Site icon Vistara News

Road Accident | ರಸ್ತೆ ಅಪಘಾತದಲ್ಲಿ ಪತ್ರಕರ್ತ ಸಾವು

ವಿಜಯನಗರ: ಇಲ್ಲಿನ ಹೊಸಪೇಟೆ ತಾಲೂಕಿನ ಮಲಪನಗುಡಿ ಬಳಿ ರಸ್ತೆ ಅಪಘಾತವೊಂದರಲ್ಲಿ ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಬಸವರಾಜ್ (Road Accident) ಮೃತಪಟ್ಟಿದ್ದಾರೆ. ಸ್ನೇಹಿತ ಭಾಸ್ಕರ್ ಎಂಬುವವರ ಜತೆ ಹಂಪಿ ಸಮೀಪದ ಕಮಲಾಪುರಗೆ ಬೈಕ್‌ನಲ್ಲಿ ಹೊರಟಿದ್ದರು.

ಈ ವೇಳೆ ಬೈಕ್ ಸ್ಕಿಡ್ ಆಗಿ ಬಸವರಾಜ ಕೆಳಗೆ ಬಿದ್ದರು. ತಲೆಗೆ ತೀವ್ರ ಪೆಟ್ಟಾಗಿದ್ದ ಅವರನ್ನು ಹೊಸಪೇಟೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಪರಿಸ್ಥಿತಿ ಗಂಭೀರ ಆಗಿದ್ದರಿಂದ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಗುರುವಾರ ಮಧ್ಯಾಹ್ನ ಬಸವರಾಜ್ ಕೊನೆಯುಸಿರೆಳೆದಿದ್ದಾರೆ. ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಬಳ್ಳಾರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಬಸವರಾಜ್ ನಿಧನಕ್ಕೆ ಬಳ್ಳಾರಿ-ವಿಜಯನಗರ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

ಬಸವರಾಜ್ ಸ್ನೇಹಿತ ಭಾಸ್ಕರ್‌ ಗಾಯಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ | Missing Case | ಚಂದ್ರಶೇಖರ್‌ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌; ತುಂಗಾ ಮೇಲ್ದಂಡೆ ನಾಲೆಗೆ ಬಿದ್ದ ಕಾರು?

Exit mobile version