ವಿಜಯನಗರ: ವಿಷ ಸೇವಿಸಿ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಗರಿ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ ಗ್ರಾಮದ ಬಿ.ಆರ್. ಕೊಟ್ರಗೌಡ ಮೃತ ಶಿಕ್ಷಕ. ಸಾಲದ ಬಾಧೆ ತಾಳಲಾರದೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ತಾಂಡದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಅವರು ಪಟ್ಟಣದ ಹೊರವಲಯದ ಕೆಚ್ಚಿನಬಂಡಿ ರಸ್ತೆಯ ಬದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಕೆಳಗೆ, ಮೇ 31ರಂದು ಅವರು ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದರು. ನಿವೃತ್ತಿ ಬಳಿಕ ಪಟ್ಟಣದ ರಾಮನಗರದಲ್ಲಿ ವಾಸವಾಗಿದ್ದರು. ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ʼಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ, ನನ್ನ ಸಂಸಾರ ಭಗವಂತ ಕಾಪಾಡಲಿʼ ಎಂದು ಬರೆದಿಟ್ಟಿದ್ದಾರೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Illicit relationship | ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಐಬಿಎಂ ಉದ್ಯೋಗಿ ಆತ್ಮಹತ್ಯೆ