ಹೊಸಪೇಟೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಆಚರಣೆ (Gandhi Jayanti) ಅಂಗವಾಗಿ ಗಾಂಧೀಜಿಯವರ ಬದುಕು, ಜೀವನ ಹಾಗೂ ಹೋರಾಟಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ (Essay Competition) ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಮತ್ತು ಪ್ರಮಾಣ ಪತ್ರಗಳನ್ನು ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್. ವಿತರಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಹಾಗೂ ತೃತೀಯ 1 ಸಾವಿರ ರೂ. ನಗದು ಪುರಸ್ಕಾರ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಇದನ್ನೂ ಓದಿ: Highway Road : ಹೈವೇನಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಹುಷಾರ್; ಇನ್ಮುಂದೆ ವಿಡಿಯೊದಲ್ಲಿ ಸಿಕ್ಕಿಬಿಳ್ತಿರಿ!
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ನಮಗೆ ನೀಡಿದ್ದ ಗಾಂಧೀಜಿಯವರಿಗೆ ಸಂಬಂಧಿಸಿದ ವಿಷಯಗಳು ನಮಗೆ ಹೆಚ್ಚಿನ ಜ್ಞಾನಾರ್ಜನೆಗೆ ಸಹಕಾರಿ ನೀಡಿತು. ಪ್ರಬಂಧಕ್ಕೆ ಸಂಬಂಧಿಸಿದಂತೆ ವಿಷಯಗಳ ಬಗ್ಗೆ ಮಾಹಿತಿ ಕಲೆಹಾಕುವಾಗ ನಮಗೆ ಗಾಂಧೀಜಿಯವರ ಮತ್ತಷ್ಟು ವಿಚಾರಗಳು ತಿಳಿದು ಬಂದಿತು ಎಂದು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸ್ಮಯೋರ್ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿ.ಭೂಮಿಕಾ ಹಾಗೂ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಬಿ.ಕಲ್ಪನಾ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಇದನ್ನೂ ಓದಿ: Karnataka Weather Forecast : ನಾಳೆ ದಕ್ಷಿಣದಲ್ಲಿ ದುರ್ಬಲ; ಉತ್ತರ, ಕರಾವಳಿಯಲ್ಲಿ ಸಾಮಾನ್ಯ ಮಳೆ
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ತಹಸೀಲ್ದಾರ್ ಮೇಘಾ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.