ಕೊಟ್ಟೂರು: ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ವಿಭಾಗದಿಂದ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು (Annual sports) ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದರಾಮ ಕಲ್ಮಠ, ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಕ್ರೀಡಾಪಟುಗಳಿಗೆ ತಾಳ್ಮೆ ಬಹು ಮುಖ್ಯವಾದದ್ದು ಎಂದ ಅವರು, ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Minimum Wages: ಗ್ರಾಪಂ ಗ್ರಂಥಪಾಲಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮಹೇಶ್ವರ ಮೂರ್ತಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎಂ. ರವಿಕುಮಾರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಕೆ.ಬಿ. ಮಲ್ಲಿಕಾರ್ಜುನ್, ಕೋರಿ ಬಸವರಾಜ್ ಮತ್ತು ಅಡಿಕೆ ಮಂಜುನಾಥ್ ಸೇರಿದಂತೆ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Viral Video : ಕಾರಿನ ಮೇಲೆ ಸ್ಟಂಟ್ ಮಾಡಿದವನಿಗೆ ಬಿತ್ತು ಭಾರೀ ದಂಡ!
ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ರಹಿಂಬಿ ಪ್ರಾರ್ಥಿಸಿದರು. ಕು. ವಿದ್ಯಾ ಮತ್ತು ಭವಾನಿ ಕಾರ್ಯಕ್ರಮ ನಿರ್ವಹಿಸಿದರು. ಪೃಥ್ವಿರಾಜ್ ಬೆಂಡರಿಗೆ ವಂದಿಸಿದರು.