ಕೊಟ್ಟೂರು: ಎರಡು ಸಾವಿರ ವರ್ಷಗಳ ಇತಿಹಾಸವನ್ನ ಹೊಂದಿರುವ ಕನ್ನಡ ಸಾಹಿತ್ಯ (Kannada Literature) ಕ್ಷೇತ್ರಕ್ಕೆ ವಚನಕಾರರ ಕೊಡುಗೆಯೂ ಅಪಾರವಾಗಿದೆ ಎಂದು ನಿಂಬಳಗೇರೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ವೀರಭದ್ರಪ್ಪ (Vijayanagara News) ತಿಳಿಸಿದರು.
ಪಟ್ಟಣದ ತುಂಗಭದ್ರ ಶಿಕ್ಷಣ ಕಾಲೇಜಿನಲ್ಲಿ ಬುಧವಾರ ತಾಲೂಕು ಕಸಾಪ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿ, ಮಾತನಾಡಿದರು.
ಸಾಹಿತ್ಯದಲ್ಲಿ ವಚನ ಸಾಹಿತ್ಯ ವಿಶೇಷವಾಗಿದೆ ಎಂದ ಅವರು, ಸಮಾಜದಲ್ಲಿ ಕೈಗೊಂಡಿದ್ದ ಕಾಯಕಕ್ಕೆ ಆದ್ಯತೆ ನೀಡಿದ್ದ ವಚನಕಾರರು, ಬಸವಣ್ಣನವರ ಕಾಯಕವೇ ಕೈಲಾಸ ಎಂಬ ತತ್ವವನ್ನು ಅಳವಡಿಸಿಕೊಂಡಿದ್ದರು. 12ನೇ ಶತಮಾನದ ಬಸವಾದಿ ಎಲ್ಲ ಶರಣರು ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: Job Alert: ಗಮನಿಸಿ; ಜಲಮಂಡಳಿಯ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ಇಲ್ಲಿದೆ ಸಂಪೂರ್ಣ ವಿವರ
ಕಾರ್ಯಕ್ರಮವನ್ನು ಕಸಾಪ ಗೌರವ ಕಾರ್ಯದರ್ಶಿ ಎಸ್.ರಾಜಣ್ಣ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ದೇವರಮನಿ ಕೊಟ್ರೇಶ ಮಾತನಾಡಿ, ದತ್ತಿ ಉಪನ್ಯಾಸಗಳ ಮೂಲಕ ಶರಣರ, ವಚನಕಾರರ, ಸಾಹಿತಿಗಳ ಪರಿಚಯ ಹಾಗೂ ಅವರ ಕಾರ್ಯಕ್ಷೇತ್ರದ ಸಾಧನೆಯನ್ನು ಇಂದಿನ ಪೀಳಿಗೆಗೆ ತಿಳಿಸಿಕೊಡುವ ಯತ್ನ ಕಸಾಪದ್ದಾಗಿದೆ. ತಾಲೂಕಿನ ಕಾಲೇಜು, ಪ್ರೌಢಶಾಲೆಗಳಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿಮಾನ ಮೂಡಿಸಲಾಗುತ್ತಿದೆ ಎಂದರು.
ಇದನ್ನೂ ಓದಿ: IPL 2024: ಐಪಿಎಲ್ ಟ್ರೋಫಿಯೊಂದಿಗೆ ಕಂಗೊಳಿಸಿದ 10 ತಂಡದ ನಾಯಕರು
ಈ ಸಂದರ್ಭದಲ್ಲಿ ಪ್ರಾಚಾರ್ಯ ಎಸ್.ಎಂ.ರವಿಕುಮಾರ, ಕಸಾಪ ಸದಸ್ಯರಾದ ಈಶ್ವರಪ್ಪ ತುರಕಾಣಿ, ರಾಜೇಂದ್ರಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಸಾಪ ಕಾರ್ಯದರ್ಶಿ ಅರವಿಂದ ಬಸಾಪುರ, ವಿದ್ಯಾರ್ಥಿ ಎಚ್.ಸಂಜಯ ನಿರ್ವಹಿಸಿದರು.