Site icon Vistara News

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Vijayanagara DC MS Diwakar meeting with officials of various departments

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಜೂನ್ 21ರಂದು ಜಿಲ್ಲಾಮಟ್ಟದ‌ ಅಧಿಕಾರಿಗಳೊಂದಿಗೆ ಕೆಡಿಪಿ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲನೆಯಯೊಂದಿಗೆ ಶಿಸ್ತನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅಧಿಕಾರಿಗಳಿಗೆ ಸೂಚನೆ (Vijayanagara News) ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ಆಗಿರುವುದರಿಂದ ಮಹತ್ವದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮರ್ಪಕವಾದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಇಲಾಖೆಗಳ ಪ್ರಗತಿಗೆ ಪೂರಕವಾಗಿ ಮುಖ್ಯಮಂತ್ರಿಗಳು ಬಯಸುವ ಯಾವುದೇ ಮಾಹಿತಿಯನ್ನು ತಕ್ಷಣ ಕೊಡುವ ಹಾಗೆ ಎಲ್ಲಾ ಮಾಹಿತಿಯೊಂದಿಗೆ ಅಧಿಕಾರಿಗಳು ಬರಬೇಕು ಎಂದು ಡಿಸಿ ನಿರ್ದೇಶನ ನೀಡಿದರು.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಮಾಡಬೇಕು. ಕಚೇರಿಯ ಇನ್ನೀತರ ಅಧಿಕಾರಿ ಸಿಬ್ಬಂದಿಯನ್ನು ನಿಯೋಜಿಸದೇ ಜಿಲ್ಲಾಮಟ್ಟದ ಅಧಿಕಾರಿಗಳೇ ಸಭೆಗೆ ಖುದ್ದು ಹಾಜರಾಗಬೇಕು. ನಿಗದಿತ ಸಮಯಕ್ಕೆ ಸಭೆಗೆ ಹಾಜರಾಗಬೇಕು. ಸಭೆಯಲ್ಲಿ ಕೇಳುವ ಪ್ರಶ್ನೆಗಳಿಗೆ ಅನವಶ್ಯಕವಾಗಿ ವಿವರಣೆ ನೀಡದೇ ನೇರವಾಗಿ ಉತ್ತರಿಸಬೇಕು. ಗೊಂದಲಕ್ಕೆ ಅವಕಾಶವಿಲ್ಲದ ಹಾಗೆ ವಸ್ತುನಿಷ್ಠವಾಗಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜನಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು, ಅಧಿಕಾರಿಗಳು, ಪತ್ರಕರ್ತರಿಗೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಮಾಡಬೇಕು. ‌ಪಾಸು ಪಡೆದ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಈ ಬಾರಿ ಮುಂಗಾರು ಮಳೆಗಳು ಉತ್ತಮವಾಗಿ ಸುರಿದಿವೆ. ಬಿತ್ತನೆಯು ಕಾರ್ಯಾರಂಭವಾಗಿದೆ. ಹೋಬಳಿ, ತಾಲೂಕುವಾರು ಮಳೆ ವಿವರ, ಬಿತ್ತನೆ ಗುರಿ, ಬಿತ್ತನೆ ಬೀಜ ಮತ್ತು ರಸಗೊಬ್ಬರದ ದಾಸ್ತಾನು ಸೇರಿ ಈ ಮಾಹಿತಿಯನ್ನು ಸ್ಪಷ್ಟವಾಗಿ ನೀಡಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ಮಹತ್ವದ ಕಾಮಗಾರಿಗಳು, ಅವುಗಳ ಪ್ರಗತಿ, ಟೆಂಡರ್ ಹಂತದಲ್ಲಿರುವ ಕಾಮಗಾರಿಗಳ ಮಾಹಿತಿಯನ್ನು ಅನುಷ್ಠಾನಾಧಿಕಾರಿಗಳು ಸಭೆಗೆ ಸರಿಯಾಗಿ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Bajaj CNG Bike: ವಿಶ್ವದ ಮೊದಲ ಸಿಎನ್‌ಜಿ ಬೈಕ್‌; ಬಜಾಜ್‌ನಿಂದ ಜುಲೈ 5ರಂದು ಬಿಡುಗಡೆ

ಸಭೆಯಲ್ಲಿ ಜಿಪಂ ಸಿಇಓ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ, ಜಿಪಂ ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಜೆ.ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Exit mobile version