ವಿಜಯನಗರ : ಮಲಗಿದ್ದಲೇ ಅಣ್ಣ-ತಂಗಿ ಅನುಮಾನಾಸ್ಪದವಾಗಿ (Suspicious Death) ಸಾವಿಗೀಡಾಗಿದ್ದು, ಆಸ್ತಿಗಾಗಿ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಕೋಟ್ರೇಶ್ (32) ಹಾಗೂ ಕಾವ್ಯಾ (28) ಮೃತ ದುರ್ದೈವಿಗಳು.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಅಕ್ಕ-ಪಕ್ಕ ಮಲಗಿದ್ದ ಇವರಿಬ್ಬರು ಮೃತಪಟ್ಟಿದ್ದು ಹೇಗೆ ಎಂಬುದೇ ನಿಗೂಢ. ಮನೆಗೆ ಬೇರೆ ಯಾರಾದರೂ ಬಂದು ಹೋಗಿದ್ದರಾ? ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆ ಸಂಬಂಧ ಭಾನುವಾರ ಬೆಳಗ್ಗೆ ಮೃತ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸ್ಥಳಕ್ಕೆ ಚಿಗಟೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಸ್ತಿಗಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಜಯನಗರ ಎಸ್‌ಪಿ ಹರಿಬಾಬು ಭೇಟಿ ನೀಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ