ಹೊಸಪೇಟೆ: ಸಿರಿಧಾನ್ಯಗಳು (Millets) ಉತ್ತಮ ಪೋಷಕಾಂಶಗಳನ್ನು ಹೊಂದಿರುವುದರ ಜತೆಗೆ ಆರೋಗ್ಯ ಸಮಸ್ಯೆಗಳನ್ನು (Health Problems) ನಿವಾರಿಸುವ ಶಕ್ತಿಯನ್ನು ಸಹ ಹೊಂದಿವೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.
ನಗರದ ಎಪಿಎಂಸಿ ಸರ್ಕಲ್ ಬಳಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳದ ನಿಮಿತ್ತ ಕೃಷಿ ಇಲಾಖೆಯಿಂದ ನಗರದಲ್ಲಿ ಸಿರಿಧಾನ್ಯಗಳ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಿರಿಧಾನ್ಯಗಳ ಕೃಷಿಯು ಕೇವಲ ಸಾಂಪ್ರದಾಯಿಕ ಕೃಷಿಯಲ್ಲ. ಇದೊಂದು ವಿಶೇಷ ಹಾಗೂ ವಿಶಿಷ್ಟ ಕೃಷಿಯಾಗಿದೆ. ಕಡಿಮೆ ಮಳೆ ಇದ್ದರೂ ಸಹ ಈ ಬೆಳೆಗಳನ್ನು ಬೆಳೆಯಬಹುದು. ಇವುಗಳ ಬೆಳವಣಿಗೆಗೆ ರಾಸಾಯನಿಕ ಗೊಬ್ಬರಗಳ ಬಳಕೆ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: WhatsApp: 71 ಲಕ್ಷ ಭಾರತೀಯ ಖಾತೆಗಳನ್ನು ಡಿಲಿಟ್ ಮಾಡಿದ ವಾಟ್ಸಾಪ್!
ಸಿರಿಧಾನ್ಯಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಹಾಗೂ ಇವುಗಳಿಂದ ತಯಾರಿಸಬಹುದಾದ ಖಾದ್ಯಗಳು, ಅವುಗಳಲ್ಲಿರುವ ಪೌಷ್ಟಿಕತೆಯ ಬಗ್ಗೆ ಮನವರಿಕೆ ಮಾಡುವ ಕೆಲಸ ಇಲಾಖಾ ವತಿಯಿಂದ ಆಗಬೇಕಾಗಿದೆ ಎಂದರು.
ಇದನ್ನೂ ಓದಿ: Bengaluru Film Festival: ಫೆ.29 ರಿಂದ ಮಾ.7 ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ಸದಾಶಿವ ಪ್ರಭು, ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್, ತಾಪಂ ಇಒ ಉಮೇಶ್, ಸಹಾಯಕ ನಿರ್ದೇಶಕ ವಾಮದೇವ ಕೊಳ್ಳಿ ಸೇರಿದಂತೆ ಇತರತು ಪಾಲ್ಗೊಂಡಿದ್ದರು.