ವಿಜಯನಗರ: ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯಲ್ಲಿ ವಿಷ ಸೇವಿಸಿ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಿರಿಯ ಅಧಿಕಾರಿಗಳ ಕಿರುಕುಳದಿಂದಲೇ ಮುಖ್ಯಪೇದೆ ಆತ್ಮಹತ್ಯೆ (Suicide Attempt) ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೃಷ್ಣಪ್ಪ ಆತ್ಮಹತ್ಯೆಗೆ ಯತ್ನಿಸಿದ ಹೆಡ್ ಕಾನ್‌ಸ್ಟೆಬಲ್. ಇವರು ಕಳೆದ ಮೂರು ವರ್ಷದಿಂದ ಹಿರೇಹಡಗಲಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗುರುವಾರ ರಾತ್ರಿ ಪಾಳಿ ಕೆಲಸ ಮುಗಿಸಿ ಶುಕ್ರವಾರ ಬೆಳಗಿನ ಜಾವ ಮನೆಗೆ ಹೋಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸಂಬಂಧಿಕರು ಕೃಷ್ಣಪ್ಪರನ್ನು ಹೂವಿನಹಡಗಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿದ್ದಾರೆ.
ಕೃಷ್ಣಪ್ಪ, ಹಿರೇಹಡಗಲಿ ಠಾಣೆಯಿಂದ ಕೂಡ್ಲಿಗಿ ತಾಲೂಕಿನ ಹೊಸಳ್ಳಿ ಠಾಣೆಗೆ ವರ್ಗಾವಣೆ ಬಯಸಿದ್ದರು. ಹಿರಿಯ ಅಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಸದ್ಯ ಗದಗ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸ್ ಪೇದೆ ಕೃಷ್ಣಪ್ಪಗೆ ಚಿಕಿತ್ಸೆ ಮುಂದುವರಿದಿದೆ.
ಇದನ್ನೂ ಓದಿ | Brutally Assaulted | ಗಾಂಜಾ ಮತ್ತಿನಲ್ಲಿದ್ದ ಕಿರಾತಕರಿಂದ ಪೊಲೀಸ್ ಸಿಬ್ಬಂದಿ ಮೇಲೆಯೇ ದಾಳಿ