ಹೊಸಪೇಟೆ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ (B.Z. Zameer Ahmed Khan) ಅವರು ಸೆ.25ರಂದು ಸೋಮವಾರದಿಂದ ಜಿಲ್ಲಾ ಪ್ರವಾಸ (District Tour) ಕೈಗೊಳ್ಳಲಿದ್ದಾರೆ.
ಸೆ.24ರ ಭಾನುವಾರ ಸಂಜೆ ಜಿಲ್ಲಾ ಕೇಂದ್ರ ಹೊಸಪೇಟೆಗೆ ಆಗಮಿಸಿ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ.25 ರ ಸೋಮವಾರ ಬೆಳಿಗ್ಗೆ 10.30ಕ್ಕೆ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ 2.30 ಕ್ಕೆ ಗಣಿ ಭಾದಿತ ಪ್ರದೇಶ – ಕ್ಯಾಂಪ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣಿ ಬಾಧಿತ ಪ್ರದೇಶಗಳ ಸಮಸ್ಯೆ ಕುರಿತು ಗಣಿ ಮಾಲೀಕರು ಹಾಗೂ ಅಧಿಕಾರಿಗಳ ಜತೆ ಸಭೆಯನ್ನು ನಡೆಸಲಿದ್ದಾರೆ.
ಇದನ್ನೂ ಓದಿ: Weather report : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ತಗ್ಗದ ಅಬ್ಬರ
ಸೆ.26 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜಿಲ್ಲೆಯ ಗಣಿ ಭಾದಿತ ಪ್ರದೇಶ-ಕ್ಯಾಂಪ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ, ಗಣಿ ಬಾಧಿತ ಪ್ರದೇಶಗಳಿಗೆ ಸಂಬಂಧಿಸಿದ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ನಂತರ ಹೊಸಪೇಟೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ: Power Generation: ರಾಜ್ಯದ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಕುಸಿದಿರುವುದು ಏಕೆ: ಅಧಿಕಾರಿಗಳಿಗೆ ಸಿಎಂ ಪ್ರಶ್ನೆ
ಸೆ.27 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೆಡಿಪಿ ಸಭೆಯನ್ನು ನಡೆಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ ತೋರಣಗಲ್ ವಿಮಾನ ನಿಲ್ದಾಣದಿಂದ ಕೇಂದ್ರ ಸ್ಥಾನಕ್ಕೆ ತೆರಳಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.