ಸಲಗ ದಾಳಿ ಮಾಡಿದೆ.
ಚತ್ತಗುಟ್ಟಹಳ್ಳಿಯ 70 ವರ್ಷದ ವೃದ್ಧೆ ರಾಧಮ್ಮ ಮೃತ ದುರ್ದೈವಿ. ರಾಧಮ್ಮ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿತ್ತು. ಗಾಯಾಳು ರಾಧಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಾಲಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ