Site icon Vistara News

Vijayanagara News: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಸಮರ್ಪಕ ಅನುಷ್ಠಾನಕ್ಕೆ ಡಿಸಿ ಸೂಚನೆ

Vijayanagara DC M S Diwakar instructs for proper implementation of Kannada bhasha samagra abhivrudhi adhiniyama

ಹೊಸಪೇಟೆ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022 ಹಾಗೂ ತಿದ್ದುಪಡಿಯ ಅಧಿನಿಯಮ-2024ನ್ನು ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿ ಸಭೆ (Vijayanagara News) ನಡೆಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿ ಎಂ.ಎಸ್.ದಿವಾಕರ್‌ ಮಾತನಾಡಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024ಕ್ಕೆ 2024ರ ಫೆಬ್ರುವರಿ ತಿಂಗಳಲ್ಲಿ ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಭಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳತಕ್ಕದ್ದು ಎಂದು ಈ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024ರಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: KL Rahul: ಐಪಿಎಲ್​ಗೆ ಕೆ.ಎಲ್​ ರಾಹುಲ್ ಫಿಟ್; ನಾಯಕನಾಗಿ ಕಣಕ್ಕೆ

ವಿಜಯನಗರ ಜಿಲ್ಲೆಯಾದ್ಯಂತ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022 ಹಾಗೂ ತಿದ್ದಿಪಡಿ ಅಧಿನಿಯಮ-2024ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಯನ್ನು ಜಾರಿಗೊಳಿಸಲು ವಿಜಯನಗರ ಜಿಲ್ಲೆಯ ಜಿಲ್ಲಾಮಟ್ಟದ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಈ ಜಿಲ್ಲಾಮಟ್ಟದ ಸಮಿತಿಯು ಸಕ್ರಿಯವಾಗಿರಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಕೈಗೊಂಡ ಕ್ರಮದ ಬಗ್ಗೆ ವರದಿಯನ್ನು ರಾಜ್ಯ ಸಮಿತಿಗೆ ನಿಗದಿತ ಅವಧಿಯೊಳಗೆ ಸಲ್ಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ವಿಸ್ತಾರ Explaienr: ಹಲವು ಅಣುಬಾಂಬ್‌ ಏಕಕಾಲಕ್ಕೆ ಕೊಂಡೊಯ್ಯಬಲ್ಲ Agni-V ಕ್ಷಿಪಣಿ! ಏನಿದರ ವಿಶೇಷತೆ?

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಸಿದ್ದಲಿಂಗೇಶ ರಂಗಣ್ಣವರ ಹಾಗೂ ಸಮಿತಿಯ ಇತರೆ ಸದಸ್ಯರು ಉಪಸ್ಥಿತರಿದ್ದರು.

Exit mobile version