ಕೂಡ್ಲಿಗಿ: ತಾಲೂಕಿನ ಗುಡೆಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಮದಲ್ಲಿರುವ ಗೋಶಾಲೆಗೆ ವಿಜಯನಗರ ಉಪವಿಭಾಗಾಧಿಕಾರಿ ನೊಂಗ್ಡಾಯ್ ಮಹಮ್ಮದ್ ಅಲಿ ಅಕ್ರಂ ಷಾ ಭೇಟಿ ನೀಡಿ, ಪರಿಶೀಲನೆ (Vijayanagara News) ನಡೆಸಿದರು.
ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್ ಟಿಕೆಟ್ ಪಡೆಯುವುದು ಹೇಗೆ?
ಗಂಡಬೊಮ್ಮನಹಳ್ಳಿಯಲ್ಲಿ ಈಗಾಗಲೆ ಮೇವು ಬ್ಯಾಂಕ್ ಸ್ಥಾಪಿಸಲಾಗಿದ್ದು, ಜಾನುವಾರುಗಳಿಗೆ ಅಗತ್ಯವಿರುವ ಮೇವು ದಾಸ್ತಾನು ಮಾಡಲಾಗಿದೆ. ಗೋಶಾಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು, ನೀರು, ನೆರಳಿನ ವ್ಯವಸ್ಥೆಯನ್ನು ಕೈಗೊಂಡಿರುವ ಕುರಿತು ಅವರು ಪರಿಶೀಲನೆ ನಡೆಸಿದರು.
ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದ ಅವರು, ಗೋಶಾಲೆಗೆ ಅವಶ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಉಪವಿಭಾಗಾಧಿಕಾರಿ ನೊಂಗ್ಡಾಯ್ ಮಹಮ್ಮದ್ ಅಲಿ ಅಕ್ರಂ ಷಾ ತಿಳಿಸಿದರು.
ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ
ಈ ಸಂದರ್ಭದಲ್ಲಿ ತಹಸೀಲ್ದಾರ್ ರಾಜು ಪಿರಂಗಿ, ತಾಪಂ ಇಒ ವೈ. ರವಿಕುಮಾರ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಲೋಹಿತ್ ಕುಮಾರ್, ಉಪ ತಹಸೀಲ್ದಾರ್ ಕೊಟ್ರಮ್ಮ, ಕಂದಾಯ ನಿರೀಕ್ಷಕ ಚೌಡಪ್ಪ, ಸಿಬ್ಬಂದಿಗಳಾದ ಯಶ್ವಂತ್, ವೀರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.