Site icon Vistara News

Vijayanagara News: ಮರಿಯಮ್ಮನಹಳ್ಳಿಯಲ್ಲಿ ಜೋಡಿ ರಥೋತ್ಸವಕ್ಕೆ ಸಿದ್ಧತೆ

All preparations for Jodi Rathotsava in Mariammanahalli says DC MS Diwakar

ಹೊಸಪೇಟೆ: ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಜೋಡಿ ರಥೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ (Vijayanagara News) ಸೂಚನೆ ನೀಡಿದರು.

ಏ. 17 ರಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ವತಿಯಿಂದ ನಡೆಯುವ ಮರಿಯಮ್ಮನಹಳ್ಳಿ ಪಟ್ಟಣದ ಜೋಡಿ ರಥೋತ್ಸವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಥೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಲಿದ್ದು, ದಿನೇ ದಿನೇ ಬಿಸಿಲು ಹೆಚ್ಚುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಬೇಕು. ಜನರಿಗೆ ಕುಡಿಯುವ ನೀರಿಗೆ ಅನುಕೂಲತೆ ಕಲ್ಪಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಅಕ್ರಮಗಳ ತಡೆಗೆ ಕ್ರಮ ವಹಿಸಬೇಕು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಮಾರ್ಗದ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Snacks for Kids: ಇಲ್ಲಿದೆ ಮಕ್ಕಳಿಗೆ ಬಗೆಬಗೆಯ ಪ್ರೊಟೀನ್‌ಯುಕ್ತ ಚೆನ್ನಾ ಸ್ನ್ಯಾಕ್ಸ್‌; ನೀವೇ ಮಾಡಿ ನೋಡಿ!

ಶ್ರಿ ಲಕ್ಷ್ಮೀ ನಾರಾಯಣಸ್ವಾಮಿ ಮತ್ತು ಶ್ರಿ ಆಂಜನೇಯ ಸ್ವಾಮಿ ಜೋಡಿ ರಥೋತ್ಸವ ಹಿನ್ನಲೆಯಲ್ಲಿ ನಾನಾ ಕಾರ್ಯಕ್ರಮಗಳು ನಡೆಯಲಿವೆ. ಏ. 14ರಂದು ಹನುಮಂತೋತ್ಸವ, ಏ.15ರಂದು ಗರುಡೋತ್ಸವ, ರಾತ್ರಿ 10 ಗಂಟೆಗೆ ಉಡಿತುಂಬುವ ಕಾರ್ಯಕ್ರಮ, ಏ.16ರಂದು ಬಿಳಿ ಆನೆ ಉತ್ಸವ, ಏ. 18ರಂದು ಪೂರ್ಣಾಹುತಿ, ಕಂಕಣ ವಿಸರ್ಜನೆ, ವಸಂತೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಇದೇ ವೇಳೆ ಉಪ ತಹಸೀಲ್ದಾರ್‌ ಮತ್ತು ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಮತ್ತು ಶ್ರಿ ಆಂಜನೇಯ ದೇವಸ್ಥಾನದ ಆಡಳಿತಾಧಿಕಾರಿ ನಾಗರಾಜ್ ಎಚ್. ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ: Vijayanagara News: ಕೊಟ್ಟೂರಿನಲ್ಲಿ ನಿವೃತ್ತ ಶಿರಸ್ತೇದಾರ್‌ ಲೀಲಾ ಎಸ್.ಗೆ ಬೀಳ್ಕೊಡುಗೆ

ಸಭೆಯಲ್ಲಿ ಹೊಸಪೇಟೆ ತಹಸೀಲ್ದಾರ್‌ ಶ್ರುತಿ ಎಂ., ಮರಿಯಮ್ಮನಹಳ್ಳಿ ಪಿಎಸ್‌ಐ ಮೌನೇಶ, ಜೆಸ್ಕಾಂನ ದಯಾನಂದ ಜೆ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಭಿಯಂತರರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ಇತರರು ಇದ್ದರು.

Exit mobile version