Site icon Vistara News

Vijayanagara News: ಕೊಟ್ಟೂರಿನಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಸ್‌ಗಳ ಸಮಾಲೋಚನಾ ಸಭೆ

Clerk Cum Data Entry Operators District Level Consultative Meeting at Kottur

ಕೊಟ್ಟೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಸ್‌ (Clerk Cum Data Entry Operators) ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಮಟ್ಟದ ಮುಖಂಡರ ನೇತೃತ್ವದಲ್ಲಿ ವಿಜಯನಗರ ಜಿಲ್ಲಾಮಟ್ಟದ ಸಮಾಲೋಚನಾ ಸಭೆಯನ್ನು ಪಟ್ಟಣದ ನಿವೃತ್ತ ಸರ್ಕಾರಿ ಶಿಕ್ಷಕರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ರಾಜ್ಯ ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಭೀಮರೆಡ್ಡಿ ಪೊಲೀಸ್ ಪಾಟೀಲ್ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಸಭೆಯಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳ ಕುಂದು ಕೊರತೆಗಳ ಬಗ್ಗೆ ಹಾಗೂ ಸಂಘದಿಂದ ಇಲ್ಲಿಯವರೆಗೆ ಆಗಿರುವ ಕಾರ್ಯಗಳ ಬಗ್ಗೆ ಮತ್ತು ಮುಂದೆ ಸಂಘದಿಂದ ಆಗಬೇಕಾದ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ ಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದನ್ನೂ ಓದಿ: Asia Cup 2023 : ಏಷ್ಯಾ ಕಪ್​ ಫೈನಲ್ ಪಂದ್ಯ ಪಲ್ಲೆಕೆಲೆಗೆ ಶಿಫ್ಟ್​

ಸಂಘದ ರಾಜ್ಯಾಧ್ಯಕ್ಷ ಭೀಮರೆಡ್ಡಿ ಪೊಲೀಸ್ ಪಾಟೀಲ್ ಮಾತನಾಡಿ, ಸರ್ಕಾರದ ಹಂತದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್ ಕಂ ಡಿಇಓ ಗಳ ಕೆಲಸದ ಒತ್ತಡ ಕಡಿಮೆ ಮಾಡಲು ಇನ್ನೊಬ್ಬ ಡಿ ಇ ಓ ನೇಮಕ ಮಾಡಲು ಮತ್ತು ಡಿ ಇ ಓ ಗಳಿಗೆ ಪ್ರಸ್ತುತ ತ್ರೈಮಾಸಿಕವಾಗಿ ಆಗುವ ವೇತನ ಬದಲು ಪ್ರತಿ ತಿಂಗಳು ವೇತನ ಪಾವತಿಯ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಬಗ್ಗೆ ಹಾಗೂ ಇನ್ನಿತರ ಬೇಡಿಕೆಗಳ ಬಗ್ಗೆ ಸರ್ಕಾರದ ಹಂತದಲ್ಲಿ ಗಮನಸೆಳೆದಿರುವುದಾಗಿ ಅವರು ತಿಳಿಸಿದರು.

ಇದನ್ನೂ ಓದಿ: US Open 2023: ಯುಎಸ್‌ ಓಪನ್‌ ಜಯದ ಬಳಿಕ ವಿಶೇಷ ಟಿ ಶರ್ಟ್‌ ಧರಿಸಿ ಮನ ಗೆದ್ದ ಜೋಕೊವಿಕ್‌

ಈ ಸಂದರ್ಭದಲ್ಲಿ ಸಂಘದ ರಾಜ್ಯ ಸಮಿತಿ ತಾಂತ್ರಿಕ ಸಹಾಯಕ ಅಶೋಕ್ ಬಿ, ಜಿಲ್ಲಾ ಅಧ್ಯಕ್ಷ ಪ್ರಕಾಶ್ ಎಚ್. , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ಶ್ರೀನಿವಾಸ್, ಜಿಲ್ಲಾ ಖಜಾಂಚಿ ಪತ್ರಿಬಸಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ. ಸ್ವತಂತ್ರ ಕುಮಾರ್ ಹಾಗೂ ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕು ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಕ್ಲರ್ಕ್ ಡಾಟಾ ಎಂಟ್ರಿ ಆಪರೇಟರ್‌ಗಳು ಪಾಲ್ಗೊಂಡಿದ್ದರು.

Exit mobile version