ಹೊಸಪೇಟೆ: ನಗರಸಭೆಯ ಹಿಂಭಾಗದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಶುಕ್ರವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ (Vijayanagara News) ನಡೆಸಿದರು.
ಮೊದಲಿಗೆ ಆಸ್ಪತ್ರೆಯ ಸುತ್ತಲಿನ ಹೊರಾಂಗಣದಲ್ಲಿ ಸಂಚರಿಸಿ ಸಿಸಿ ರಸ್ತೆ ಕಾಮಗಾರಿಯ ಬಗ್ಗೆ ಪರಿಶೀಲಿಸಿದರು. ಬಳಿಕ ಆಸ್ಪತ್ರೆ ಪ್ರವೇಶಿಸಿ ಅಲ್ಲಿನ ನಾನಾ ವಾರ್ಡ್‌ಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದರು.
ಭದ್ರತಾ ಸೇವೆ ಸೇರಿದಂತೆ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಯನ್ನು ಪಡೆದುಕೊಳ್ಳುವ ಪ್ರಕ್ರಿಯೆ ನಡೆಸುವುದಕ್ಕೆ ಸಂಬಂಧಿಸಿದ ಸಭೆ ನಡೆಸಿ ಅನುಮೋದನೆ ಪಡೆದುಕೊಳ್ಳಲು ಸೂಚನೆ ನೀಡಿದರು.
ಇದನ್ನೂ ಓದಿ: Yadgiri News: ಭಕ್ತ ಸಾಗರದ ಮಧ್ಯೆ ಸಂಭ್ರಮದಿಂದ ಜರುಗಿದ ಶ್ರೀ ವಿಶ್ವಾರಾಧ್ಯರ ರಥೋತ್ಸವ
ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳಿವೆ. ಆದರೆ, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ, ನೌಕರರ ಕೊರತೆಯಾಗಿದೆ. ಕೆಲವು ವಿಭಾಗಗಳಿಗೆ ಉಪಕರಣಗಳ ಕೊರತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಂಕರ ನಾಯಕ್, ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯ ಸದ್ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿ ನೌಕಕರನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆದು ಜನರಿಗೆ ಉತ್ತಮ ಸೇವೆ ನೀಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: Job Alert: ಗುಡ್‌ನ್ಯೂಸ್; 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ; ಇಲ್ಲಿದೆ ವಿವರ
ಮಕ್ಕಳ ರೋಗ ತಜ್ಞರೊಂದಿಗೆ ಜಿಲ್ಲಾಧಿಕಾರಿಗಳು ಇದೇ ವೇಳೆ ಸಮಾಲೋಚನೆ ನಡೆಸಿದರು. ಮಕ್ಕಳ ವಿಭಾಗಕ್ಕೆ ಅವಶ್ಯಕತೆ ಇದ್ದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಸಹ ಒತ್ತು ನೀಡಬೇಕು ಎಂದು ಮಕ್ಕಳ ರೋಗ ತಜ್ಞರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ ಸೇರಿದಂತೆ ಇತರರು ಉಪಸ್ಥಿತರಿದ್ದರು.