Site icon Vistara News

Vijayanagara News: ಹಂಪಿಯಲ್ಲಿ ಸಾಂಪ್ರದಾಯಿಕ ಉಡುಗೆ ಧರಿಸಿ ದೇವರ ದರ್ಶನ ಪಡೆಯಲು ಜಿಲ್ಲಾಡಳಿತದಿಂದ ಜಾಗೃತಿ

Awareness by the district administration to wear traditional dress to have darshan of God in Hampi

ಹೊಸಪೇಟೆ: ಪ್ರಸಿದ್ಧ ಪ್ರವಾಸಿ ತಾಣವಾದ ವಿಜಯನಗರ ಜಿಲ್ಲೆಯ ಹಂಪಿಗೆ (Hampi) ಬರುವ ಭಕ್ತಾದಿಗಳಲ್ಲಿ (Devotees) ಭಕ್ತಿ ಭಾವನೆ ಮೂಡಿಸುವ ಸದುದ್ದೇಶದಿಂದ (Vijayanagara News) ಜಿಲ್ಲಾಡಳಿತವು ಹೊಸ ಹಜ್ಜೆ ಇರಿಸಿದೆ.

ಡಿಸಿ ಎಂ.ಎಸ್.ದಿವಾಕರ್‌ ಅವರು ಶುಕ್ರವಾರ ಹಂಪಿಗೆ ತೆರಳಿ ಶಾಸಕ ಎಚ್.ಆರ್.ಗವಿಯಪ್ಪ ಅವರೊಂದಿಗೆ ಹಂಪಿಯ ಶ್ರೀ ವಿರುಪಾಕ್ಷೇಶ್ವರನ ಸನ್ನಿಧಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದರು. ಜೀನ್ಸ್ ಪ್ಯಾಂಟ್ ಮತ್ತು ಬರಮೋಡ ತೊಟ್ಟು ಬಂದ ಭಕ್ತರೊಂದಿಗೆ ಆತ್ಮೀಯವಾಗಿ ಮಾತನಾಡಿದರು.

ಹಂಪಿಯು ಬರೀ ಪ್ರವಾಸಿ ತಾಣವಲ್ಲ, ಅದು ಶ್ರೀ ವಿರುಪಾಕ್ಷೇಶ್ವರ ದೇವರ ಪವಿತ್ರ ತಾಣವೂ ಆಗಿದೆ ಎಂದು ಮನವರಿಕೆ ಮಾಡಿದರು. ಸಾಂಪ್ರದಾಯಿಕ ಶೈಲಿಯ ಬಟ್ಟೆ ಧರಿಸಿ ದೇವರ ದರ್ಶನ ಪಡೆಯಲು ತಿಳಿಸಿ ಜನಜಾಗೃತಿ ಮೂಡಿಸಿದರು.

ಇದನ್ನೂ ಓದಿ: Karnataka Weather: ಕಡಿಮೆ ಆಯಿತೇ ಚಳಿ? ಯಾವ ಜಿಲ್ಲೆಯಲ್ಲಿ ಹೇಗಿದೆ ವಾತಾವರಣ?

ಹಂಪಿಯ ಶ್ರೀ ವಿರುಪಾಕ್ಷೇಶ್ವರ ದೇವಾಲಯಕ್ಕೆ ತೆರಳಿದ ವೇಳೆ ಜಿಲ್ಲಾಧಿಕಾರಿಗಳು ಭಕ್ತರಿಗೆ, ಪ್ರವಾಸಿಗರಿಗೆ ಪಂಚೆ, ಶಲ್ಯ ನೀಡಿದರು. ತುಂಬುಡುಪು ಧರಿಸಿ ದೇವಸ್ಥಾನ ಪ್ರವೇಶಿಸುವಂತೆ ಮಾಡಿದರು. ಈ ಮೂಲಕ ಜನರಲ್ಲಿ ದೇವಾಲಯದ ಬಗ್ಗೆ ಭಕ್ತಿ ಭಾವನೆ ಬರುವಂತೆ ಇತರರಿಗೆ ಪ್ರೇರೇಪಣೆ ನೀಡಿ ಗಮನ ಸೆಳೆದರು.

ಬಹಳ ದಿನಗಳ ಬೇಡಿಕೆ

ಹಂಪಿಯು ಪ್ರವಾಸಿ ತಾಣದ ಜತೆಗೆ ಸುಪ್ರಸಿದ್ಧ ಭಕ್ತಿಯ ಕೇಂದ್ರವೂ ಆಗಿದೆ. ಆದರೆ, ಕೆಲವು ಪ್ರವಾಸಿಗರು ಹಂಪಿಗೆ ಬಂದಾಗ ಬರಮೋಡ ಮತ್ತು ಜೀನ್ಸ್ ಪ್ಯಾಂಟ್‌ನಂತಹ ಉಡುಗೆ ಧರಿಸಿಯೇ ಶ್ರೀವಿರುಪಾಕ್ಷೇಶ್ವರನ ದೇವಸ್ಥಾನ ಪ್ರವೇಶಿಸುತ್ತಿದ್ದುದು ಸಾಮಾನ್ಯವಾಗಿತ್ತು. ಇದನ್ನು ಸಾರ್ವಜನಿಕರು ಅನೇಕ ಭಾರಿ ಪ್ರಶ್ನಿಸಿದ್ದರು. ಹೀಗಾಗಿ ಅನೇಕ ದಿನಗಳ ಸಾರ್ವಜನಿಕರ ಬೇಡಿಕೆಯನ್ನು ಪರಿಗಣನೆಗೆ ತೆಗೆದುಕೊಂಡ ಜಿಲ್ಲಾಡಳಿತವು ಅಗತ್ಯ ಕ್ರಮವಹಿಸಿ ಹೊಸ ಪರಂಪರೆಗೆ ಅವಕಾಶ ಕಲ್ಪಿಸಿದೆ.

ದೇವಸ್ಥಾನದ ಸೇವೆಗೆ ಗಣಕೀಕರಣ

ದೇವಸ್ಥಾನದಲ್ಲಿ ಭಕ್ತಿಯ ಸೇವೆಗಳಿಗೆ ಭೌತಿಕವಾಗಿ ರಸೀದಿ ನೀಡಿ ಹಣ ಪಡೆಯುವ ವ್ಯವಸ್ಥೆ ಇತ್ತು. ಇದನ್ನು ಇದೀಗ ಸಂಪೂರ್ಣವಾಗಿ ಗಣಕೀಕರಣಗೊಳಿಸುವುದಕ್ಕೆ ಸಹ ಜಿಲ್ಲಾಧಿಕಾರಿಗಳು ವಿಶೇಷ ಕ್ರಮ ವಹಿಸಿದರು. ಮೊದಲನೇಯದಾಗಿ ಶಾಸಕರಿಂದಲೇ ಹಣ ಪಡೆದು ರಸೀದಿ ನೀಡಿ ಸೇವೆಗೆ ಜಿಲ್ಲಾಧಿಕಾರಿಗಳು ಅವಕಾಶ ಕಲ್ಪಿಸಿದರು.ಇದರಿಂದ ಸೋರಿಕೆ ತಡೆದು ದೇವಸ್ಥಾನಕ್ಕೆ ಹೆಚ್ಚಿನ ಆದಾಯ ಬರುವಂತಾಗಲಿದೆ.

ಇದನ್ನೂ ಓದಿ: Ind vs Eng : ಮೊದಲ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಭಾರತಕ್ಕೆ 127 ರನ್ ಮುನ್ನಡೆ

ಮೆಟಲ್ ಡಿಟೆಕ್ಟರ್ ಅಳವಡಿಸಲು ಕ್ರಮ

ಹಂಪಿ ಮತ್ತು ಹಂಪಿಯ ವಿರುಪಾಕ್ಷೇಶ್ವರ ದೇವಸ್ಥಾನಕ್ಕೆ ಪ್ರತಿ ದಿನ ಲಕ್ಷಕ್ಕೂ ಹೆಚ್ಚು ಭಕ್ತರು ಬರುತ್ತಿದ್ದು, ಇದರಿಂದಾಗಿ ದೇವಸ್ಥಾನದ ಆವರಣದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನದಲ್ಲಿ ಮೆಟಲ್ ಡಿಟೆಕ್ಟರನ್ನು ಅಳವಡಿಸಲು ಸಹ ಜಿಲ್ಲಾಡಳಿತದಿಂದ ಕ್ರಮ ವಹಿಸಲಾಯಿತು.

ಹಂಪಿಯು ಪ್ರವಾಸಿ ತಾಣದ ಜತೆಗೆ ಭಕ್ತಿಯ ಶ್ರದ್ಧಾ ಕೇಂದ್ರವಾಗಿದೆ. ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಸಾಂಪ್ರದಾಯಿಕ ಶೈಲಿಯ ಉಡುಪು ಧರಿಸಿ ದೇವರ ದರ್ಶನ ಪಡೆಯುವ ಸದುದ್ದೇಶದಿಂದ ಜನರಿಗೆ ವಿಶೇಷ ಸಂದೇಶ ಹೋಗುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ವಿಶೇಷ ಕ್ರಮ ವಹಿಸಿದ್ದೇವೆ. ದೇವರ ದರ್ಶನ ವೇಳೆಯಲ್ಲಿ ದೇವಸ್ಥಾನದಲ್ಲಿ ಪಂಚೆ, ಶಲ್ಯ ಪಡೆಯಲು ಯಾವುದೇ ಶುಲ್ಕ ನಿಗದಿಪಡಿಸಿಲ್ಲ ಎಂದರು.

ಇದನ್ನೂ ಓದಿ: Tea And Coffee With Meals: ಊಟ ತಿಂಡಿ ಜೊತೆಜೊತೆಗೆ ಚಹಾ ಕಾಫಿ ಹೀರುವ ಅಭ್ಯಾಸ ಒಳ್ಳೆಯದೇ, ಕೆಟ್ಟದ್ದೇ?

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಮಹಮದ್ ಅಲಿ ಅಕ್ರಮ ಷಾ ಹಾಗೂ ಹಂಪಿ ಗ್ರಾಮಸ್ಥರು ಮತ್ತು ಪ್ರವಾಸಿಗರು ಹಾಗು ಅಧಿಕಾರಿಗಳು ಇದ್ದರು.

Exit mobile version