Site icon Vistara News

Vijayanagara News: ಕ್ಷಯಮುಕ್ತ ವಿಜಯನಗರ ಜಿಲ್ಲೆಗೆ ಎಲ್ಲರೂ ಕೈ ಜೋಡಿಸಿ: ದೊಡ್ಡಮನಿ

Active Tuberculosis Detection Movement Programme in Hosapete

ಹೊಸಪೇಟೆ: ವಿಜಯನಗರ ಜಿಲ್ಲೆಯನ್ನು (Vijayanagara District) ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವಂತೆ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ದೊಡ್ಡಮನಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನ ಇಲಾಖೆ ಹಾಗೂ ಹೊಸಪೇಟೆ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಹಯೋಗದಲ್ಲಿ ಶುಕ್ರವಾರ ಎಂ.ಜೆ ನಗರದಲ್ಲಿ ನಡೆದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂಬರುವ 2025 ರೊಳಗೆ ಕ್ಷಯ ಮುಕ್ತ ಭಾರತ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಈ ಹಿನ್ನಲೆಯಲ್ಲಿ ನ.15 ರಿಂದ ಡಿಸೆಂಬರ್ 2ರ ವರೆಗೆ ಕ್ಷಯಮುಕ್ತ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರ ಜತೆಗೆ ವಿಜಯನಗರ ಜಿಲ್ಲೆಯನ್ನು ಕ್ಷಯಮುಕ್ತವನ್ನಾಗಿಸಲು ಎಲ್ಲರೂ ಸ್ವಯಂಸೇವಕರಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: Vijayanagara News: ಕೋಗಳಿ ಗ್ರಾಮದಲ್ಲಿ ಸುಗಮ ಸಂಗೀತ ಕಾರ್ಯಕ್ರಮ

ಕ್ಷಯರೋಗ ಮೇಲ್ವಿಚಾರಕ ಕಾಸಿಂ ಸಾಬ್ ಮಾತನಾಡಿ, ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಸಂಜೆ ವೇಳೆಯಲ್ಲಿ ಜ್ವರ ಬರುವುದು, ದೇಹದಲ್ಲಿ ತೂಕ ಕಡಿಮೆ ಆಗವುದು, ಕಫದಲ್ಲಿ ರಕ್ತ ಬೀಳುವುದು, ಹಸಿವು ಆಗದೆ ಇರುವುದು, ಹಾಗೂ ಸಕ್ಕರೆ ಕಾಯಿಲೆ, ಮದ್ಯ ವ್ಯಸನಿಗಳಲ್ಲಿ ಕ್ಷಯರೋಗದ ಲಕ್ಷಣಗಳು ಹೆಚ್ಚಾಗಿ ಕಂಡು ಬರುತ್ತದೆ. ಇಂತಹ ಲಕ್ಷಣಗಳು ಕಂಡು ಬಂದರೆ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಸಮೀಕ್ಷೆಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಮೆನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Viral Video: ಈ ಮಗುವಿಗೆ ಜೀವಂತ ಹಾವೇ ಆಟದ ಗೊಂಬೆ; ನೆಟ್ಟಿಗರು ಶಾಕ್‌

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಶೃತಿ, ಆಶಾ, ಪದ್ಮಾವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version